ನೆಲಮಂಗಲ: ಹಿಟ್ ಆ್ಯಂಡ್ ರನ್‌ಗೆ ಬೈಕ್ ಸವಾರನೊಬ್ಬ ಸಾವನ್ನಪ್ಪಿರುವ ಘಟನೆ ನೆಲಮಂಗಲದ (Nelamangala) ಬಿನ್ನಮಂಗಲ ಟೋಲ್ ಬಳಿ ನಡೆದಿದೆ.ಇದನ್ನೂ ಓದಿ: Bengaluru | ಮೋಟಾರ್‌ನಿಂದ ಮಳೆ ನೀರು ತೆರವು ಮಾಡಲು ಹೋಗಿ ಕರೆಂಟ್ ಶಾಕ್ – 12ರ ಬಾಲಕ ಸೇರಿ ಇಬ್ಬರು ಬಲಿ
ನೆಲಮಂಗಲದಿಂದ ತುಮಕೂರಿಗೆ ಹೊರಡುವ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಟಿಟಿ ವಾಹನ ಡಿಕ್ಕಿ ಹೊಡೆದಿದ್ದು, ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಟಿಟಿ ವಾಹನ ಚಾಲಕ ಡಿಕ್ಕಿ ಹೊಡೆದು ಹಾಗೆಯೇ ಎಸ್ಕೇಪ್ ಆಗಿದ್ದಾನೆಂದು ಮಾಹಿತಿ ಲಭ್ಯವಾಗಿದೆ.
ಸದ್ಯ ಘಟನೆ ಸಂಬಂಧ ನೆಲಮಂಗಲ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಮೃತನ ಕುರಿತು ಮಾಹಿತಿ ಕಲೆ ಹಾಕುತ್ತಿದ್ದು, ಮೃತದೇಹವನ್ನು ನೆಲಮಂಗಲ ಸರ್ಕಾರಿ ಶವಗಾರಕ್ಕೆ ರವಾನಿಸಲಾಗಿದೆ.ಇದನ್ನೂ ಓದಿ: ವಾಮಾಚಾರ ಮಾಡುತ್ತಿರುವುದಾಗಿ ಶಂಕಿಸಿ ಮಹಿಳೆಯ ಹತ್ಯೆ – 23 ಜನರಿಗೆ ಜೀವಾವಧಿ ಶಿಕ್ಷೆ