ಕಳೆದ ಮೂರ್ನಾಲ್ಕು ದಿನದಿಂದ ಸೋಷಿಯಲ್ ಮೀಡಿಯಾದಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್ (Ashwini Puneeth Rajkumar) ಬಗ್ಗೆ ಸಾಕಷ್ಟು ಚರ್ಚೆ ಆಗುತ್ತಿದೆ. ಗಜಪಡೆ ಹೆಸರಿನ ಖಾತೆಯಲ್ಲಿ ಅಶ್ವಿನಿ ಅವರ ಬಗ್ಗೆ ಕೆಟ್ಟದ್ದಾಗಿ ನಿಂದಿಸಲಾಗಿದೆ. ಅನೇಕರು ಈ ಕುರಿತಂತೆ ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಇದನ್ನೇ ಹಿನ್ನೆಲೆಯಾಗಿಟ್ಟುಕೊಂಡು ಅಶ್ವಿನಿ ಅವರು ಮಾತನಾಡಿದ್ದಾರೆ. ನೆಗೆಟಿವ್ ಅಥವಾ ಪಾಟಿಸಿವ್ ಏನೇ ಬಂದರೂ, ಸಮಾನಾಗಿ ಸ್ವೀಕರಿಸಿ ಮುಂದೆ ಸಾಗಬೇಕು ಎಂದು ಪರೋಕ್ಷವಾಗಿ ಅವರು ಈ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
Advertisement
ಅಶ್ವಿನಿ ಅವರಿಗೆ ಅವಹೇಳನ ಮಾಡಿರುವ ವಿಷಯಕ್ಕೆ ಸಾರ್ವಜನಿಕರಿಂದಲೂ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಅನೇಕರು ಈ ಕುರಿತಂತೆ ಪ್ರತಿಕ್ರಿಯೆ ನೀಡಿದ್ದಾರೆ. ಅದರಲ್ಲೂ ಮಹಿಳಾ ಬರಹಗಾರರು ಮತ್ತು ಕಲಾವಿದರು ಧ್ವನಿ ಎತ್ತಿದ್ದಾರೆ. ಈ ಕುರಿತಂತೆ ತಮ್ಮದೇ ಆದ ನಿಲುವನ್ನು ವ್ಯಕ್ತ ಪಡಿಸಿದ್ದಾರೆ.
Advertisement
Advertisement
ಇವರ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದವರ ವಿರುದ್ಧ ಈಗಾಗಲೇ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ (FIR) ದಾಖಲಿಸಲಾಗಿದೆ. ಆರ್‌ಸಿಬಿ (RCB) ಸೋಲಿಗೆ ಅಶ್ವಿನಿ ಅವರೇ ಕಾರಣ ಎಂದು ನಿಂದಿಸಿದ ಅನಾಮಿಕ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.
Advertisement
ಕಳೆದ ಮಾರ್ಚ್ ತಿಂಗಳು 19ನೇ ತಾರೀಕಿನಂದು ಬೆಂಗಳೂರಿನ ಆರ್‌ಸಿಬಿ ಅನ್‌ಬಾಕ್ಸ್ ಇವೆಂಟ್‌ನಲ್ಲಿ ಅಶ್ವಿನಿ ಅವರನ್ನು ಆಹ್ವಾನಿಸಿದ್ದರು. ಅದರಂತೆ ಅವರು ಆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದಾದ ನಂತರ ಐಪಿಎಲ್ ಪ್ರಾರಂಭವಾಗಿ ಆರ್‌ಸಿಬಿ ತಂಡ ಕೆಲ ಪಂದ್ಯಗಳಲ್ಲಿ ಸೋತಿದೆ. ದರ್ಶನ್ ಅಭಿಮಾನಿ ಎಂದು ಹೇಳಿಕೊಂಡಿರುವ ‘ಗಜಪಡೆ’ ಹೆಸರಿನ ಸೋಷಿಯಲ್ ಮೀಡಿಯಾ ಖಾತೆಯಲ್ಲಿ, ಅಶ್ವಿನಿ ಅವರು ಆರ್‌ಸಿಬಿ ಕಾರ್ಯಕ್ರಮಕ್ಕೆ ಬಂದಿದ್ದಕ್ಕೆ ತಂಡ ಸೋತಿದೆ ಎಂದು ನಿಂದಿಸಲಾಗಿದೆ. ಅಭಿಮಾನಿಗಳಿಂದ ವಿರೋಧ ವ್ಯಕ್ತವಾಗುತ್ತಿದ್ದಂತೆ `ಸುದೀಪ್ ಅಭಿಮಾನಿ’ ಎಂದು ಖಾತೆಯ ಹೆಸರು ಬದಲಿಸಿದ್ದಾರೆ. ಇದರ ವಿರುದ್ಧ ಅಪ್ಪು ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ಕಾನೂನು ಸಮರ ಸಾರಿದ್ದಾರೆ.
ಅಶ್ವಿನಿ ಬಗ್ಗೆ ಬರೆದ ಕೀಳು ಮಟ್ಟದ ಪೋಸ್ಟ್‌ಗೆ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಅದರಲ್ಲೂ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸ್ ಕಮಿಷನರ್ ಭೇಟಿ ಮಾಡಿ ಎಫ್‌ಐಆರ್ ದಾಖಲಿಸಿದ್ದಾರೆ.