ಬೆಂಗಳೂರು: ರಾಜ್ಯದ 17 ಜಿಲ್ಲೆಗಳಿಗೆ ಹಾಗೂ ಹೊರ ರಾಜ್ಯಕ್ಕೆ ಸಂಪರ್ಕ ಕಲ್ಪಿಸುವ ನೆಲಮಂಗಲ (Nelamangala) ತಾಲೂಕು ಸದಾ ವಾಹನಗಳಿಂದ ಗಿಜಿಗುಡುವ, 24*7 ವಾಹನಗಳು ಸಂಚರಿಸುವ ಹೆದ್ದಾರಿ (Highway). ಇದೀಗ ಈ ಹೆದ್ದಾರಿಯನ್ನು ಅಗಲೀಕರಣಕ್ಕೆ ಸರ್ಕಾರ ಮುಂದಾಗಿದೆ. ಈಗಾಗಲೇ ಕಾಮಗಾರಿ ಆರಂಭವಾಗಿದ್ದು ರಸ್ತೆ ಬದಿಯಲ್ಲಿದ್ದ ಮರಗಳನ್ನು (Trees) ಕಟಾವು ಮಾಡಲಾಗಿದೆ ಇದು ಪರಿಸರ ಪ್ರೇಮಿಗಳ ಕೆಂಗಣ್ಣಿಗೆ (Green Activists) ಗುರಿಯಾಗಿದೆ.
Advertisement
ವಾಹನಗಳ ದಟ್ಟಣೆ ಹೆಚ್ಚಾಗುತ್ತಿರುವ ಹಿನ್ನೆಲೆ ಸುಗಮ ಸಂಚಾರಕ್ಕೆ ಹಾಗೂ ಅಪಘಾತಗಳನ್ನು ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ತುಮಕೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಮುಂದಾಗಿದೆ. ರಸ್ತೆ ಅಗಲೀಕರಣದ ಉದ್ದೇಶದಿಂದ ರಸ್ತೆ ಬದಿಯ ಬೃಹತ್ ಮರಗಳನ್ನು ಯಂತ್ರಗಳ ಮೂಲಕ ಕಟಾವು ಮಾಡಲಾಗುತ್ತಿದೆ. ಇದಕ್ಕೆ ಪರಿಸರ ಪ್ರೇಮಿಗಳ ವಿರೋಧ ವ್ಯಕ್ತವಾಗಿದೆ. ಇದನ್ನೂ ಓದಿ: UP ಬಿಜೆಪಿ ಶಾಸಕನ ತಾಯಿಯ ಕಿವಿ ಕತ್ತರಿಸಿ ಓಲೆ ಕದ್ದ ಕಳ್ಳರು
Advertisement
Advertisement
ರಸ್ತೆ ಬದಿಯಲ್ಲಿದ್ದ ನೂರಾರು ಮರಗಳನ್ನು ಈಗಾಗಲೇ ಕಟಾವು ಮಾಡಲಾಗಿದೆ. ಇದನ್ನು ಕಂಡು ಪರಿಸರ ಪ್ರೇಮಿಗಳು ವಿರೋಧ ವ್ಯಕ್ತಪಡಿಸಿದ್ದು, ಮರಗಳ ಕಟಾವು ಬದಲು ಸ್ಥಳಾಂತರಕ್ಕೆ ಆಗ್ರಹಿಸುತ್ತಿದ್ದಾರೆ. ಈ ಮೂಲಕ ಹಲವು ವರ್ಷಗಳಿಂದ ಬೆಳೆದು ನಿಂತಿರುವ ಮರಗಳ ಉಳಿವಿಗಾಗಿ ಧ್ವನಿ ಎತ್ತಿದ್ದಾರೆ. ಇದನ್ನೂ ಓದಿ: ಇನ್ಮುಂದೆ ಟೋಲ್‌ಗಳಲ್ಲಿ ವಾಹನ ನಿಲ್ಲಿಸುವಂತಿಲ್ಲ- ಟೋಲ್ ಸಂಗ್ರಹಕ್ಕೆ ವಿಶೇಷ ತಂತ್ರಜ್ಞಾನ ಅಳವಡಿಕೆಗೆ ಚಿಂತನೆ