ಕಲಬುರಗಿ: ಚಾಲಕನ ನಿಯಂತ್ರಣ ತಪ್ಪಿ ಈಶಾನ್ಯ ಸಾರಿಗೆ (ಎನ್‌ಇಕೆಎಸ್‌ಆರ್‌ಟಿಸಿ) ಬಸ್ಸೊಂದು ಮನೆಗೆಯೊಂದರ ಒಳಗೆ ನುಗ್ಗಿದ ಘಟನೆ ಕಲಬುರಗಿ ತಾಲೂಕಿನ ಹಡಗಿಲ್ ಹಾರತಿ ಗ್ರಾಮದಲ್ಲಿ ಇಂದು ನಡೆದಿದೆ.
ಹಾರತಿ ಗ್ರಾಮದ ನಿವಾಸಿ ಶ್ರೀಮಂತ್ ಎಂಬವರ ಮನೆಗೆ ಬಸ್ ನುಗ್ಗಿದೆ. ಬೆಳ್ಳಂಬೆಳಗ್ಗೆ ಸುಮಾರು 6 ಗಂಟೆ ಹೊತ್ತಿಗೆ ಈ ಘಟನೆ ನಡೆದಿದ್ದು, ಚಾಲಕನ ನಿಯಂತ್ರಣ ತಪ್ಪಿ ಬಸ್ಸು ಏಕಾಏಕಿ ಮನೆಗೆ ನುಗ್ಗಿದೆ. ಘಟನೆಯಲ್ಲಿ ಮನೆಯ ಗೋಡೆಗಳು ನೆಲಕ್ಕುರುಳಿದ್ದು, ಬಸ್ ನುಗ್ಗಿದ ಪರಿಣಾಮ ಮನೆಯಲ್ಲಿದ್ದ ಹಲವರು ಗಾಯಗೊಂಡಿದ್ದಾರೆ. ಅಲ್ಲದೆ ಘಟನೆಯಲ್ಲಿ ಇಬ್ಬರು ಪ್ರಯಾಣಿಕರಿಗೂ ಸಹ ಸಣ್ಣ ಪುಟ್ಟ ಗಾಯಗಳಾಗಿವೆ.
ಬಸ್ ಏಕಾಏಕಿ ನಿಯಂತ್ರಣ ತಪ್ಪಿ ರಸ್ತೆ ಬದಿ ಇದ್ದ ಮನೆಗೆ ನುಗ್ಗಿದ ಪರಿಣಾಮ ಮನೆಯ ಗೋಡೆ ಹಾಗೂ ಮೇಲ್ಛಾವಣಿ ನೆಲಕ್ಕುರುಳಿದೆ. ಅದೃಷ್ಟವಶಾತ್ ಈ ಘಟನೆಯಿಂದ ಯಾವುದೇ ಪ್ರಾಣಾಹಾನಿಯಾಗಿಲ್ಲ. ಬಸ್ಸಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಚಾಲಕನೂ ಸಹ ಗಾಯಗೊಂಡಿದ್ದಾರೆ.
ಈ ಘಟನೆ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv