ಬೆಂಗಳೂರು: ಲಾರಿ (Lorry) ಚಾಲಕನ ನಿರ್ಲಕ್ಷ್ಯದಿಂದ 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳು (Electric Poles) ಧರೆಗುರುಳಿದ ಘಟನೆ ಚಿಕ್ಕಬಾಣಾವರ-ಹೆಸರಘಟ್ಟ ಮುಖ್ಯರಸ್ತೆಯಲ್ಲಿ ನಡೆದಿದೆ.
ಶನಿವಾರ ನಸುಕಿನ ಜಾವ 1:30ರ ವೇಳೆಗೆ ಘಟನೆ ನಡೆದಿದೆ. ಎಂ ಸ್ಯಾಂಡ್ ಲಾರಿ ಚಾಲಕ ನಿದ್ದೆ ಕಣ್ಣಿನಲ್ಲಿ ಟಿಪ್ಪರ್ ಎತ್ತಿದ್ದಾನೆ. ಈ ವೇಳೆ ಲಾರಿ ಟಾಪ್‌ಗೆ ವಿದ್ಯುತ್ ವೈರ್ ಸಿಕ್ಕಿಹಾಕಿಕೊಂಡಿದೆ. ಇದನ್ನು ಗಮನಿಸದೆ ಚಾಲಕ ಲಾರಿ ಚಲಾಯಿಸಿದ್ದಾನೆ. ಈ ಪರಿಣಾಮ 20ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ಜಖಂಗೊಂಡು ನೆಲಕ್ಕುರಿಳಿವೆ. ಇದನ್ನೂ ಓದಿ: ಅಂತಾರಾಷ್ಟ್ರೀಯ, ದೇಶೀಯ ಕ್ರಿಕೆಟ್‌ಗೆ ನಿವೃತ್ತಿ ಹೇಳಿದ ಶಿಖರ್ ಧವನ್
ಚಿಕ್ಕಬಾಣಾವರ ಮುಖ್ಯರಸ್ತೆಯಲ್ಲೇ ಕಂಬಗಳು ಬಿದ್ದಿದ್ದು, ರಸ್ತೆ ತುಂಬೆಲ್ಲಾ ಲಾರಿಯಲ್ಲಿದ್ದ ಎಂ ಸ್ಯಾಂಡ್ ಬಿದ್ದಿದೆ. ಸದ್ಯ ಜೆಸಿಬಿ ಮುಖಾಂತರ ರಸ್ತೆಗೆ ಬಿದ್ದಿದ್ದ ಎಂ ಸ್ಯಾಂಡ್ ತೆರವುಗೊಳಿಸಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆಗೆ ಕಾರಣವಾಗಿದ್ದ ಲಾರಿ ಚಾಲಕ ಮಣಿಯನ್ನು ಚಿಕ್ಕಬಾಣಾವರ (Chikkabanavara) ಸಂಚಾರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: MUDA Scam | ಪ್ರಾಸಿಕ್ಯೂಷನ್ ಸಮರದಲ್ಲಿ ಸೈಲೆಂಟ್ ಅಸ್ತ್ರ ಪ್ರಯೋಗಿಸಿದ ರಾಹುಲ್ ಗಾಂಧಿ!