ನವದೆಹಲಿ: ಉದ್ಯೋಗದಲ್ಲಿ ಮೀಸಲಾತಿ (Reservation in Job) ನೀಡುವುದನ್ನು ಜವಾಹರಲಾಲ್ ನೆಹರು (Jawaharlal Nehru) ವಿರೋಧಿಸಿದ್ದರು ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಹೇಳಿದ್ದಾರೆ.
ರಾಜ್ಯಸಭೆಯಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲೆ ವಂದನಾ ನಿರ್ಣಯ ಭಾಷಣ ಮಾಡಿದ ಅವರು, ಅಂಬೇಡ್ಕರ್ (Ambedkar) ಅವರ ಹೋರಾಟದಿಂದಾಗಿ ಮೀಸಲಾತಿ ಸಿಕ್ಕಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರಿಗೆ ದಶಕಗಳವರೆಗೆ ಭಾರತರತ್ನ (Bharat Ratna) ಸಿಕ್ಕಿರಲಿಲ್ಲ. ಕಾಂಗ್ರೆಸ್ ನಾಯಕರು ತಮಗೆ ತಾವೇ ಭಾರತರತ್ನ ಪ್ರಶಸ್ತಿ ಪಡೆದುಕೊಂಡರು ಎಂದು ವಾಗ್ದಾಳಿ ನಡೆಸಿದರು.
Advertisement
Advertisement
ಕಾಂಗ್ರೆಸ್ಸಿಗೆ ಅಂಬೇಡ್ಕರ್ ಅವರಿಗೆ ಭಾರತರತ್ನ ಕೊಡುವ ಮನಸ್ಸು ಇರಲಿಲ್ಲ. ಅದರೆ ಬಿಜೆಪಿ ಬೆಂಬಲಿತ ಸರ್ಕಾರ ಅಂಬೇಡ್ಕರ್ ಅವರಿಗೆ ಭಾರತರತ್ನ ಪ್ರಶಸ್ತಿ ಘೋಷಿಸಿತು ಎಂದು. ದಿನ ದಲಿತರ ನಾಯಕ ಸೀತಾರಾಮ್ ಕೇಸರಿ ಅವರಿಗೂ ಕಾಂಗ್ರೆಸ್ ಅವಮಾನ ಮಾಡಿತ್ತು ಎಂದು ಕಿಡಿಕಾರಿದರು. ಇದನ್ನೂ ಓದಿ: ಕಾಂಗ್ರೆಸ್ 40 ಸ್ಥಾನಗಳನ್ನಾದರೂ ಉಳಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ: ಮೋದಿ ವ್ಯಂಗ್ಯ
Advertisement
Advertisement
ಆದಿವಾಸಿ ಮಹಿಳೆ ರಾಷ್ಟ್ರಪತಿಯಾಗಿರುವುದನ್ನು ಕಾಂಗ್ರೆಸ್ ಸಹಿಸಲಿಲ್ಲ. ಈಗ ಕಾಂಗ್ರೆಸ್ಸಿಗರು ರಾಷ್ಟ್ರಪತಿ ಕುರಿತು ಅಗೌರವದಿಂದ ಮಾತನಾಡುತ್ತಿದ್ದಾರೆ. ಆದಿವಾಸಿ ಮಹಿಳೆ ರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸುವ ಸಮಯದಲ್ಲಿ ಅಭ್ಯರ್ಥಿಯನ್ನು ಹಾಕದೇ ಬೆಂಬಲ ವ್ಯಕ್ತಪಡಿಸಬೇಕಿತ್ತು ಎಂದು ಹೇಳಿದರು.