– ಶಿವಣ್ಣ, ರಿಷಭ್, ರಕ್ಷಿತ್ ಹಾಗೂ ಅನುಶ್ರೀ ಹೇಳಿದ್ದು ಹೀಗೆ..
ಬೆಂಗಳೂರು: ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹಿರೇಮಠ ಹತ್ಯೆ ಪ್ರಕರಣ ಸಂಬಂಧ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿದೆ. ಈ ಬೆನ್ನಲ್ಲೇ ಕನ್ನಡ ಚಿತ್ರರಂಗ ಕೂಡ ವಿದ್ಯಾರ್ಥಿನಿ ಸಾವಿಗೆ ಮರುಕ ವ್ಯಕ್ತಪಡಿಸಿದೆ. ನಟ- ನಟಿಯರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಳ್ಳುವ ಮೂಲಕ ನೇಹಾ ಹತ್ಯೆಯನ್ನು ಖಂಡಿಸಿದ್ದಾರೆ.
ಇದೀಗ ಪ್ರಕರಣ ಸಂಬಂಧ ನಟ ದರ್ಶನ್ (Darshan) ಅವರು ತಮ್ಮ ಫೇಸ್‌ಬುಕ್‌ನಲ್ಲಿ ಬರೆದುಕೊಳ್ಳುವ ಮೂಲಕ “ಜಸ್ಟೀಸ್ ಫಾರ್ ನೇಹಾ” ಅಭಿಯಾನಕ್ಕೆ ನಟ ಸಾಥ್ ನೀಡಿದ್ದಾರೆ. ಪ್ರೀತಿಯ ಹೆಸರಲ್ಲಿ ಇಂತ ಅಮಾನುಷಕರವಾದ ಕೃತ್ಯ ಮಾಡಿರುವವರಿಗೆ ನ್ಯಾಯಾಂಗದ ಅನುಸಾರವಾಗಿ ತಕ್ಕ ಶಿಕ್ಷೆ ಸಿಗಲಿ. ಇನ್ನು ಬಾಳಿ ಬದುಕಬೇಕಿದ್ದ 23 ವಯಸ್ಸಿನ ನೇಹಾ ಹಿರೇಮಠ್ ರವರ ಆತ್ಮಕ್ಕೆ ಶಾಂತಿ ಸಿಗಲಿ. ಈ ನೋವನ್ನು ಸಹಿಸಿಕೊಳ್ಳುವ ಶಕ್ತಿ ಅವರ ಕುಟುಂಬಕ್ಕೆ ದೇವರು ನೀಡಲಿ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಇಂಥ ಕೃತ್ಯ ಮಾಡುವವರನ್ನು ಗಲ್ಲಿಗೇರಿಸುವ ಬದಲು ಜನಸಾಮಾನ್ಯರ ಕೈಗೆ ಒಪ್ಪಿಸಿ: ನೇಹಾ ಕೊಲೆ ಬಗ್ಗೆ ನಟಿ ರಚಿತಾ ರಾಮ್ ಪ್ರತಿಕ್ರಿಯೆ
ಈ ರೀತಿಯ ಅಮಾನುಷ ಘಟನೆ ಮತ್ತೆಂದೂ ಮರುಕಳಿಸದಿರಲಿ. ಮಗಳನ್ನು ಕಳೆದುಕೊಂಡ ಆ ತಂದೆ ತಾಯಿಯ ಆಕ್ರಂದನ ನೋಡಲಾಗದು. ನಮ್ಮ ಸರ್ಕಾರ, ನ್ಯಾಯಾಂಗ ವ್ಯವಸ್ಥೆ, ಹಾಗೂ ಪೊಲೀಸ್ ಆದಷ್ಟು ಬೇಗ ನೇಹಾ ಹಿರೇಮಠ್ ಸಾವಿಗೆ ನ್ಯಾಯ ದೊರಕುವಂತೆ ಮಾಡಲಿ ಎನ್ನುವುದು ನನ್ನ ಕಳಕಳಿಯ ವಿನಂತಿ. #NehaHiremath
— DrShivaRajkumar (@NimmaShivanna) April 20, 2024
ಸಾವಿಗೆ ನ್ಯಾಯ ದೊರಕಲಿ: ಈ ರೀತಿಯ ಅಮಾನುಷ ಘಟನೆ ಮತ್ತೆಂದೂ ಮರುಕಳಿಸದಿರಲಿ. ಮಗಳನ್ನು ಕಳೆದುಕೊಂಡ ಆ ತಂದೆ-ತಾಯಿಯ ಆಕ್ರಂದನ ನೋಡಲಾಗದು. ನಮ್ಮ ಸರ್ಕಾರ, ನ್ಯಾಯಾಂಗ ವ್ಯವಸ್ಥೆ, ಹಾಗೂ ಪೊಲೀಸ್ ಆದಷ್ಟು ಬೇಗ ನೇಹಾ ಹಿರೇಮಠ್ ಸಾವಿಗೆ ನ್ಯಾಯ ದೊರಕುವಂತೆ ಮಾಡಲಿ ಎನ್ನುವುದು ನನ್ನ ಕಳಕಳಿಯ ವಿನಂತಿ ಎಂದು ನಟ ಶಿವರಾಜ್ ಕುಮಾರ್ (Shivaraj Kumar) ಅವರು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ತಪ್ಪಿತಸ್ಥರ ಮೇಲೆ ಕ್ರಮಕ್ಕೆ ವಿನಂತಿ: ನೇಹಾ ಹಿರೇಮಠ್ (Neha Hiremath) ಅವರ ಘಟನೆ ಅಮಾನವೀಯವಾಗಿದೆ. ಇಂತಹ ಘಟನೆ ಮರುಕಳಿಸದಂತೆ ಕಾನೂನು ಕ್ರಮಗಳನ್ನು ತಪ್ಪಿತಸ್ಥರ ಮೇಲೆ ಕೈಗೊಳ್ಳಬೇಕೆಂದು ವಿನಂತಿಸುತ್ತಾ, ನೇಹಾ ಅವರ ಕುಟುಂಬಕ್ಕೆ ಈ ದುಃಖ ಭರಿಸುವ ಶಕ್ತಿ ದೇವರು ಕೊಡಲಿ ಎಂದು ಪ್ರಾರ್ಥಿಸುತ್ತೇನೆ ಎಂಬುದಾಗಿ ನಟ ರಿಷಬ್ ಶೆಟ್ಟಿ (Rishabh Shetty) ಹಾಗೂ ರಕ್ಷಿತ್ ಶೆಟ್ಟಿ (Rakshit Shetty) ತಮ್ಮ ಎಕ್ಸ್‌ನಲ್ಲಿ ಬರೆದುಕೊಳ್ಳುವ ಮೂಲಕ #JusticeForNeha ಅಭಿಯಾನಕ್ಕೆ ಕೈಜೋಡಿಸಿದ್ದಾರೆ.
#JusticeForNeha https://t.co/gFnWWWlzzM
— Rakshit Shetty (@rakshitshetty) April 20, 2024
ಉತ್ತರ ಒಂದೇ ನ್ಯಾಯ: ಒಳ್ಳೇ ಬುದ್ದಿ ಹೇಳಿಕೊಡುವ ವಿದ್ಯಾ ದೇಗುಲವೇ ಕಲುಷಿತವಾಯ್ತು. ಸಮಾಜದಲ್ಲಿ ಬಾಳಿ ಬದುಕಬೇಕಾದ ಒಂದು ಹೆಣ್ಣಿನ ಜೀವ ಮಣ್ಣಾಯ್ತು. ಇದಕ್ಕೆ ಉತ್ತರ ಒಂದೇ …. ” ನ್ಯಾಯ “, ಆ ಕಣ್ಣಿರಿಗೆ ಉತ್ತರ ” ನ್ಯಾಯ ” ಎಂದು ನಟಿ ಕಂ Anchor ಅನುಶ್ರೀ (Anushree) ಬೇಸರ ವ್ಯಕ್ತಪಡಿಸಿದ್ದಾರೆ.
ಪ್ರಕರಣದ ವಿವರ: ಏ.18 ರ ಗುರುವಾರ ಸಂಜೆ 4.45ರ ಸುಮಾರಿಗೆ ಆರೋಪಿ ಫಯಾಜ್ (Fayaz) ತನ್ನ ಕೈಯಲ್ಲಿ ಚಾಕು ಹಿಡಿದು, ಮಾಸ್ಕ್ ಧರಿಸಿಕೊಂಡು ಹುಬ್ಬಳ್ಳಿ ಬಿವಿಬಿ ಕಾಲೇಜು ಕ್ಯಾಂಪಸ್ ಒಳಗೆ ಎಂಟ್ರಿ ಕೊಟ್ಟಿದ್ದನು. ಇತ್ತ ವಿದ್ಯಾರ್ಥಿನಿ ನೇಹಾ ಹಿರೇಮಠ ಕಾಲೇಜಿನಿಂದ ಹೊರಬರುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಆಕೆಯ ಕುತ್ತಿಗೆ, ಹೊಟ್ಟೆ ಹಾಗೂ ಬೆನ್ನಿನ ಭಾಗಕ್ಕೆ ಮನಬಂದಂತೆ ಚಾಕುವಿನಿಂದ ಇರಿದು ಗಂಭೀರ ಗಾಯಗೊಳಿಸಿದ್ದಾನೆ. ನೇಹಾಳನ್ನು ಕಾಲೇಜು ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿನಿಯರು ಕೂಡಲೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅದಾಗಲೇ ನೇಹಾ ಮೃತಪಟ್ಟಿದ್ದಾಳೆ.
ಇತ್ತ ಕೊಲೆ ಮಾಡಿ ಪರಾರಿಯಾಗಲು ಯತ್ನಿಸಿ ಕಿಮ್ಸ್ ಆಸ್ಪತ್ರೆಯ ಹಿಂಬಂದಿ ಅವಿತಿದ್ದ ಫಯಾಜ್‍ನನ್ನು ಬಂಧಿಸಲಾಗಿದೆ. ಸುದ್ದಿ ಹಬ್ಬುತ್ತಿದ್ದಂತೆಯೇ ಹುಬ್ಬಳ್ಳಿಯಾದ್ಯಂತ ವಿವಿಧ ಸಂಘಟನೆಗಳು ಪ್ರತಿಭಟನೆಗೆ ಇಳಿದವು. ಆರೋಪಿಯನ್ನು ಎನ್ ಕೌಂಟರ್ ಮಾಡಿ ಇಲ್ಲವೇ ಗಲ್ಲಿಗೇರಿಸಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಇಂದು ಕೂಡ ಪ್ರತಿಭಟನೆ ಮುಂದುವರಿದಿದೆ. ಜೊತೆಗೆ #JusticeForNeha ಎಂಬ ಅಭಿಯಾನ ಕೂಡ ಸಾಮಾಜಿಕ ಜಾಲತಾಣದಲ್ಲಿ ಆರಂಭಿಸಲಾಗಿದೆ.