ಮುಂಬೈ: ವಿರೋಧ ಪಕ್ಷಗಳ ಮೈತ್ರಿ ಕೂಟ INDIA (ಇಂಡಿಯಾ) ಬಿಜೆಪಿ ವಿರುದ್ಧ ಒಗ್ಗಟ್ಟಾಗಿ ಹೋರಾಡಬೇಕಿದೆ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ (Sonia Gandhi) ಕರೆ ನೀಡಿದ್ದಾರೆ.
ಶನಿವಾರ ಮುಂಬೈನಲ್ಲಿ ಐಎನ್‌ಡಿಐಎ (ಇಂಡಿಯಾ) ಒಕ್ಕೂಟದ ಉನ್ನತಮಟ್ಟದ ಸಭೆ ನಡೆಯಿತು. ಸಭೆಯ ಬಳಿಕ ಮಾತನಾಡಿದ ಅವರು, ಬಿಜೆಪಿ (BJP) ವಿರುದ್ಧ ಒಗ್ಗಟ್ಟಾಗಿ ಹೋರಾಡುವಂತೆ ಕರೆ ನೀಡಿದ್ದಾರೆ. ಇದನ್ನೂ ಓದಿ: ಟೆರರಿಸ್ಟ್‌ಗಳು ಎಸ್ಕೇಪ್ ಆಗಲು ಪಾಕ್ ಸೇನೆ ನೆರವು – ಮೂವರು ಭಯೋತ್ಪಾದಕರ ಹೊಡೆದುರುಳಿಸಿದ ಭಾರತೀಯ ಸೇನೆ
Advertisement
Advertisement
ಮೈತ್ರಿಕೂಟದ ಪಕ್ಷಗಳು 2024ರ ಲೋಕಸಭಾ ಚುನಾವಣೆಯಲ್ಲಿ (Lok Sabha Election 2024) ಸಾಧ್ಯವಾದಷ್ಟು ಒಟ್ಟಿಗೆ ಸ್ಪರ್ಧಿಸುವುದಾಗಿ ಹೇಳಿವೆ ಎಂದರಲ್ಲದೇ, ಕೆಲವು ರಾಜ್ಯಗಳಲ್ಲಿ ಸೀಟು ಹಂಚಿಕೆ ವಿಚಾರದಲ್ಲಿ ಅಸಮಾಧಾನ ಸ್ಫೋಟಗೊಳ್ಳುತ್ತಿದೆ ಅನ್ನೋದು ಊಹಾಪೋಹ ಎಂದು ಗೊಂದಲಗಳಿಗೆ ತೆರೆ ಎಳೆದಿದ್ದಾರೆ.
Advertisement
ನಂತರ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ಭಾರತ ದೇಶವು ಕವಲು ದಾರಿಯಲ್ಲಿ ಸಾಗುತ್ತಿದೆ. ಅನೇಕ ಆಂತರಿಕ ಸವಾಲುಗಳನ್ನ ಎದುರಿಸುತ್ತಿದೆ. ಇದಕ್ಕೆ ಮಣಿಪುರದಲ್ಲಿ ಇನ್ನೂ ಹೆಚ್ಚಿನ ಉದ್ವಿಗ್ನತೆ ಸೃಷ್ಟಿಯಾಗುತ್ತಿರುವುದೇ ಸಾಕ್ಷಿಯಾಗಿದೆ. ಮೋದಿ ಸರ್ಕಾರ ಮಣಿಪುರದ ಬೆಂಕಿ ಹರಿಯಾಣದ ನುಹ್ ಜಿಲ್ಲೆಯವರೆಗೆ ತಲುಪೋದಕ್ಕೆ ಅವಕಾಶ ಮಾಡಿಕೊಟ್ಟಿತು. ಇಂತಹ ಘಟನೆಗಳು ಆಧುನಿಕ, ಪ್ರತಿಪರ ಹಾಗೂ ಜಾತ್ಯತೀತ ರಾಷ್ಟ್ರದ ಗೌರವಕ್ಕೆ ಕಳಂಕ ತರುತ್ತಿವೆ ಎಂದು ಕಿಡಿ ಕಾರಿದ್ದಾರೆ.
Advertisement
ದೇಶದ ಆರ್ಥಿಕತೆಯು ಅಪಾಯದಲ್ಲಿದೆ. ಬೆಲೆ ಏರಿಕೆಯಿಂದ ಜನಸಾಮಾನ್ಯರ ಮೇಲೆ ಪರಿಣಾಮ ಬೀರಿದೆ. ಈ ನಡುವೆ ಚೀನಾದ ಅತಿಕ್ರಮಗಳ ಮೇಲೆ ಕೇಂದ್ರ ಸರ್ಕಾರ ನಿರ್ಲಕ್ಷ್ಯ ತೋರುತ್ತಿದ್ದು, ದೇಶದ ಭದ್ರತೆಗೂ ಅಪಾಯವನ್ನುಂಟು ಮಾಡುವ ಸನ್ನಿವೇಶ ತಂದೊಡ್ಡಿದೆ. ಆದರೆ ಕೇಂದ್ರ ಅಮೃತಕಾಲ್ ಹಾಗೂ 3ನೇ ಅತಿದೊಡ್ಡ ಆರ್ಥಿಕ ದೇಶ ಎಂಬ ಖಾಲಿ ಘೋಷಣೆಗಳನ್ನ ಮಾಡುತ್ತ ನೈಜ ಸಮಸ್ಯೆಗಳಿಂದ ಗಮನವನ್ನ ಬೇರೆಡೆಗೆ ಸೆಳೆಯುವ ಪ್ರಯತ್ನ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಇನ್ನೂ 3 ಡಿಸಿಎಂ ಬೇಕು ಅಂತ ರಾಜಣ್ಣ ಕೇಳೋದ್ರಲ್ಲಿ ಏನು ತಪ್ಪಿದೆ: ಜಿ.ಪರಮೇಶ್ವರ್ ಪ್ರಶ್ನೆ
ಇದೇ ವೇಳೆ ಮಧ್ಯಪ್ರದೇಶ, ರಾಜಸ್ಥಾನ, ಛತ್ತೀಸ್‌ಗಢ ವಿಧಾನಸಭಾ ಚುನಾವಣೆ ಮತ್ತು ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಗಳ ಸಿದ್ಧತೆ ಬಗ್ಗೆಯೂ ಚರ್ಚಿಸಲಾಯಿತು. ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಮಾಜಿ ಕೇಂದ್ರ ಸಚಿವರಾದ ಪಿ. ಚಿದಂಬರಂ ಮತ್ತು ಜೈರಾಮ್ ರಮೇಶ್, ಶಶಿ ತರೂರ್, ಸಚಿನ್ ಪೈಲಟ್, ಗೌರವ್ ಗೊಗೊಯ್ ಸೇರಿದಂತೆ ಪ್ರಮುಖರು ಸಭೆಯಲ್ಲಿ ಹಾಜರಿದ್ದರು.
Web Stories