ಹುಬ್ಬಳ್ಳಿ: ವಿದ್ಯಾರ್ಥಿನಿ ನೇಹಾ ಹಿರೇಮಠ (Neha Hiremath) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ನೇಹಾ ತಂದೆ ನಿರಂಜನ ಜೊತೆಗೆ ಇಂದು ಮಾತನಾಡಿರುವ ಸಿಎಂ ಸಿದ್ದರಾಮಯ್ಯ Very Sorry ಎಂದು ಹೇಳಿದ್ದಾರೆ.
ಕಾನೂನು ಸಚಿವ ಎಚ್.ಕೆ ಪಾಟೀಲ್ ನೇಹಾ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಫೋನ್ ನಲ್ಲಿ ನಿರಂಜನ್ ಜೊತೆ ಮಾತಾಡಿದ ಸಿಎಂ ಸಿದ್ದರಾಮಯ್ಯ (Siddaramaiah) ನಾವು ನಿಮ್ಮ ಜೊತೆ ಇದ್ದೇವೆ ಅಂತ ಭರವಸೆ ನೀಡಿದರು.
ನನ್ನ ಕುಟುಂಬ ಹಾಗೂ ಎಲ್ಲಾ ಮಠಾಧೀಶರುಗಳ ಪರವಾಗಿ ನಾನು ನಿಮಗೆ ಅಭಿನಂದನೆ ಸಲ್ಲಿಸುತ್ತೇನೆ. ನೀವು ಕೈಗೊಂಡ ನಿರ್ಧಾರಕ್ಕೆ ಕಾನೂ ಸಚಿವರು, ಮುಖ್ಯಮಂತ್ರಿಗಳು, ಗೃಹ ಸಚಿವರು ಹಾಗೂ ಈ ಪ್ರಕರಣದಲ್ಲಿ ತನಿಖೆಗೆ ಸಹಕರಿಸುತ್ತಿರುವ ಎಲ್ಲರಿಗೂ ಧನ್ಯವಾದಗಳು. ಪ್ರಕಣದ ಸಂಪೂರ್ಣ ತನಿಖೆ ಮಾಡಿ ನಮಗೆ ಬೇಗನೆ ನ್ಯಾಯ ಕೊಡಿಸಿ ಎಂದು ಇದೇ ವೇಳೆ ನಿರಂಜನ್ ಅವರು ಸಿಎಂ ಅವರನ್ನು ಕೇಳಿಕೊಂಡರು. ಈ ವೇಳೆ ಸಿಎಂ, ಆದಷ್ಟು ಬೇಗನೇ ನಿಮಗೆ ನ್ಯಾಯ ಕೊಡ್ತೀನಿ ಎಂದು ಹೇಳಿದರು. ಇದನ್ನೂ ಓದಿ: ನಿರಂಜನ್ ಹಿರೇಮಠ್‌ಗೆ ಧೈರ್ಯದಿಂದ ಇರುವಂತೆ ಸಿಎಂ ಹೇಳಿದ್ದಾರೆ: ಹೆಚ್.ಕೆ ಪಾಟೀಲ್
ಬಳಿಕ ಈ ಬಗ್ಗೆ ಮಾಧ್ಯಮಗಳಿಗೆ ಮಾತನಾಡಿದ ಸಚಿವ ಎಚ್ ಕೆ ಪಾಟೀಲ್ ನೇಹಾ ಹಿರೇಮಠ ಪ್ರಕರಣ ನ್ಯಾಯದಾನ ವಿಳಂಬ ಆಗಬಾರದೆಂದು ವಿಶೇಷ ನ್ಯಾಯಾಲಯ ಸ್ಥಾಪನೆಗೆ ತೀರ್ಮಾನ ಮಾಡಲಾಗಿದೆ.ಇವತ್ತು ಉಚ್ಛ ನ್ಯಾಯಾಲಕ್ಕೆ ವಿಶೇಷ ನ್ಯಾಯಾಲಯ ಸ್ಥಾಪನೆ ಪತ್ರ ತಲುಪುತ್ತೆ ತಪ್ಪಿಗಸ್ತರಿಗೆ ಸೂಕ್ತ ಶಿಕ್ಷೆ ಆಗಬೇಕಿದೆ. ಬರ್ಬರ ಹತ್ಯೆ ಮತ್ತು ಸಮಾಜದ ಮುಖಂಡರ ಭೇಟಿ ವೇಳೆ ವಿಶೇಷ ನ್ಯಾಯಾಲಯ ಸ್ಥಾಪನೆಗೆ ಆಗ್ರಹ ವ್ಯಕ್ತವಾಗಿತ್ತು.ಹೀಗಾಗಿ ವಿಶೇಷ ನ್ಯಾಯಾಲಯ ಸ್ಥಾಪನೆಗೆ ತೀರ್ಮಾನಿಸಿದ್ದೇವೆ ಎಂದರು.