Bengaluru CityLatestMain PostNational

ಕುತೂಹಲದತ್ತ ಮಧ್ಯಪ್ರದೇಶ ಫಲಿತಾಂಶ: ಕೈ, ಕಮಲದ ಮಧ್ಯೆ ನೆಕ್ ಟು ನೆಕ್ ಫೈಟ್

ಭೋಪಾಲ್: ನಿರೀಕ್ಷೆಯಂತೆ ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಮಧ್ಯೆ ನೆಕ್ ಟು ನೆಕ್ ಸ್ಪರ್ಧೆ ಏರ್ಪಟ್ಟಿದೆ.

ಮತ ಎಣಿಕೆಯ ಆರಂಭದಲ್ಲಿ ಕಾಂಗ್ರೆಸ್ ಮುನ್ನಡೆಗಳಿಸಿದಾಗ ಈ ಬಾರಿ ಬಿಜೆಪಿ ಸೋಲಲಿದೆ ಎಂದೇ ವಿಶ್ಲೇಷಿಸಲಾಗಿತ್ತು. ಆದರೆ ಬೆಳಗ್ಗೆ 10 ಗಂಟೆಯ ನಂತರ ಬಿಜೆಪಿಗೆ ಅಲ್ಪ ಮುನ್ನಡೆ ಸಿಕ್ಕಿದೆ. ಬೆಳಗ್ಗೆ 10.15ರ ವೇಳೆ ಬಿಜೆಪಿ 110, ಕಾಂಗ್ರೆಸ್ 108, ಇತರರು 12 ಸ್ಥಾನಗಳಲ್ಲಿ ಮುನ್ನಡೆ ಗಳಿಸಿದ್ದಾರೆ.

15 ವರ್ಷಗಳಿಂದ ಮಧ್ಯಪ್ರದೇಶದಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಒಟ್ಟು 230  ಕ್ಷೇತ್ರಗಳಿದ್ದು,  2013ರ ಚುನಾವಣೆಯಲ್ಲಿ ಬಿಜೆಪಿ 165, ಕಾಂಗ್ರೆಸ್ 58, ಇತರರು 7 ಕ್ಷೇತ್ರಗಳಲ್ಲಿ ಜಯಗಳಿಸಿದ್ದರು.

ಶಿವರಾಜ್ ಸಿಂಗ್ ಚವ್ಹಾಣ್ ಸತತ ಮೂರು ಬಾರಿ ಸಿಎಂ ಆಗಿದ್ದಾರೆ. ಗೋ ಸಂಕರಕ್ಷಣೆಗಾಗಿ ಪ್ರತಿ ಹಳ್ಳಿಗಳಲ್ಲೂ ಗೋಶಾಲೆ ನಿರ್ಮಾಣ, ರಾಮವನ್‍ಗಮನ್ ಪಾದಯಾತ್ರೆ, ಸಿಎಂ ಯಾರಾಗಬೇಕೆಂಬ ಜನಾಭಿಪ್ರಾಯದಲ್ಲಿ ಶಿವರಾಜ್ ಸಿಂಗ್ ಚವ್ಹಾಣ್ ಮುಂಚೂಣಿಯಲ್ಲಿದ್ದರು. ಆದರೆ ಈ ಬಾರಿ ಆಡಳಿತ ವಿರೋಧಿ ಅಲೆ ಇರುವ ಕಾರಣ ಕಾರಣ ಬಿಜೆಪಿ ಸೋಲಾಗಬಹುದು ಎನ್ನುವ ವಿಶ್ಲೇಷಣೆ ಕೇಳಿ ಬಂದಿತ್ತು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Related Articles

Leave a Reply

Your email address will not be published. Required fields are marked *