ಬೆಂಗಳೂರು: ದೇಶಾದ್ಯಂತ ಇಂದು ಮೆಡಿಕಲ್ ಹಾಗೂ ದಂತ ವೈದ್ಯಕೀಯ ಸೀಟುಗಳಿಗೆ ನಡೆಯುವ ನೀಟ್ ಪರೀಕ್ಷೆ ನಡೆಯಲಿದೆ.
ದೇಶಾದ್ಯಂತ ಒಟ್ಟು 13,26,725 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕರ್ನಾಟಕದಲ್ಲಿ 187 ಸೆಂಟರ್ ಗಳಿದ್ದು, ಬೆಂಗಳೂರು, ಬೆಳಗಾವಿ, ದಾವಣಗೆರೆ, ಗುಲ್ಬರ್ಗ, ಹುಬ್ಬಳ್ಳಿ, ಮಂಗಳೂರು, ಮೈಸೂರು, ಉಡುಪಿ ಹಾಗೂ ಹೊಸದಾಗಿ ಧಾರವಾಡ ಕೇಂದ್ರಗಳಲ್ಲೂ ಪರೀಕ್ಷೆ ನಡೆಯಲಿದೆ.
Advertisement
ಈ ಬಾರಿ 11 ಭಾಷೆಗಳಲ್ಲಿ ಪರೀಕ್ಷೆ ನಡೆಯಲಿದ್ದು, ಒಂದೇ ಮಾದರಿಯ ಪ್ರಶ್ನೆಪತ್ರಿಕೆಗಳನ್ನ ನೀಡಲಿದ್ದಾರೆ. ಬೆಳಗ್ಗೆ 10.30 ಕ್ಕೆ ಪರೀಕ್ಷೆ ಆರಂಭವಾಗಲಿದ್ದು, 9.30ಕ್ಕೆ ಎಲ್ಲಾ ವಿದ್ಯಾರ್ಥಿಗಳು ಕೊಠಡಿಯ ಒಳಗೆ ಹಾಜರಾಗಿರಬೇಕು. ತಡವಾಗಿ ಬಂದ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವುದು ಅನುಮಾನ ಎನ್ನಲಾಗಿದೆ.
Advertisement
ಪರೀಕ್ಷೆಗೆ ಅನೇಕ ವಸ್ತುಗಳನ್ನು ನಿಷೇಧಿಸಲಾಗಿದೆ. ಅಷ್ಟೇ ಅಲ್ಲದೇ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಡ್ರೆಸ್ ಕೋಡ್ ಇದ್ದು, ವಿದ್ಯಾರ್ಥಿಗಳಿಗೆ ಈಗಾಗಲೇ ಮಾಹಿತಿ ನೀಡಲಾಗಿದೆ.
Advertisement