ನೆಲಮಂಗಲ: ಕಳೆದ ಇಪ್ಪತ್ತು ದಿನಗಳಿಂದ ಸುತ್ತಮುತ್ತಲಿನ ಗ್ರಾಮಸ್ಥರಿಗೆ ಉಪಟಳ ನೀಡುತ್ತಿದ್ದ ದೈತ್ಯ ಚಿರತೆಯೊಂದು ಬೋನಿಗೆ ಬಿದ್ದಿದೆ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಗಡಿ ಗ್ರಾಮವಾದ ಬರಗೂರು ಗ್ರಾಮದ ಬಳಿಯಲ್ಲಿ ಚಿರತೆ ಸೆರೆ ಸಿಕ್ಕಿದೆ.
ಗ್ರಾಮಸ್ಥರ ಒತ್ತಾಯದಿಂದ ಕಳೆದ ಒಂದು ವಾರದ ಹಿಂದೆ ನೆಲಮಂಗಲ ಅರಣ್ಯ ಅಧಿಕಾರಿಗಳು ಚಿರತೆ ಸೆರೆಗೆ ಬೋನ್‍ನ್ನು ಇರಿಸಿದ್ದರು. ಈ ದೈತ್ಯ ಚಿರತೆ ಪ್ರತಿದಿನ ಗ್ರಾಮದಲ್ಲಿ ಭಾರಿ ಆರ್ಭಟ ಮಾಡುತ್ತಿದ್ದು, ಗ್ರಾಮಸ್ಥರಲ್ಲಿ ಆತಂಕ ಮೂಡಿಸಿತ್ತು.
Advertisement
ಈ ಕಾರಣದಿಂದ ನೆಲಮಂಗಲ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿ ಹಲವಾರು ದಿನಗಳಿಂದ ನಾಗರಿಕರಿಗೆ ನಿದ್ದೆಗೆಡಿಸಿದ್ದ ಚಿರತೆ ಹಿಡಿಯಲು ಬೋನ್ ಹಾಕಿದ್ದರು. ಇಂದು ಗ್ರಾಮದ ದಿಣ್ಣೆ ಹೊಲ ಎಂಬಲ್ಲಿ ಆಹಾರ ಅರಸಿ ಬಂದು ಚಿರತೆ ಬೋನಿಗೆ ಬಿದ್ದಿದೆ. ಚಿರತೆ ಸೆರೆಯಿಂದ ಗ್ರಾಮಸ್ಥರು ನಿಟ್ಟುಸಿರು ಬಿಟ್ಟದ್ದಾರೆ.