ಮಗನಿಗೆ ಯಾವ ಶಿಕ್ಷೆ ಕೊಟ್ರೂ ಸ್ವಾಗತಿಸ್ತೀನಿ- ನೇಹಾ ಹಂತಕ ಫಯಾಜ್‌ ತಂದೆ ಕಣ್ಣೀರು

Public TV
1 Min Read
FAYAZ FATHER

– ಮುಂದೆ ಇಂತಹ ಕ್ರೂರ ಕೆಲಸಕ್ಕೆ ಯಾರೂ ಕೈಹಾಕ್ಬಾರ್ದು

ಹುಬ್ಬಳ್ಳಿ: ನನ್ನ ಮಗನಿಗೆ ಅತ್ಯಂತ ಕಠಿಣ ಶಿಕ್ಷೆಯಾಗಲಿ, ಮುಂದೆ ಇಂಥ ಕ್ರೂರ ಕೆಲಸಕ್ಕೆ ಯಾರೂ ಕೈ ಹಾಕಬಾರದು ಅಂಥ ಶಿಕ್ಷೆ ನನ್ನ ಮಗನಿಗೆ ಆಗಲಿ ಎಂದು ನೇಹಾ ಹಿರೇಮಠ (Neha Hiremath Murder Case) ಕೊಲೆ ಪ್ರಕರಣದ ಆರೋಪಿ ಫಯಾಜ್ (Fayaz) ತಂದೆ‌ ಬಾಬಾ ಸಾಹೇಬ್‌ ಸುಬಾನಿ ಕಣ್ಣೀರು ಹಾಕಿದ್ದಾರೆ.

HUBBALLI MURDER

ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ ಅವರು, ಕಾನೂನು ಯಾವ ಶಿಕ್ಷೆ ಕೊಟ್ಟರೂ ಅದನ್ನು ನಾನು ಸ್ವಾಗತಿಸುತ್ತೇನೆ. ದಯವಿಟ್ಟು ನೇಹಾ ಕುಟುಂಬದವರು, ರಾಜ್ಯದ ಜನ ಹಾಗೂ ಮುನವಳ್ಳಿ ಜನತೆ ನನ್ನನ್ನು ಕ್ಷಮಿಸಬೇಕು ಎಂದು ಕೈ ಮುಗಿದು ಅಂಗಲಾಚಿದ್ದಾರೆ. ಇದನ್ನೂ ಓದಿ: ಲವ್‌ ಜಿಹಾದ್‌ ಹೆಚ್ಚಾಗುತ್ತಿದೆ, ನಿಮ್ಮ ಮಕ್ಕಳನ್ನು ರಕ್ಷಿಸಿಕೊಳ್ಳಿ: ಪೋಷಕರಲ್ಲಿ ನೇಹಾ ತಂದೆ ನಿರಂಜನ್‌ ಮನವಿ

ರಾಜ್ಯದ ಜನತೆಯಲ್ಲಿ ಕ್ಷಮೆ: ಹೆಣ್ಣು ಮಕ್ಕಳು ಎಂದರೆ ಪೂಜಿಸುತ್ತೇವೆ. ಹೆಣ್ಣು ಮಕ್ಕಳು ಎಂದರೆ ದೇವರೆಂದು ಭಾವಿಸುವ ದೇಶ ನಮ್ಮದು, ಅನ್ಯಾಯ ಆದಲ್ಲಿ ಪ್ರತಿಭಟನೆ ಮಾಡುತ್ತಾರೆ. ಅವರ ಹೋರಾಟಕ್ಕೆ ಜಯವಾಗಲಿ. ಕರ್ನಾಟಕ ಜನತೆಯಲ್ಲಿ ನಾನು ಕ್ಷಮೆಯಾಚಿಸುತ್ತೇನೆ. ಈ ಘಟನೆಯಿಂದ ಮುನವಳ್ಳಿ ಊರಿಗೆ ಕಪ್ಪು ಚುಕ್ಕೆ ಬಂದಿದೆ. ರಾಜ್ಯದ ಜನತೆ ಹಾಗೂ ಮುನವಳ್ಳಿ ಯುವಕರು ಶಾಂತಿ ಕಾಪಾಡುವಂತೆ ಕಣ್ಣೀರಾಕುತ್ತಲೇ ಭವಾನಿ ಮನವಿ ಮಾಡಿದ್ದಾರೆ.

HUBBALLI FAYAZ FATHER

ಪ್ರತಿಭಟನಾಕಾರರಿಗೆ ಸಲಾಂ : ಯಾವ ಹೆಣ್ಣು ಮಕ್ಕಳ ಮೇಲೆ ಯಾರೂ ಕಣ್ಣು ಹಾಕಬಾರದು. ಅವಳು ನನ್ನ ಮಗಳಿದ್ದ ಹಾಗೆ. ಅವರ ಮಗಳಿಗೆ ಆದ ಕೃತ್ಯ ನಮ್ಮ ಮಗಳ ಮೇಲೆಯೂ ಆಗಬಹುದು. ಪ್ರತಿಭಟನೆ ಮಾಡುವವರಿಗೆ ದೊಡ್ಡ ಸಲಾಂ ಎಂದು ಭವಾನಿ ಹೇಳಿದರು.

ಇದೇ ವೇಳೆ ನೇಹಾ- ಫಯಾಜ್ ರೀಲ್ಸ್ ವೈರಲ್ ಆಗಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಅವರಿಬ್ಬರ ನಡುವೆ ಅಫೇರ್ ಇತ್ತು. ಅವರು ಗುರುಗಳು ಈ ನಿಮ್ಮ ಪ್ರೀತಿಗೆ ಲವ್ ಜಿಹಾದ್ ಬಣ್ಣ ಕಟ್ಟಿ ನಿನ್ನ ಟಾರ್ಗೆಟ್ ಮಾಡ್ತಾರೆ ಎಂದು ನನ್ನ ಮಗನಿಗೆ ಬುದ್ದಿ ಹೇಳಿದ್ದೇ ಎಂದು ಭವಾನಿ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ.

Share This Article