ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಪ್ರಕರಣ ಸಂಬಂಧ ಒಂದೆಡೆ ರಾಜ್ಯದೆಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿದ್ದರೆ, ಇನ್ನೊಂದೆಡೆ ಸೋಶಿಯಲ್ ಮೀಡಿಯಾದಲ್ಲಿ ಅಭಿಯಾನ ಕೂಡ ಆರಂಭವಾಗಿದೆ. ಈ ನಡುವೆ ಕೊಲೆ ಸಮರ್ಥಿಸಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿಕೊಂಡಿದ್ದ ಇಬ್ಬರು ಯುವಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Advertisement
ಧಾರವಾಡ ನಗರದ ನಿವಾಸಿಗಳಾದ ಸಾದಿಕ್ ತಡಕೋಡ ಹಾಗೂ ಆದಿಲ್ ಎಂಬಿಬ್ಬರು ನೇಹಾ ಹಾಗೂ ಫಯಾಜ್ ಫೋಟೋ ಹಾಕಿ ಜಸ್ಟಿಸ್ ಫಾರ್ ಲವ್ ಎಂದು ಇನ್‍ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿದ್ದಾರೆ. ಇದನ್ನು ಗಮನಿಸಿದ ಹಿಂದೂ ಕಾರ್ಯಕರ್ತರು ಇಬ್ಬರು ಯುವಕರನ್ನು ವಿದ್ಯಾಗಿರಿ ಠಾಣೆಗೆ ಒಪ್ಪಿಸಿದ್ದಾರೆ. ಬಳಿಕ ಠಾಣೆ ಎದುರು ಜೈ ಶ್ರೀರಾಮ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದ್ದಾರೆ. ಇದನ್ನೂ ಓದಿ: ಪ್ರೀತಿ ಹೆಸ್ರಲ್ಲಿ ಅಮಾನುಷ ಕೃತ್ಯ ಎಸಗುವವರಿಗೆ ತಕ್ಕ ಶಿಕ್ಷೆಯಾಗ್ಲಿ- ನೇಹಾ ಹತ್ಯೆಗೆ ದರ್ಶನ್ ಕಿಡಿ
Advertisement
Advertisement
ಪ್ರಕರಣದ ವಿವರ: ಏ.18 ರ ಗುರುವಾರ ಸಂಜೆ 4.45ರ ಸುಮಾರಿಗೆ ಆರೋಪಿ ಫಯಾಜ್ ತನ್ನ ಕೈಯಲ್ಲಿ ಚಾಕು ಹಿಡಿದು, ಮಾಸ್ಕ್ ಧರಿಸಿಕೊಂಡು ಹುಬ್ಬಳ್ಳಿ ಬಿವಿಬಿ ಕಾಲೇಜು ಕ್ಯಾಂಪಸ್ ಒಳಗೆ ಎಂಟ್ರಿ ಕೊಟ್ಟಿದ್ದನು. ಇತ್ತ ವಿದ್ಯಾರ್ಥಿನಿ ನೇಹಾ ಹಿರೇಮಠ ಕಾಲೇಜಿನಿಂದ ಹೊರಬರುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಆಕೆಯ ಕುತ್ತಿಗೆ, ಹೊಟ್ಟೆ ಹಾಗೂ ಬೆನ್ನಿನ ಭಾಗಕ್ಕೆ ಮನಬಂದಂತೆ ಚಾಕುವಿನಿಂದ ಇರಿದು ಗಂಭೀರ ಗಾಯಗೊಳಿಸಿದ್ದಾನೆ. ನೇಹಾಳನ್ನು ಕಾಲೇಜು ಆಡಳಿತ ಮಂಡಳಿ ಹಾಗೂ ವಿದ್ಯಾರ್ಥಿನಿಯರು ಕೂಡಲೇ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅದಾಗಲೇ ನೇಹಾ ಮೃತಪಟ್ಟಿದ್ದಾಳೆ.
Advertisement
ಇತ್ತ ಕೊಲೆ ಮಾಡಿ ಪರಾರಿಯಾಗಲು ಯತ್ನಿಸಿ ಕಿಮ್ಸ್ ಆಸ್ಪತ್ರೆಯ ಹಿಂಬಂದಿ ಅವಿತಿದ್ದ ಫಯಾಜ್‍ನನ್ನು ಬಂಧಿಸಲಾಗಿದೆ. ಸುದ್ದಿ ಹಬ್ಬುತ್ತಿದ್ದಂತೆಯೇ ಹುಬ್ಬಳ್ಳಿಯಾದ್ಯಂತ ವಿವಿಧ ಸಂಘಟನೆಗಳು ಪ್ರತಿಭಟನೆಗೆ ಇಳಿದವು. ಆರೋಪಿಯನ್ನು ಎನ್ ಕೌಂಟರ್ ಮಾಡಿ ಇಲ್ಲವೇ ಗಲ್ಲಿಗೇರಿಸಿ ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಇಂದು ಕೂಡ ಪ್ರತಿಭಟನೆ ಮುಂದುವರಿದಿದೆ. ಜೊತೆಗೆ #JusticeForNeha ಎಂಬ ಅಭಿಯಾನ ಕೂಡ ಸಾಮಾಜಿಕ ಜಾಲತಾಣದಲ್ಲಿ ಆರಂಭಿಸಲಾಗಿದೆ. ಈ ಕ್ಯಾಂಪೇನ್‍ಗೆ ಸ್ಯಾಂಡಲ್‍ವುಡ್ ಕೂಡ ಸಾಥ್ ನೀಡಿದೆ.