ಬೆಂಗಳೂರು: ಮುಖ್ಯಮಂತ್ರಿಗಳೇ ಪಾಂಡವಪುರದ ಗದ್ದೆಯಲ್ಲಿ ನಾಟಿ ಮಾಡುವುದಲ್ಲ. ರಾತ್ರಿ ವೇಳೆ ನಮ್ಮ ಹೊಲಗಳಲ್ಲಿ ಕೆಲಸ ಮಾಡಿ ಎಂದು ರೈತರು ಮುಖ್ಯಮಂತ್ರಿಗಳಿಗೆ ಸವಾಲ್ ಹಾಕಿದ್ದಾರೆ.
ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ವಿವಿಧೆಡೆ ರೈತರ ಜಮೀನುಗಳಿಗೆ ನೀರು ಹಾಯಿಸಲು ಬೆಸ್ಕಾಂ ಸಿಬ್ಬಂದಿ ರಾತ್ರಿ ವೇಳೆ ವಿದ್ಯುತ್ ನೀಡುತ್ತಿದ್ದಾರೆ. ಬೆಸ್ಕಾಂ ಅಧಿಕಾರಿಗಳ ನಡೆಯನ್ನು ಖಂಡಿಸಿ ರಾಷ್ಟ್ರೀಯ ಕಿಸಾನ್ ಸಂಘಟನೆ ವತಿಯಿಂದ ಹಗಲಿನಲ್ಲಿ ವಿದ್ಯುತ್ ನೀಡುವಂತೆ ಬೆಸ್ಕಾಂ ಎಇಇಗೆ ಮನವಿ ಪತ್ರ ಸಲ್ಲಿಸಿದರು.
ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ರೈತ ಮುಖಂಡ ಭೀಮಯ್ಯ, ರಾತ್ರಿ ವೇಳೆ ವಿದ್ಯುತ್ ಕೊಟ್ಟರೆ ರೈತರು ಹೊಲ ಗದ್ದೆಗಳಲ್ಲಿ ಕೆಲಸ ಮಾಡುವುದಾದರು ಹೇಗೆ? ಹಾವು ಚೇಳು ಕಾಡು ಮೃಗಗಳ ನಡುವೆ ಜೀವ ಕೈಯಲ್ಲಿಡಿದು ಕೆಲಸ ಮಾಡಬೇಕು. ಮುಖ್ಯಮಂತ್ರಿಗಳೇ ನೀವು ಮಂಡ್ಯ ಜಿಲ್ಲೆ ಪಾಂಡವಪುರದಲ್ಲಿ ಹಗಲಿನಲ್ಲಿ ಭತ್ತ ನಾಟಿ ಮಾಡಿದ್ದೀರಿ. ಬನ್ನಿ ನಮ್ಮ ಹೊಲಗಳಲ್ಲಿ ರಾತ್ರಿ ವೇಳೆ ಕೆಲಸ ಮಾಡಿ, ಆಗ ರೈತರ ಕಷ್ಟ ನಿಮಗೆ ಮನವರಿಕೆ ಆಗುತ್ತದೆ ಎಂದು ಸಿಎಂ ಕುಮಾರ ಸ್ವಾಮಿ ಅವರಿಗೆ ಸವಾಲ್ ಹಾಕಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews