ಮೈಸೂರು: ಕಾಂಗ್ರೆಸ್ (Congress) ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಮುಂದಾಗಿದೆ ಎಂದು ಸಂಸದ ಯದುವೀರ್ ಒಡೆಯರ್ (Yaduveer Wadiyar) ಹೇಳಿದ್ದಾರೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ (NEET Paper Leak) ಸಂಬಂಧ ಪ್ರತಿಭಟನೆ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನೀಟ್ ಪ್ರಶ್ನೆ ಪತ್ರಿಕೆ ಬಹಿರಂಗ ಪ್ರಕರಣವನ್ನು ಕೇಂದ್ರ ಗಂಭೀರವಾಗಿ ಪರಿಗಣಿಸಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಮರುಪರೀಕ್ಷೆ ನಡೆದು ಫಲಿತಾಂಶವೂ ಪ್ರಕಟವಾಗಿದೆ. ಆದರೂ ಇದೇ ವಿಚಾರ ಮುಂದಿಟ್ಟುಕೊಂಡು ಕಾಂಗ್ರೆಸ್ ಅರಾಜಕತೆ ಸೃಷ್ಟಿಸಲು ಹೊರಟಿದೆ. ಪ್ರತಿಭಟನೆ ಮೂಲಕ ದಿಕ್ಕು ತಪ್ಪಿಸುವ ಕೆಲಸವಾಗಿದೆ. ಇದು ಕಾಂಗ್ರೆಸ್‌ನ ವ್ಯವಸ್ಥಿತ ಷಡ್ಯಂತ್ರವಾಗಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಕಾಕ್ರೋಚ್‌ಗಳ ಜೊತೆ ಪ್ರತಿಭಟನೆಗೆ ಧುಮುಕಿದ ಅಸ್ಸಾಂ ಬಿಜೆಪಿ ನೇತೃತ್ವದ ಸರ್ಕಾರದ ಸಚಿವರ ಪುತ್ರಿ
ನೆರೆಯ ಶ್ರೀಲಂಕಾ, ಬಾಂಗ್ಲಾದೇಶ, ನೇಪಾಳದಲ್ಲಿ ಆದಂತೆ ಇಲ್ಲಿಯೂ ಮಾಡಲು ಹೊರಟಿದ್ದಾರೆ. ಆದರೆ ದೇಶದ ಜನತೆ ಇದಕ್ಕೆ ಮಣಿಯುವುದಿಲ್ಲ. ನಮ್ಮ ಪ್ರಜಾಪ್ರಭುತ್ವ ವ್ಯವಸ್ಥೆ ಗಟ್ಟಿಯಾಗಿದೆ. ಜನರು ಏನೇ ಮಾಡಬೇಕಾದರೂ ಮತದಾನದ ಮೂಲಕ ಉತ್ತರ ಕೊಡುತ್ತಾರೆ. ಬೇರೆ ದೇಶದಲ್ಲಿ ಅರಾಜಕತೆ ಉಂಟು ಮಾಡಿದಂತೆ ನಮ್ಮ ದೇಶದಲ್ಲಿ ಮಾಡಲು ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡದಿದ್ರೆ ಕಠಿಣ ನಿಲುವು – ನಿರ್ಣಾಯಕ ಸಭೆಗೂ ಮುನ್ನ CJP ವಾರ್ನಿಂಗ್
ಮೈಸೂರಿನ ಎನ್‌ಆರ್ ಕ್ಷೇತ್ರದಲ್ಲಿ ಎಸ್‌ಐಆರ್ ಪ್ರಕ್ರಿಯೆ ಪ್ರಾಮಾಣಿಕವಾಗಿ ನಡೆಯುವ ಬಗ್ಗೆ ಅನುಮಾನವಿದೆ. ಕಳೆದ ಮೂರು ದಶಕಗಳಿಂದ ಅಲ್ಲಿ ಏನಾಗ್ತಿದೆ ಎಂಬುದು ಎಲ್ಲರಿಗೂ ಗೊತ್ತಿದೆ. ನೆರೆಯ ಕೇರಳ ಸೇರಿದಂತೆ ಬೇರೆ ರಾಜ್ಯಗಳ ಜನರನ್ನು ಎನ್‌ಆರ್ ಕ್ಷೇತ್ರದ ಮತದಾರರ ಪಟ್ಟಿಗೆ ಸೇರಿಸುತ್ತಾ ಬಂದಿದ್ದಾರೆ. ಅದು ಈಗಲೂ ಮುಂದುವರಿಯುವ ಸಾಧ್ಯತೆ ಇದೆ. ಎನ್‌ಆರ್ ಕ್ಷೇತ್ರದಲ್ಲಿ ಎಸ್‌ಐಆರ್ ಪ್ರಕ್ರಿಯೆ ಪ್ರಾಮಾಣಿಕವಾಗಿ ನಡೆಯುವ ಸಾಧ್ಯತೆ ಕಡಿಮೆ ಎಂದರು. ಇದನ್ನೂ ಓದಿ: ಬೆಂಗಳೂರು ಸ್ವಚ್ಛತೆಗೆ ಹೊಸ ಹೆಜ್ಜೆ; 100 ಬ್ಲಾಕ್ ಸ್ಪಾಟ್‌ಗಳ ಸ್ವಚ್ಛತಾ ಅಭಿಯಾನ ಪೂರ್ಣ
