Connect with us

Corona

ದೇಶದಲ್ಲಿ 52,972 ಮಂದಿಗೆ ಕೊರೊನಾ ದೃಢ- ಒಂದೇ ದಿನ 771 ಮಂದಿ ಬಲಿ

Published

on

ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ಕಳೆದ 24 ಗಂಟೆಯಲ್ಲಿ 52,972 ಮಂದಿಯಲ್ಲಿ ಕೋವಿಡ್ 19 ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 18,03,696ಕ್ಕೆ ಏರಿಕೆಯಾಗಿದೆ.

ಭಾನುವಾರ ಒಂದೇ ದಿನ 771 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ದೇಶದಲ್ಲಿ 5,79,357 ಸಕ್ರಿಯ ಪ್ರಕರಣಗಳಿದ್ದು, 1,186,203 ಮಂದಿ ಗುಣಮುಖರಾಗಿದ್ದಾರೆ. ದೇಶದಲ್ಲಿ ಇದೂವರೆಗೂ 38,135 ಮಂದಿ ಹೆಮ್ಮಾರಿ ಕೊರೊನಾ ವೈರಸ್‍ಗೆ ಬಲಿಯಾಗಿದ್ದಾರೆ.

ಮಹಾರಾಷ್ಟ್ರ, ತಮಿಳುನಾಡು ಮತ್ತು ಆಂಧ್ರಪ್ರದೇಶದಲ್ಲಿ ಅತೀ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಜೊತೆಗೆ ಅಸ್ಸಾಂ ಮತ್ತು ಕರ್ನಾಟಕ ರಾಜ್ಯದಲ್ಲಿಯೂ ಸೋಂಕು ವೇಗವಾಗಿ ಹರಡುತ್ತಿದೆ. ಭಾರತದಲ್ಲಿ ಚೇತರಿಕೆ ಪ್ರಮಾಣ ಹೆಚ್ಚಾಗುತ್ತಿದ್ದು, ಶೇ.65.8 ರಷ್ಟು ಮಂದಿ ಗುಣಮುಖರಾಗುತ್ತಿದ್ದಾರೆ. ಸದ್ಯ ದೇಶದಲ್ಲಿ ಅನ್‍ಲಾಕ್ 3.O ನಡೆಯುತ್ತಿದೆ.

Click to comment

Leave a Reply

Your email address will not be published. Required fields are marked *