ನವದೆಹಲಿ: ಜೂನ್ 21 ರಂದು ನೀಟ್–ಯುಜಿ (NEET-UG 2026) ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯು (NTA) ಅಧಿಕೃತವಾಗಿ ತಿಳಿಸಿದೆ.
ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಮೇ 3ರಂದು ನಡೆದಿದ್ದ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿದ್ದರಿಂದ ಈಗ ಮರು ಪರೀಕ್ಷೆಯ ದಿನಾಂಕವನ್ನು ಪ್ರಕಟಿಸಲಾಗಿದೆ. ಇದನ್ನೂ ಓದಿ: ಭಾರತದಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಮಾಡಿದ್ರೆ ಏನು ಶಿಕ್ಷೆ?
📢 NEET (UG) 2026 — Examination Date Announced
The National Testing Agency, with the approval of the Government of India, has scheduled the re-examination of NEET (UG) 2026 on Sunday, 21 June 2026.
Candidates and parents are requested to rely only on the official channels of NTA.…— National Testing Agency (@NTA_Exams) May 15, 2026
ಕೇಂದ್ರೀಯ ತನಿಖಾ ದಳ ಈಗ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ನಡೆಸುತ್ತಿದೆ. ಹೆಚ್ಚಿನ ವಿವರಗಳಿಗಾಗಿ ವಿದ್ಯಾರ್ಥಿಗಳು ಮತ್ತು ಪೋಷಕರು NTA ಅಧಿಕೃತ ವೆಬ್‌ಸೈಟ್ ಅಥವಾ ಸಾಮಾಜಿಕ ಜಾಲತಾಣವನ್ನು ಮಾತ್ರ ಅವಲಂಬಿಸಬೇಕೆಂದು ಮನವಿ ಮಾಡಿದೆ.

