ಬೆಳಗಾವಿ: ಆರ್‌ಎಸ್‌ಎಸ್ (RSS) ಮತ್ತು ಬಜರಂಗದಳ (Bajarang Dal) ನಿಷೇಧ ಚರ್ಚೆ ವಿಚಾರವಾಗಿ ನೂತನ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಅಚ್ಚರಿಯ ಹೇಳಿಕೆಯೊಂದನ್ನು ನೀಡಿದ್ದಾರೆ.
ಬೆಳಗಾವಿಯಲ್ಲಿ (Belagavi) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಸಂಘಟನೆ ನಿಷೇಧ ಮಾಡಿದರೆ ಇನ್ನೊಂದು ಸಂಘಟನೆ ಹುಟ್ಟಿಕೊಳ್ಳುತ್ತದೆ. ಬದಲಾಗಿ ಆರ್‌ಎಸ್‌ಎಸ್‌ನಲ್ಲಿರುವ ದಲಿತರು, ಶೂದ್ರರು ಮತ್ತು ಕೆಳವರ್ಗದವರನ್ನು ಸೆಳೆಯಬೇಕಿದೆ. ಅವರಿಗೆ ಬುದ್ಧ, ಬಸವ, ಅಂಬೇಡ್ಕರ್ ವಿಚಾರಧಾರೆ ತಿಳಿಹೇಳುವ ಪ್ರಯತ್ನ ಮಾಡುತ್ತೇವೆ. ಆರ್‌ಎಸ್‌ಎಸ್‌ನಲ್ಲಿರುವ ದಲಿತರನ್ನು ಸೆಳೆಯುವ ಮೂಲಕ ಅಹಿಂದಾಗೆ ಮತ್ತಷ್ಟು ಶಕ್ತಿ ತುಂಬಬೇಕಿದೆ. ಯಾವುದೇ ಸಂಘಟನೆ ಬ್ಯಾನ್ ಮಾಡುವುದು ನಮಗೆ ಪರಿಹಾರವಲ್ಲ ಎಂದರು. ಇದನ್ನೂ ಓದಿ: ರಾಜ್ಯದ ನೂತನ ಸಚಿವರಿಗೆ ಖಾತೆ ಹಂಚಿಕೆ- ರಾಮಲಿಂಗಾ ರೆಡ್ಡಿಗೆ ಸಾರಿಗೆ ಜೊತೆ ಮುಜರಾಯಿ
ಬಿಜೆಪಿ (BJP) ಸರ್ಕಾರ ಜಾರಿಗೆ ತಂದಿರುವ ಗೋಹತ್ಯೆ, ಮತಾಂತರ ನಿಷೇಧ ಕಾಯ್ದೆ ರದ್ದು ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಈ ಎಲ್ಲಾ ಕಾಯ್ದೆಗಳ ಬಗ್ಗೆ ಚರ್ಚೆ ಆಗಬೇಕು. ತಕ್ಷಣವೇ ನಿಷೇಧ ಕಾಯ್ದೆ ಜಾರಿ ಅಸಾಧ್ಯ. ಈ ಬಗ್ಗೆ ಸರ್ಕಾರ ಹಾಗೂ ಪಕ್ಷದಲ್ಲಿ ಸಾಧಕ ಬಾಧಕಗಳ ಬಗ್ಗೆ ಚರ್ಚೆ ಆಗಬೇಕು. ಸಂಪೂರ್ಣ ಚರ್ಚೆ ಆದ ಮೇಲೆಯೇ ಈ ಸಂಬಂಧ ಸರ್ಕಾರದಿಂದ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಮನೆಯಲ್ಲಿ ಅತ್ತೆ-ಸೊತೆ ಇದ್ರೆ ಯಾರಿಗೆ ದುಡ್ಡು ಹಾಕಬೇಕು, ಮನೆ ಯಜಮಾನಿ ಯಾರು? – ಗ್ಯಾರಂಟಿ ಬಗ್ಗೆ ಡಿಕೆಶಿ ಮಾತು