ಹುಬ್ಬಳ್ಳಿ: ನೇಹಾ ಹಿರೇಮಠ (Neha Hiremath) ಹಾಗೂ ಅಂಜಲಿ (Anjali) ಹತ್ಯೆ ಪ್ರಕರಣವು ಹುಬ್ಬಳ್ಳಿಯಲ್ಲಿ (Hubballi) ಜನರ ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಲೋಪ ಎಸಗಿದ ಆರೋಪದಲ್ಲಿ ಹು-ಧಾ ಡಿಸಿಪಿಯನ್ನು ಅಮಾನತು ಮಾಡಲಾಗಿದೆ.
ಐಪಿಎಸ್ ಅಧಿಕಾರಿ, ಹುಬ್ಬಳ್ಳಿ-ಧಾರವಾಡ ಡಿಸಿಪಿ ರಾಜೀವ್ ಅವರನ್ನು ಅಮಾನತು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹುಬ್ಬಳ್ಳಿಗೆ ಗೃಹ ಸಚಿವರ ಭೇಟಿಗೂ ಮುನ್ನ ಅಮಾನತು ಆದೇಶ ಹೊರಬಿದ್ದಿದೆ. ಸೋಮವಾರ ಹುಬ್ಬಳ್ಳಿಗೆ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಭೇಟಿ ನೀಡಲಿದ್ದಾರೆ. ಇದನ್ನೂ ಓದಿ: ಮಗನ ತಪ್ಪಿನಿಂದಾಗಿ ಬಾಡಿಗೆ ಮನೆಯಿಂದ ನಮ್ಮನ್ನು ಹೊರಹಾಕಿದ್ರು: ಅಂಜಲಿ ಕೊಲೆ ಆರೋಪಿ ತಾಯಿ ಕಣ್ಣೀರು
ಏಪ್ರಿಲ್ 18 ರಂದು ನೇಹಾ ಹಿರೇಮಠ ಅವರ ಭೀಕರ ಹತ್ಯೆಯಾಗಿತ್ತು. ಕಾಲೇಜು ಆವರಣದಲ್ಲೇ ಫಯಾಜ್ ಎಂಬಾತ ವಿದ್ಯಾರ್ಥಿನಿ ನೇಹಾಳಿಗೆ ಚಾಕುವಿನಿಂದ ಹಲವು ಬಾರಿ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದ. ಇದು ರಾಜ್ಯದೆಲ್ಲೆಡೆ ಜನಾಕ್ರೋಶಕ್ಕೆ ಕಾರಣವಾಗಿತ್ತು.
ನೇಹಾ ಹತ್ಯೆ ಪ್ರಕರಣ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಅಂಜಲಿ ಎಂಬಾಕೆ ಹತ್ಯೆಯಾಗಿದೆ. ಅಂಜಲಿ ಮನೆಗೆ ನುಗ್ಗಿದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಎರಡೂ ಪ್ರಕರಣಗಳ ಆರೋಪಿಗಳನ್ನು ಬಂಧಿಸಲಾಗಿದೆ. ಇದನ್ನೂ ಓದಿ: ಕೊಲೆ ಆರೋಪಿ ಗೋವಾ, ಮಹಾರಾಷ್ಟ್ರದಲ್ಲಿ ತಲೆಮರೆಸಿಕೊಳ್ಳಲು ಪ್ಲ್ಯಾನ್ ಮಾಡಿದ್ದ: ರೇಣುಕಾ ಸುಕುಮಾರ