ಹುಬ್ಬಳ್ಳಿ ವಿದ್ಯಾರ್ಥಿನಿ ಕೊಲೆ ವೈಯಕ್ತಿಕ ಕಾರಣಕ್ಕೆ ಆಗಿರೋದು: ಸಿಎಂ

Public TV
2 Min Read
NEHA SIDDARAMAIAH

– ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಬಹಳ ಚೆನ್ನಾಗಿದೆ

ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ (Neha Hiremath) ಹತ್ಯೆ ಪ್ರಕರಣವು ವೈಯಕ್ತಿಕ ಕಾರಣಕ್ಕೆ ಆಗಿರೋದು. ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಬಹಳ ಚೆನ್ನಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramiah) ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಮರ್ಡರ್ ಆಗಿದ್ದರೂ ಅದು ವೈಯಕ್ತಿಕ ಕಾರಣಕ್ಕೆ ಆಗುತ್ತದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಸರ್ಕಾರ ಕೆಲಸ. ನಮ್ಮ ಸರ್ಕಾರ ಅದನ್ನ ಮಾಡ್ತಿದೆ ಎಂದರು.

ಪ್ರಕರಣ ಸಂಬಂಧ ನಿನ್ನೆ ರಾತ್ರಿ ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದ ಸಿಎಂ, ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ ಕಾಂಗ್ರೆಸ್ ಸದಸ್ಯ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಅವರ ಹತ್ಯೆ ಖಂಡನೀಯ. ಮೃತ ಯುವತಿಯ ಕುಟುಂಬಕ್ಕೆ ನನ್ನ ಸಂತಾಪಗಳು. ಘಟನೆ ಸಂಬಂಧ ಈಗಾಗಲೇ ಓರ್ವ ಆರೋಪಿಯನ್ನು ಬಂಧಿಸಲಾಗಿದ್ದು, ಕಟ್ಟುನಿಟ್ಟಿನ ತನಿಖೆ ನಡೆಸಿ, ಆರೋಪಿಗೆ ಗರಿಷ್ಠ ಶಿಕ್ಷೆಯಾಗುವಂತೆ ಕ್ರಮವಹಿಸಲು ಪೊಲೀಸ್ ಮಹಾನಿರ್ದೇಶಕರಿಗೆ ಸೂಚಿಸಿದ್ದೇನೆ. ಇದನ್ನೂ ಓದಿ: ಹುಬ್ಬಳ್ಳಿಯ ನೇಹಾ ಹತ್ಯೆಗೈದ ಫಯಾಜ್ ಕುಟುಂಬಸ್ಥರಿಗೆ ಪೊಲೀಸ್ ಭದ್ರತೆ

ಘಟನೆ ಸಂಬಂಧ ಯಾರೊಬ್ಬರೂ ಉದ್ವೇಗಕ್ಕೆ ಒಳಗಾಗಿ ಕಾನೂನನ್ನು ಕೈಗೆತ್ತಿಕೊಳ್ಳುವುದಾಗಲೀ ಅಥವಾ ಸಮಾಜದ ಶಾಂತಿ ಕದಡುವ ಪ್ರಯತ್ನಕ್ಕೆ ಮುಂದಾಗಬಾರದು. ಯುವತಿಯ ಸಾವಿಗೆ ನ್ಯಾಯ ದೊರಕಿಸಿಕೊಡುವುದು ನಮ್ಮ ಕರ್ತವ್ಯ, ಈ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಶಕ್ತಿಮೀರಿ ಶ್ರಮಿಸಲಿದೆ ಎಂದು ಬರೆದುಕೊಂಡಿದ್ದರು. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಯುವತಿ ಹತ್ಯೆ ಖಂಡಿಸಿ ಭುಗಿಲೆದ್ದ ಆಕ್ರೋಶ; ವಿದ್ಯಾರ್ಥಿಗಳು, ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ

ಪ್ರಕರಣ ವಿವರ: ಗುರುವಾರ ಸಂಜೆ 4.45ರ ಸುಮಾರಿಗೆ ಆರೋಪಿ ಫಯಾಜ್ (Fayaz) ತನ್ನ ಕೈಯಲ್ಲಿ ಚಾಕು ಹಿಡಿದು, ಮಾಸ್ಕ್ ಧರಿಸಿಕೊಂಡು ಹುಬ್ಬಳ್ಳಿ ಬಿವಿಬಿ ಕಾಲೇಜು ಕ್ಯಾಂಪಸ್ ಒಳಗೆ ಎಂಟ್ರಿ ಕೊಟ್ಟಿದ್ದನು. ಇತ್ತ ವಿದ್ಯಾರ್ಥಿನಿ ನೇಹಾ ಹಿರೇಮಠ ಕಾಲೇಜಿನಿಂದ ಹೊರಬರುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಆಕೆಯ ಕುತ್ತಿಗೆ, ಹೊಟ್ಟೆ ಹಾಗೂ ಬೆನ್ನಿನ ಭಾಗಕ್ಕೆ ಮನಬಂದಂತೆ ಚಾಕುವಿನಿಂದ ಇರಿದು ಗಂಭೀರ ಗಾಯಗೊಳಿಸಿದ್ದಾನೆ.  ನೇಹಾಳನ್ನು ಕಾಲೇಜು ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿನಿಯರು ಕೂಡಲೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅದಾಗಲೇ ನೇಹಾ ಮೃತಪಟ್ಟಿದ್ದಾಳೆ.

HUBBALLI MURDER

ಇತ್ತ ಕೊಲೆ ಮಾಡಿ ಪರಾರಿಯಾಗಲು ಯತ್ನಿಸಿ ಕಿಮ್ಸ್ ಆಸ್ಪತ್ರೆಯ ಹಿಂಬಂದಿ ಅವಿತಿದ್ದ ಫಯಾಜ್‍ನನ್ನು ಬಂಧಿಸಲಾಗಿದೆ. ಸುದ್ದಿ ಹಬ್ಬುತ್ತಿದ್ದಂತೆಯೇ ಹುಬ್ಬಳ್ಳಿಯಾದ್ಯಂತ ವಿವಿಧ ಸಂಘಟನೆಗಳು ಪ್ರತಿಭಟನೆಗೆ ಇಳಿದವು. ಆರೋಪಿಯನ್ನು ಎನ್ ಕೌಂಟರ್ ಮಾಡಿ ಇಲ್ಲವೇ ಗಲ್ಲಿಗೇರಿಸಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಇಂದು ಕೂಡ ಪ್ರತಿಭಟನೆ ಮುಂದುವರಿದಿದೆ.

Share This Article