ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಇಂದು ಆಯೋಜಿಸಿದ್ದ ರಾಷ್ಟ್ರೀಯ ಶಿಕ್ಷಣ ನೀತಿ 2020ರ ಅನುಷ್ಠಾನಕ್ಕೆ ಕೇಂದ್ರ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತಾ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಚಾಲನೆ ನೀಡಿದರು.
Inauguration of NEP Implementation in Karnataka with Shri @BSBommai and Shri. @drashwathcn. #NEPKarnataka https://t.co/vhnfs49i9q
— Dharmendra Pradhan (@dpradhanbjp) August 23, 2021
Advertisement
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎನ್.ಇ.ಪಿ ಸಹಾಯವಾಣಿ, ಉನ್ನತ ಶಿಕ್ಷಣ ಅಂತರಾಷ್ಟೀಕರಣ , 2021- 22 ನೇ ಸಾಲಿಗೆ ಉನ್ನತ ಶಿಕ್ಷಣಕ್ಕೆ ಪ್ರವೇಶಾತಿ ಕಾರ್ಯಕ್ರಮಗಳನ್ನು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಸಮಿತಿ ಅಧ್ಯಕ್ಷ ಡಾ: ಕೆ.ಕಸ್ತೂರಿರಂಗನ್ ಸೇರಿದಂತೆ ಹಲವರನ್ನು ಸನ್ಮಾನಿಸಲಾಯಿತು.
Advertisement
ಉನ್ನತ ಶಿಕ್ಷಣ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಇಂದು ಆಯೋಜಿಸಿದ್ದ "ರಾಷ್ಟ್ರೀಯ ಶಿಕ್ಷಣ ನೀತಿ 2020"ರ ಅನುಷ್ಠಾನಕ್ಕೆ ಕೇಂದ್ರ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಉದ್ಯಮಶೀಲತಾ ಸಚಿವ @dpradhanbjp ರವರು ಚಾಲನೆ ನೀಡಿದರು. (1/3)#NEPKarnataka @PMOIndia pic.twitter.com/9HNiShmxyu
— CM of Karnataka (@CMofKarnataka) August 23, 2021
Advertisement
ಉನ್ನತ ಶಿಕ್ಷಣ ಸಚಿವ ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಸಂಸದ ಪಿ.ಸಿ.ಮೋಹನ್, ಉನ್ನತ ಶಿಕ್ಷಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಕುಮಾರ್ ನಾಯ್ಕ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.ಇದನ್ನೂ ಓದಿ: ಆರು ಜಿಲ್ಲೆಗಳ ರಸ್ತೆಗೆ ದಿವಂಗತ ಕಲ್ಯಾಣ್ ಸಿಂಗ್ ಹೆಸರು