ನವದೆಹಲಿ: ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಜಯಿಸಿದ್ದ ನೀರಜ್ ಚೋಪ್ರಾ ಅವರು ಪರಮ ವಿಶಿಷ್ಟ ಸೇವಾ ಪದಕಕ್ಕೆ ಭಾಜನರಾಗಿದ್ದಾರೆ.
ಗಣರಾಜ್ಯೋತ್ಸವ ದಿನದಂದು ರಾಷ್ಟ್ರಪತಿ ಭವನದಲ್ಲಿ ರಾಮನಾಥ್ ಕೋವಿಂದ್ ಅವರು ಪದಕ ಪ್ರದಾನ ಮಾಡಲಿದ್ದಾರೆ. ಇದೇ ವೇಳೆ 384 ರಕ್ಷಣಾ ಸಿಬ್ಬಂದಿಗೆ ಶೌರ್ಯ ಪ್ರಶಸ್ತಿ ಹಾಗೂ ವಿವಿಧ ಪ್ರಶಸ್ತಿಗಳನ್ನು ನೀಡಲಿದ್ದಾರೆ. ಇದನ್ನೂ ಓದಿ: ಭಾರತದ ಇಬ್ಬರು ಆಟಗಾರರನ್ನು ಹೊರತು ಪಡಿಸಿದರೆ ಉಳಿದವರ ಬಗ್ಗೆ ಪಾಕಿಸ್ತಾನ ತಲೆಕೆಡಿಸಿಕೊಳ್ಳಲ್ಲ: ಹಫೀಜ್
ಕಳೆದ ವರ್ಷ ನಡೆದ ಟೋಕಿಯೊ ಒಲಿಂಪಿಕ್ಸ್‌ನಲ್ಲಿ 87.58 ಮೀಟರ್ ದೂರ ಜಾವೆಲಿನ್ ಎಸೆಯುವ ಮೂಲಕ ನೀರಜ್ ಚೋಪ್ರಾ ಚಿನ್ನದ ಪದಕ ಜಯಿಸಿ ಇತಿಹಾಸ ನಿರ್ಮಿಸಿದ್ದರು.
ಐತಿಹಾಸಿಕ ಸಾಧನೆಗಾಗಿ ನೀರಜ್ ಚೋಪ್ರಾ ಅವರಿಗೆ ಕ್ರೀಡಾ ಕ್ಷೇತ್ರದ ಅತ್ಯುತ್ತಮ ಪ್ರಶಸ್ತಿಯಾದ ಮೇಜರ್ ಧ್ಯಾನ್‌ಚಂದ್ ಖೇಲ್ ರತ್ನಾ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿತ್ತು. ಇದನ್ನೂ ಓದಿ: ಪ್ರೊ ಕಬಡ್ಡಿಗೆ ಕೊರೊನಾ ಅಡ್ಡಿ – ಇಂದಿನಿಂದ ಜ.28ರ ವರೆಗೆ ಪ್ರತಿದಿನ 1 ಪಂದ್ಯ