ನವದೆಹಲಿ: ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ( NEET Paper Leaks) ವಿವಾದಕ್ಕೆ ಸಂಬಂಧಿಸಿದಂತೆ ಎನ್‌ಟಿಎಗೆ ಸುಪ್ರೀಂ ಕೋರ್ಟ್ (Supreme Court) ತರಾಟೆಗೆ ತೆಗೆದುಕೊಂಡಿದೆ.
ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಕೋರ್ಟ್ ಉನ್ನತಮಟ್ಟದ ಮೇಲ್ವಿಚಾರಣಾ ಸಮಿತಿಗಳ ಹೊರತಾಗಿಯೂ ಇಷ್ಟು ದೊಡ್ಡ ಪ್ರಮಾದ ಹೇಗೆ ಸಂಭವಿಸಿತು ಎಂದು ಪ್ರಶ್ನೆ ಮಾಡಿದೆ. ನಾವು ಯುವಜನರನ್ನು ನಿರಾಸೆಗೊಳಿಸಬಾರದು ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೂಚನೆ ಕೊಟ್ಟಿದೆ. ಇದನ್ನೂ ಓದಿ: 10 ಲಕ್ಷಕ್ಕೆ NEET ಪ್ರಶ್ನೆಪತ್ರಿಕೆ ಖರೀದಿಸಿದ್ದ ತಂದೆ – ಮಗ ಗಳಿಸಿದ್ದು 720ಕ್ಕೆ 107 ಅಂಕ, ಏಕೆ ಹೀಗಾಯ್ತು?
ಕೇಂದ್ರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಸರ್ಕಾರವು ಯುವಜನರ ಆತಂಕಗಳ ಬಗ್ಗೆ ಗಂಭೀರವಾಗಿ ಕಾಳಜಿ ವಹಿಸುತ್ತಿದೆ. ಯಾವುದೇ ಲೋಪವಾಗದಂತೆ ನೋಡಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ವೈಯಕ್ತಿಕವಾಗಿ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ ಎಂದು ಪೀಠಕ್ಕೆ ತಿಳಿಸಿದರು.
ಇತ್ತ ನೀಟ್ ವಿದ್ಯಾರ್ಥಿಗಳಿಗೆ ದೆಹಲಿ ಸರ್ಕಾರ ಬಿಗ್ ರಿಲೀಫ್ ಕೊಟ್ಟಿದೆ. ದೆಹಲಿ ಸಿಎಂ ರೇಖಾ ಗುಪ್ತ ಜೂನ್ 21ರಂದು ನಡೆಯುವ ನೀಟ್ ಪರೀಕ್ಷೆಗೆ ಅಭ್ಯರ್ಥಿಗಳಿಗೆ ಉಚಿತ್ ಬಸ್ ಪ್ರಯಾಣ ಘೋಷಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಯಾವುದೇ ವಿದ್ಯಾರ್ಥಿ ಪರೀಕ್ಷೆ ದಿನ ಅನಾನುಕೂಲತೆ ಎದುರಿಸಬಾರದು. ಕಠಿಣ ಪರಿಶ್ರಮ ಮತ್ತು ದೃಢಸಂಕಲ್ಪ ಅವರನ್ನು ಯಶಸ್ಸಿಗೆ ಕೊಂಡೊಯ್ಯಲಿ ಎಂದು ಹಾರೈಸಿದ್ದಾರೆ. ಇದನ್ನೂ ಓದಿ: NEET UG ಪ್ರಶ್ನೆಪತ್ರಿಕೆ ಸೋರಿಕೆ ಕೇಸ್ – ಎನ್‌ಟಿಎ ಎಕ್ಸ್‌ಪರ್ಟ್ ಬಂಧನ
