ಬೆಂಗಳೂರು: ನೆಲಮಂಗಲದಲ್ಲಿ ಇತ್ತೀಚಿನ ದಿನಗಳಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಪಟ್ಟಣ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ.
ಇಂದು ಬೆಳಗ್ಗೆ ನೆಲಮಂಗಲ ಪಟ್ಟಣ ಠಾಣೆಯ ವ್ಯಾಪ್ತಿಯಲ್ಲಿನ 25ಕ್ಕೂ ಹೆಚ್ಚು ರೌಡಿ ಶೀಟರ್ ಗಳನ್ನು ಕರೆಸಿ, ಸಿಪಿಐ ಶಿವಣ್ಣ ಹಾಗೂ ಪಿಎಸ್ಐ ಮಂಜುನಾಥ್ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. ದಿನೇ ದಿನೇ ನೆಲಮಂಗಲ ಪಟ್ಟಣ ಬೆಳೆಯುತ್ತಿದ್ದು, ಅಪರಾಧಗಳು ಹೆಚ್ಚಾಗುತ್ತಿದ್ದವು. ಈ ಹಿನ್ನೆಲೆಯಲ್ಲಿ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಅಷ್ಟೇ ಅಲ್ಲದೇ ಹಿಂದಿನ ಪೊಲೀಸ್ ಪರೇಡ್ಗೆ ಆಗಮಿಸದವರಿಗೆ ವಾರ್ನಿಂಗ್ ನೀಡಿ ಯಾವುದೇ ಅಪರಾಧ ಕೃತ್ಯಗಳಲ್ಲಿ ಪಾಲ್ಗೊಳ್ಳದಂತೆ ಎಚ್ಚರಿಕೆ ನೀಡಿ ಕಳುಹಿಸಿದ್ದಾರೆ.