ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರತಿಭಟನೆಯ ನಡುವೆ ಪರೀಕ್ಷಾ ಸಂಸ್ಥೆಯ 47 NTA ಅಧಿಕಾರಿಗಳನ್ನು ವಜಾಗೊಳಿಸಲಾಗಿದೆ.
ಪರೀಕ್ಷಾ ಸಂಸ್ಥೆಯಿಂದ ಕನಿಷ್ಠ 47 ಜನರನ್ನು ತೆಗೆದುಹಾಕಲಾಗಿದೆ. ಅವರಲ್ಲಿ ಕೆಲವರ ವಿರುದ್ಧವೂ ಕ್ರಮ ಕೈಗೊಳ್ಳಲಾಗುವುದು ಎಂದು ಮೂಲಗಳು ತಿಳಿಸಿವೆ. ಆದರೆ ಅವರ ಪಾತ್ರಗಳು ಅಥವಾ ಹುದ್ದೆಗಳ ಬಗ್ಗೆ ವಿವರಗಳನ್ನು ನೀಡಿಲ್ಲ.
ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ವ್ಯಾಪಕ ಪ್ರತಿಭಟನೆ ವ್ಯಕ್ತವಾದ ಬೆನ್ನಲ್ಲೇ, ಮುಂದಿನ ತಿಂಗಳಲ್ಲಿ ಸರ್ಕಾರವು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ)ಯನ್ನು ಸಂಪೂರ್ಣವಾಗಿ ಆಧುನೀಕರಿಸಲಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ, ದೆಹಲಿಯ ಜಂತರ್ ಮಂತರ್ ಸೇರಿದಂತೆ ದೇಶಾದ್ಯಂತ ಸಿಜೆಪಿ ಕಾರ್ಯಕರ್ತರು ಹಾಗೂ ಯುವಜನತೆ ಪ್ರತಿಭಟನೆ, ಸಂಸತ್ ಒಳಗೆ, ಹೊರಗೆ ವಿಪಕ್ಷಗಳ ಹೋರಾಟದ ಫಲವಾಗಿ 47 ದಿನಗಳ ಬಳಿಕ ಪ್ರಧಾನಿ ನರೇಂದ್ರ ಮೋದಿ 3 ದಿನಗಳ ಅಂತರದಲ್ಲಿ 3 ಬಾರಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.
ಮೊದಲು ಎನ್‌ಡಿಎ ಸಭೆಯಲ್ಲಿ ಕಳವಳ, ನಂತರ ಎಕ್ಸ್ ಪೋಸ್ಟ್ನಲ್ಲಿ ಭರವಸೆ ಕೊಟ್ಟಿದ್ದ ಪಿಎಂ, ನಿನ್ನೆ ಮಧ್ಯರಾತ್ರಿ ಸೆಲ್ಫಿ ವಿಡಿಯೋ ಮಾಡಿ, ಎಕ್ಸ್ನಲ್ಲಿ ಅಪ್ಲೋಡ್ ಮಾಡಿದ್ದಾರೆ. ಸುಮಾರು 2 ನಿಮಿಷ 56 ನಿಮಿಷಗಳ ಈ ವಿಡಿಯೋದಲ್ಲಿ, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ಫಾಸ್ಟ್ಟ್ರಾö್ಯಕ್ ಕೋರ್ಟ್‌ಗಳನ್ನು ಸ್ಥಾಪಿಸಲಾಗುವುದು ಅಂತ ಭರವಸೆ ನೀಡಿದ್ದರು. ಜೊತೆಗೆ ಕಠಿಣ ಕಾನೂನು ಜಾರಿಗೊಳಿಸುವ ಭರವಸೆ ಕೊಟ್ಟಿದ್ದರು. ಅದರಂತೆ, ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕಠಿಣ ತಿದ್ದುಪಡಿ ಮಸೂದೆಗೆ ಕೇಂದ್ರ ಸರ್ಕಾರ ಮುಂದಾಗಿದೆ.
ಸೋಮವಾರ ಅಧಿವೇಶನದಲ್ಲಿ ಮಸೂದೆ ಮಂಡನೆ ಆಗಲಿದ್ದು, ಅಂದೇ ಅಂಗೀಕರಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ. ಇದಕ್ಕಾಗಿ ಸಾರ್ವಜನಿಕ ಪರೀಕ್ಷೆಗಳ ಕಾಯ್ದೆ-2024ಕ್ಕೆ ತಿದ್ದುಪಡಿಗೆ ಸಂಪುಟ ಸಭೆ ಒಪ್ಪಿಗೆ ಸೂಚಿಸಿದೆ. ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿಗೆ ಸುಧಾರಣೆ ತರಲಾಗ್ತಿದ್ದು, 47 ಸಿಬ್ಬಂದಿಯನ್ನು ಹೊರಹಾಕಲಾಗಿದೆ. ಅಧಿಕಾರಿಗಳ ಮೇಲೆ ಕ್ರಿಮಿನಲ್ ಕೇಸ್ ಹಾಕುವ ಸಾಧ್ಯತೆ ಇದೆ.
