ಲಕ್ನೋ: ಶಿಕ್ಷಣವನ್ನು ಸಂಕುಚಿತ ಮನಸ್ಥಿತಿ, ಚಿಂತನೆಯಿಂದ ಹೊರತರುವುದು ಹಾಗೂ 21ನೇ ಶತಮಾನದ ಆಧುನಿಕ ವಿಚಾರಗಳೊಂದಿಗೆ ಸಂಯೋಜಿಸುವುದು ರಾಷ್ಟ್ರೀಯ ಶಿಕ್ಷಣ ನೀತಿಯ ಉದ್ದೇಶವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
Advertisement
ಉತ್ತರಪ್ರದೇಶದ ಚುನಾವಣೆಯ ಬಳಿಕ ಪ್ರಧಾನಿ ಮೊದಲ ಬಾರಿಗೆ ವಾರಣಾಸಿಗೆ ಭೇಟಿ ನೀಡಿ ಮೂರು ದಿನಗಳ ವಿಚಾರ ಸಂಕಿರಣ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. 300ಕ್ಕೂ ಹೆಚ್ಚು ಶಿಕ್ಷಣ ತಜ್ಞರು ಈ ಸಂಕಿರಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದ ಕುರಿತು ಚರ್ಚಿಸುತ್ತಿದ್ದಾರೆ. ಇದನ್ನೂ ಓದಿ: ಮಕ್ಕಳ ಹೊಂದುವ ಕುರಿತು ಆಲಿಯಾ ಬಗ್ಗೆ ಅಚ್ಚರಿಯ ವಿಚಾರ ರಿವೀಲ್ ಮಾಡಿದ ರಣ್‌ಬೀರ್ ಕಪೂರ್
Advertisement
Advertisement
ಕಾರ್ಯಕ್ರಮ ಉದ್ಘಾಟಿಸಿದ ಬಳಿಕ ಮಾತನಾಡಿದ ಪ್ರಧಾನಿ, ಯುವಸಮೂಹವನ್ನು ಪದವಿಯೊಂದಿಗೆ ತಯಾರು ಮಾಡುವುದಲ್ಲ. ದೇಶವನ್ನು ಮುನ್ನಡೆಸುವ ಮಾನವ ಸಂಪನ್ಮೂಲ ರೂಪಿಸುವ ಮೂಲಕ ಶಿಕ್ಷಣ ನೀತಿ ಕೊಡುಗೆ ನೀಡಬೇಕು ಎಂದು ಸಲಹೆ ನೀಡಿದ್ದಾರೆ.
Advertisement
ಎನ್‌ಇಪಿ ಅನುಷ್ಠಾನಕ್ಕಾಗಿ ದೇಶದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಮೂಲ ಸೌಕರ್ಯಗಳನ್ನು ಪರಿಶೀಲಿಸುವ ಕೆಲಸ ಮಾಡಲಾಗುತ್ತಿದೆ. ಇದು ಪ್ರಾದೇಶಿಕ ಭಾಷೆಗಳಲ್ಲಿ ಶಿಕ್ಷಣಕ್ಕೆ ದಾರಿ ಮಾಡಿಕೊಡುತ್ತಿದ್ದು, ಸಂಸ್ಕೃತದಂತಹ ಪ್ರಾಚೀನ ಭಾಷೆಗಳನ್ನು ಮುಂದಕ್ಕೆ ಕೊಂಡೊಯ್ಯಲು ಅನುವು ಮಾಡಿಕೊಡುತ್ತದೆ ಎಂದು ಶ್ಲಾಘಿಸಿದರು. ಇದನ್ನೂ ಓದಿ: ಪಾಸ್‍ಪೋರ್ಟ್‍ಗಾಗಿ 2 ದಿನ ಕ್ಯೂನಲ್ಲಿ ನಿಂತು ಮಗುವಿಗೆ ಜನ್ಮ ನೀಡಿದ ಮಹಿಳೆ
ಇದಕ್ಕೂ ಮುನ್ನ ಪ್ರಧಾನಿ ಮೋದಿ ಅಕ್ಷಯ ಪಾತ್ರಾ ಮಧ್ಯಾಹ್ನದ ಬಿಸಿಯೂಟ ಅಡುಗೆಕೊಠಡಿಯನ್ನು ಉದ್ಘಾಟಿಸಿದರು. ಈ ಅಡುಗೆ ಕೊಠಡಿಯು ಸುಮಾರು 1 ಲಕ್ಷ ವಿದ್ಯಾರ್ಥಿಗಳಿಗೆ ಏಕಕಾಲದಲ್ಲಿ ಊಟ ತಯಾರಿಸುವ ಸಾಮರ್ಥ್ಯ ಹೊಂದಿದೆ.