ಹುಬ್ಬಳ್ಳಿ: ಇಲ್ಲಿನ ಬಿವಿಬಿ ಕಾಲೇಜಿನಲ್ಲಿ ನಡೆದಿದ್ದ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣದ (Neha Hiremath Murder) ಚಾರ್ಜ್ ಶೀಟ್ ಸಲ್ಲಿಸಲು ಸಿಐಡಿ ತಂಡ (CID Investigation) ತಯಾರಿ ನಡೆಸಿದೆ. ಇನ್ನು ಒಂದು ವಾರದಲ್ಲಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
Advertisement
ಕಳೆದ ಏಪ್ರಿಲ್ 18 ರಂದು ಹುಬ್ಬಳ್ಳಿ ನಗರ ಪಾಲಿಕೆ ಕಾಂಗ್ರೆಸ್ (congress) ಸದಸ್ಯ ನಿರಂಜನ್ ಹಿರೇಮಠ ಅವರ ಪುತ್ರಿ ನೇಹಾಳ ಭೀಕರ ಕೊಲೆಯಾಗಿತ್ತು. ಬಳಿಕ ನಿರಂಜನ್ ಅವರು ಈ ಪ್ರಕರಣದಲ್ಲಿ ಹಂತಕ ಫಯಾಜ್ ಅಷ್ಟೇ ಅಲ್ಲ ಇನ್ನೂ ಕೆಲವರು ಶಾಮೀಲಾಗಿದ್ದಾರೆ ಎಂದು ಆರೋಪ ಮಾಡಿದ್ದರು. ಅಲ್ಲದೇ ಲವ್ ಜಿಹಾದ್ ಇರಬಹುದು ಎಂದು ಸಂಶಯ ವ್ಯಕ್ತಪಡಿಸಿದ್ದರು. ಇದನ್ನೂ ಓದಿ: ಮೋದಿಯಂಥ ವ್ಯಕ್ತಿಯೊಂದಿಗೆ ಚರ್ಚಿಸಲು ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿಯೇ? – ಸ್ಮೃತಿ ಇರಾನಿ ವ್ಯಂಗ್ಯ
Advertisement
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದ ರಾಜ್ಯ ಸರ್ಕಾರ, ತನಿಖೆ ನಡೆಸಲು ಸಿಐಡಿಗೆ ವಹಿಸಿತ್ತು. ಬಳಿಕ ತನಿಖೆ ಚುರುಕುಗೊಳಿಸಿದ್ದ ಸಿಐಡಿ ಅಧಿಕಾರಿಗಳ ತಂಡ ಫಯಾಜ್ ಪೋಷಕರು ಹಾಗೂ ಇತರೇ 10 ಮಂದಿಯನ್ನು ತನಿಖೆಗೆ ಒಳಪಡಿಸಿತ್ತು.
Advertisement
Advertisement
ಇದೀಗ ವಿಚಾರಣೆ ಪ್ರಕ್ರಿಯೆ ಪೂರ್ಣಗೊಳಿಸಿರುವ ಸಿಐಡಿ ತಂಡ ಚಾರ್ಜ್ ಶೀಟ್ ಸಲ್ಲಿಸಲು ಸಕಲ ತಯಾರಿ ಮಾಡಿಕೊಂಡಿದೆ. ಇನ್ನೊಂದೇ ವಾರದಲ್ಲಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಮಹಿಳೆಯರು ಯಾರಾದ್ರು ಆತ್ಮಹತ್ಯೆ ಮಾಡಿಕೊಂಡರೆ ಅದಕ್ಕೆ ರಾಜ್ಯ ಸರ್ಕಾರವೇ ಕಾರಣ: ಹೆಚ್ಡಿಕೆ