ಬೆಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ (Social Media) ತಮ್ಮನ್ನು ನಿಂದಿಸಿದವರ ವಿರುದ್ಧ ಪೊಲೀಸರು (Police) ಕ್ರಮ ಕೈಗೊಳ್ಳದಿರುವುದರ ವಿರುದ್ಧ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಬೇಸರ ವ್ಯಕ್ತಪಡಿಸಿದ್ದಾರೆ.
ಪೊಲೀಸ್ ಆಯುಕ್ತ ಸೀಮಂತ್‌ಕುಮಾರ್ ಅವರನ್ನು ಭೇಟಿಯಾದ ಬಳಿಕ ಪೋಸ್ಟ್ ಮಾಡಿ ವಿಜಯಲಕ್ಷ್ಮಿ (Vijayalakshmi Darshan) ಅತೃಪ್ತಿ ತೋಡಿಕೊಂಡಿದ್ದಾರೆ. ನಮ್ಮ ದೇಶದಲ್ಲಿ ವ್ಯವಸ್ಥೆ ಮತ್ತು ಕಾನೂನು ಎಲ್ಲರಿಗೂ ಒಂದೇ ಎಂದು ನಾನು ಯಾವಾಗಲೂ ನಂಬಿದ್ದೇನೆ. ಆದರೆ ಪ್ರಾಮಾಣಿಕವಾಗಿ ಹೇಳಬೇಕೆಂದರೆ ಈ ಅನುಭವವು ಆ ನಂಬಿಕೆಯನ್ನು ಪ್ರಶ್ನಿಸುವಂತೆ ಮಾಡಿದೆ ಎಂದಿದ್ದಾರೆ. ಇದನ್ನೂ ಓದಿ: ಮಥುರಾದಲ್ಲಿ ಸನ್ನಿ ಲಿಯೋನ್ ʻDJ Nightʼ ನ್ಯೂ ಇಯರ್ ಕಾರ್ಯಕ್ರಮ ರದ್ದು

