ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ (Neha Hiremath) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಬೆಚ್ಚಿಬೀಳಿಸುವ ಅಂಶವೊಂದು ಬಹಿರಂಗವಾಗಿದೆ.
ಹೌದು. ರೋಪಿ ಫಯಾಜ್, ನೇಹಾಳನ್ನು 9 ಅಲ್ಲ ಬದಲಾಗಿ 14 ಬಾರಿ ಚುಚ್ಚಿ ಕೊಂದಿದ್ದಾನೆ. ನೇಹಾ ಹಿರೇಮಠ ದೇಹದ ಮೇಲೆ 14 ಗಾಯಗಳ ಗುರುತು ಪತ್ತೆಯಾಗಿದೆ. ಹೃದಯ ಭಾಗಕ್ಕೆ ಚಾಕುವಿನಿಂದ ಇರಿದಿದ್ದಾನೆ. ಕುತ್ತಿಗೆಗೆ ಹಲವು ಬಾರಿ ಇರಿದಿದ್ದರಿಂದ ರಕ್ತನಾಳ ಕಟ್ ಆಗಿ ವಿಪರೀತ ರಕ್ತಸ್ರಾವವಾಗಿದೆ ಎಂಬ ವಿಚಾರ ಬಯಲಾಗಿದೆ. ಇದನ್ನೂ ಓದಿ: ಪೊಲೀಸರ ಮೇಲೆ ನಂಬಿಕೆ ಇಲ್ಲ, ಸಿಬಿಐ ತನಿಖೆಗೆ ನೇಹಾ ತಂದೆ ಆಗ್ರಹಿಸಿದ್ದಾರೆ: ಜೆಪಿ ನಡ್ಡಾ
Advertisement
Advertisement
ಪ್ರಕರಣದ ವಿವರ: ಏ.18 ರ ಗುರುವಾರ ಸಂಜೆ 4.45ರ ಸುಮಾರಿಗೆ ಆರೋಪಿ ಫಯಾಜ್ (Fayaz) ತನ್ನ ಕೈಯಲ್ಲಿ ಚಾಕು ಹಿಡಿದು, ಮಾಸ್ಕ್ ಧರಿಸಿಕೊಂಡು ಹುಬ್ಬಳ್ಳಿ ಬಿವಿಬಿ ಕಾಲೇಜು ಕ್ಯಾಂಪಸ್ ಒಳಗೆ ಎಂಟ್ರಿ ಕೊಟ್ಟಿದ್ದನು. ಇತ್ತ ವಿದ್ಯಾರ್ಥಿನಿ ನೇಹಾ ಹಿರೇಮಠ ಕಾಲೇಜಿನಿಂದ ಹೊರಬರುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಆಕೆಯ ಕುತ್ತಿಗೆ, ಹೊಟ್ಟೆ ಹಾಗೂ ಬೆನ್ನಿನ ಭಾಗಕ್ಕೆ ಮನಬಂದಂತೆ ಚಾಕುವಿನಿಂದ ಇರಿದು ಗಂಭೀರ ಗಾಯಗೊಳಿಸಿದ್ದಾನೆ. ನೇಹಾಳನ್ನು ಕಾಲೇಜು ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿನಿಯರು ಕೂಡಲೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅದಾಗಲೇ ನೇಹಾ ಮೃತಪಟ್ಟಿದ್ದಾಳೆ.
Advertisement
Advertisement
ಇತ್ತ ಕೊಲೆ ಮಾಡಿ ಪರಾರಿಯಾಗಲು ಯತ್ನಿಸಿ ಕಿಮ್ಸ್ ಆಸ್ಪತ್ರೆಯ ಹಿಂಬಂದಿ ಅವಿತಿದ್ದ ಫಯಾಜ್‍ನನ್ನು ಬಂಧಿಸಲಾಗಿದೆ. ಸುದ್ದಿ ಹಬ್ಬುತ್ತಿದ್ದಂತೆಯೇ ಹುಬ್ಬಳ್ಳಿಯಾದ್ಯಂತ ವಿವಿಧ ಸಂಘಟನೆಗಳು ಪ್ರತಿಭಟನೆಗೆ ಇಳಿದವು. ಆರೋಪಿಯನ್ನು ಎನ್ ಕೌಂಟರ್ ಮಾಡಿ ಇಲ್ಲವೇ ಗಲ್ಲಿಗೇರಿಸಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಜೊತೆಗೆ #JusticeForNeha ಎಂಬ ಅಭಿಯಾನ ಕೂಡ ಸಾಮಾಜಿಕ ಜಾಲತಾಣದಲ್ಲಿ ಆರಂಭಿಸಲಾಗಿದೆ. ಈ ಕ್ಯಾಂಪೇನ್‍ಗೆ ಸ್ಯಾಂಡಲ್‍ವುಡ್ ಕೂಡ ಸಾಥ್ ನೀಡಿದೆ.