ತಿರುವನಂತಪುರಂ: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(NEET)ಯ ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸಿದ ಮಹಿಳೆಯರ ಬ್ರಾಗಳನ್ನು ತೆಗೆಯುವಂತೆ ಸಿಬ್ಬಂದಿ ಒತ್ತಾಯಿಸಿದ್ದಾರೆ ಎಂದು ಆಕ್ರೋಶಗೊಂಡ ತಂದೆ ಇದರ ವಿರುದ್ಧ ತನಿಖೆ ಮಾಡುವಂತೆ ಮನವಿ ಮಾಡಿರುವ ಸುದ್ದಿಯೊಂದು ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನೆಡೆದಿದೆ.
NEET ಪರೀಕ್ಷೆ ಬರೆದ ಮಹಿಳೆಯ ತಂದೆ ಕೊಟ್ಟಾರಕರ ಪೊಲೀಸರಿಗೆ ದೂರು ನೀಡಿದ್ದು, ಚಾತಮಂಗಲಂನಲ್ಲಿರುವ ಪರೀಕ್ಷಾ ಕೊಠಡಿಗೆ ಪ್ರವೇಶಿಸುವ ಮೊದಲು ನನ್ನ ಮಗಳು ಸೇರಿದಂತೆ ಮಹಿಳಾ ನೀಟ್ ಆಕಾಂಕ್ಷಿಗಳು ತಮ್ಮ ಒಳಉಡುಪುಗಳನ್ನು ತೆಗೆಯುವಂತೆ ಸಿಬ್ಬಂದಿ ಹೇಳಿದ್ದಾರೆ. ಇದರಿಂದ ಪರೀಕ್ಷೆ ಬರೆಯಲು ಮಹಿಳಾ ಆಕಾಂಕ್ಷಿಗಳಿಗೆ ಮಾನಸಿಕವಾಗಿ ಹಿಂಸೆಯಾಗಿದೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಬೊಮ್ಮಾಯಿ ಅಲ್ಲ, ಮೋದಿ ನಿತ್ಕೊಂಡ್ರು ನಾನು ಸ್ಪರ್ಧೆ ಮಾಡ್ತೀನಿ: ಮಲ್ಲಿಕಾರ್ಜುನ್
Advertisement
Advertisement
ಈ ಹಿನ್ನೆಲೆ ಮಾನವ ಹಕ್ಕುಗಳ ಆಯೋಗವು ಕೊಲ್ಲಂ ಗ್ರಾಮಾಂತರ ಎಸ್‍ಪಿಗೆ ಈ ಬಗ್ಗೆ ತನಿಖೆ ನಡೆಸಿ 15 ದಿನಗಳಲ್ಲಿ ವರದಿ ಸಲ್ಲಿಸುವಂತೆ ಸೂಚಿಸಿದೆ.
Advertisement
ದೂರಿನಲ್ಲಿ ಏನಿದೆ?
ಪ್ರಾಥಮಿಕ ತಪಾಸಣೆಯ ನಂತರ, ಲೋಹ ಶೋಧಕದಿಂದ ಮಹಿಳೆಯರ ಒಳಉಡುಪಿನ ಕೊಕ್ಕೆ ಪತ್ತೆಯಾಯಿತು. ಈ ವೇಳೆ ಸಿಬ್ಬಂದಿ ಅದನ್ನು ತೆಗೆದುಹಾಕಲು ಕೇಳಿದರು. ಇದೇ ರೀತಿ ಸುಮಾರು 90 ಪ್ರತಿಶತ ಮಹಿಳಾ ಅಭ್ಯರ್ಥಿಗಳು ತಮ್ಮ ಒಳಉಡುಪುಗಳನ್ನು ತೆಗೆದು ಸ್ಟೋರ್ ರೂಂನಲ್ಲಿ ಹಾಕಬೇಕಾಯಿತು. ಇದಾದ ಬಳಿಕ ಪರೀಕ್ಷೆಯನ್ನು ನೀಡುವಾಗ ಅಭ್ಯರ್ಥಿಗಳು ಮಾನಸಿಕವಾಗಿ ತೊಂದರೆಗೀಡಾಗಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಕಾಂಗ್ರೆಸ್ ಸತ್ಯ ಹೇಳಿದ ದಿನ ಅವರಿಗೆ ಸಾವು ಬರುತ್ತೆ: ಕಾರಜೋಳ ಕಿಡಿ
Advertisement
ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(ಎನ್‍ಟಿಎ) ಡ್ರೆಸ್ ಕೋಡ್‍ನಲ್ಲಿ ಒಳಉಡುಪುಗಳನ್ನು ತೆಗೆದುಹಾಕಲು ಸೂಚಿಸಿಲ್ಲ ಎಂದು ದೂರುದಾರರು ಹೇಳಿದ್ದಾರೆ.