ಪಾಟ್ನಾ: ನೀಟ್ ಪರೀಕ್ಷಾ (NEET Exam Leak) ಅಕ್ರಮ ಸೇರಿ ಸರಣಿ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ಪಾಟ್ನಾದಲ್ಲಿ ಪ್ರತಿಭಟನಾಕಾರರ(Protest) ವಿರುದ್ಧ ದಾಖಲಿಸಲಾಗಿದ್ದ ಪ್ರಕರಣಗಳನ್ನು ಹಿಂಪಡೆಯಲು ಬಿಹಾರ ಸರ್ಕಾರ (Bihar Government) ಮಹತ್ವದ ನಿರ್ಧಾರ ಕೈಗೊಂಡಿದೆ.
ಈ ಕುರಿತು ಬಿಹಾರ ಗೃಹ ಇಲಾಖೆಯ ವಿಶೇಷ ಕಾರ್ಯದರ್ಶಿ (IPS) ಕ್ಷತ್ರನೀಲ್ ಸಿಂಗ್ ಅವರು ಅಧಿಕೃತ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಪ್ರಕರಣಗಳನ್ನು ಕೈಬಿಡಲಾಗಿದೆ ಎಂದು ತಿಳಿಸಿದ್ದಾರೆ.
ಹೇಳಿಕೆಯಲ್ಲಿ ಏನಿದೆ?
ಜುಲೈ 26 ಸಂಜೆ 6 ಗಂಟೆಗಿಂತ ಮೊದಲು ರಾಜ್ಯಾದ್ಯಂತ ನಡೆದ ನೀಟ್ ಪ್ರತಿಭಟನೆಯಲ್ಲಿ ಭಾಗವಹಿಸಿದ ಯಾವುದೇ ವ್ಯಕ್ತಿಯ ವಿರುದ್ಧ ಸರ್ಕಾರ ಯಾವುದೇ ಶಿಕ್ಷಾರ್ಹ ಅಥವಾ ಪ್ರತೀಕಾರದ ಕಾನೂನು ಕ್ರಮಗಳನ್ನು ಕೈಗೊಳ್ಳುವುದಿಲ್ಲ. ಇದನ್ನೂ ಓದಿ: ನೀಟ್ ಪ್ರತಿಭಟನೆಯಲ್ಲಿ 2,873 ಕ್ರಿಮಿನಲ್‌ಗಳು – ಆಘಾತಕಾರಿ ಮಾಹಿತಿ ಬಿಚ್ಚಿಟ್ಟ ದೆಹಲಿ ಪೊಲೀಸ್ ವರದಿ
ಈ ನಿರ್ದಿಷ್ಟ ಅವಧಿಗಿಂತ ಮೊದಲು ದಾಖಲಾದ ಪ್ರಕರಣಗಳಿಗೆ ಸಂಬಂಧಿಸಿದಂತೆ, ಭವಿಷ್ಯದಲ್ಲೂ ಅವರ ವಿರುದ್ಧ ನೇರವಾಗಲಿ ಅಥವಾ ಪರೋಕ್ಷವಾಗಲಿ ಯಾವುದೇ ಕಾನೂನು ಕ್ರಮ ಜರುಗಿಸುವುದಿಲ್ಲ ಎಂದು ಬಿಹಾರ ಸರ್ಕಾರ ಸ್ಪಷ್ಟಪಡಿಸಿದೆ.
