-ಸತ್ಯ ಮುಚ್ಚಿಡಲು ಸಾಧ್ಯವಿಲ್ಲ
ಬೆಂಗಳೂರು: ನೇಹಾ ಹತ್ಯೆಯ ಕುರಿತು ನನ್ನ ಹೇಳಿಕೆಯಿಂದ ಪೋಷಕರಿಗೆ ಬೇಸರವಾಗಿದ್ದರೆ ವಿಷಾದವಿರಲಿ ಎಂದು ಗೃಹ ಸಚಿವ ಜಿ.ಪರಮೇಶ್ವರ್ (G Parameshwar) ಹೇಳಿಕೆ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ (Hubballai) ವಿದ್ಯಾರ್ಥಿನಿ ನೇಹಾ ಹತ್ಯೆ ವೈಯಕ್ತಿಕ ಕಾರಣಕ್ಕೆ ನಡೆದಿದೆ ಎಂಬ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ನೇಹಾ ಹತ್ಯೆ ಹೇಳಿಕೆಯಿಂದ ಅವರ ಪೋಷಕರಿಗೆ ಬೇಸರವಾಗಿದ್ದರೆ ವಿಷಾದವಿರಲಿ. ಆದರೆ ಸತ್ಯವನ್ನು ಯಾವತ್ತೂ ಮುಚ್ಚಿಡೋಕೆ ಆಗಲ್ಲ. ತನಿಖೆ ಬಳಿಕ ಎಲ್ಲಾ ವಿಷಯ ಹೊರಬರುತ್ತೆ. ನಮಗೆ ಬಂದಿರೋ ವರದಿ ಪ್ರಕಾರ ಮಾತಾಡಿದ್ದೇವೆ. ಎಬಿವಿಪಿಯಾಗಲಿ ಮತ್ತೊಬ್ಬರಾಗಲಿ ಅವರಿಗೆ ಸತ್ಯಾಂಶ ಗೊತ್ತಿಲ್ಲ ಎಂದರು. ಇದನ್ನೂ ಓದಿ: ನನ್ನ ಮಗ ತಪ್ಪು ಮಾಡಿದ್ದಾನೆ.. ಅವನಿಗೆ ಶಿಕ್ಷೆ ಆಗಲೇಬೇಕು: ಕೊಲೆಗಾರ ಫಯಾಜ್ ತಾಯಿ ಕಣ್ಣೀರು
ಎಬಿವಿಪಿ (ABVP) ಕಾರ್ಯಕರ್ತರ ಮುತ್ತಿಗೆ ವಿಚಾರವಾಗಿ ಮಾತನಾಡಿದ ಅವರು, ಅವರಿಗೆ ಸತ್ಯಾಸತ್ಯತೆ ಗೊತ್ತಿಲ್ಲ. ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ನಮಗೆ ಜವಾಬ್ದಾರಿ ಇದೆ. ಅದರ ಬಗ್ಗೆ ತನಿಖೆ ಆಗುತ್ತೆ ಅಲ್ವಾ. ತನಿಖೆಯಲ್ಲಿ ಎಲ್ಲಾ ಸತ್ಯ ಹೊರಬೀಳುತ್ತೆ ಎಂದು ಹೇಳಿದರು. ಇದನ್ನೂ ಓದಿ: ನೇಹಾ ಹತ್ಯೆ ಕೇಸ್ – ಎಬಿವಿಪಿಯಿಂದ ಗೃಹಸಚಿವರ ಮನೆ ಮುತ್ತಿಗೆಗೆ ಯತ್ನ