– ಸಾವಿನ ಸಂಖ್ಯೆ 129ಕ್ಕೆ ಏರಿಕೆ
– ಮುಂದುವರಿದ ರಕ್ಷಣಾ ಕಾರ್ಯಾಚರಣೆ
ಕಠ್ಮಂಡು: ನೇಪಾಳದಲ್ಲಿ (Neapl Earthquake) ನಡೆದ ಭಾರೀ ಭೂಕಂಪನದಿಂದ ಜಾಜರ್ ಕೋಟ್ ಉಪ ಮೇಯರ್ (Jajarkot Deputy Mayor) ಸೇರಿ ಸಾವಿನ ಸಂಖ್ಯೆ 129ಕ್ಕೆ ಏರಿಕೆ ಆಗಿದೆ.
ಜಾಜರ್ ಕೋಟ್‍ನ ನಲ್ಗಢ್ ಪುರಸಭೆಯ ಉಪಮೇಯರ್ ಸರಿತಾ ಸಿಂಗ್ (Deputy Mayor Sarita Singh) ಅವರು ಸಾವನ್ನಪ್ಪಿದ್ದಾರೆ. ಉಪಮೇಯರ್ ಸಿಂಗ್ ಅವರು ಪಾಲಿಕೆಯ ಪ್ರಧಾನ ಕಚೇರಿಯಲ್ಲಿರುವ ತಮ್ಮ ನಿವಾಸದಲ್ಲಿ ಮಲಗಿದ್ದರು. ಈ ವೇಳೆ ಭೂಕಂಪನದಿಂದ ಕಟ್ಟಡದಡಿ ಸಿಲುಕಿ ಮೃತಪಟ್ಟಿದ್ದಾರೆ ಎಂದು ಕರ್ನಾಲಿ ಪ್ರಾಂತ್ಯದ ಪೊಲೀಸ್ ಮುಖ್ಯಸ್ಥ ಡಿಐಜಿ ಭೀಮ್ ಧಾಕಲ್ ಮಾಹಿತಿ ನೀಡಿದ್ದಾರೆ. ಉಪಮೇಯರ್ ಸರಿತಾ ಸಿಂಗ್ ನೇಪಾಳಿ ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿದ್ದಾರೆ.
Advertisement
Advertisement
ನವೆಂಬರ್ 3 ರಂದು ರಾತ್ರಿ 11:47ರ ಸುಮಾರಿಗೆ ಸಂಭವಿಸಿದ ಭೂಕಂಪವು ಕಠ್ಮಂಡು, ಸುತ್ತಮುತ್ತಲಿನ ಜಿಲ್ಲೆಗಳು ಮತ್ತು ನವದೆಹಲಿಯವರೆಗೂ ವ್ಯಾಪಕವಾದ ಪರಿಣಾಮವನ್ನು ಬೀರಿತು. ವರದಿಗಳ ಪ್ರಕಾರ, ಪಶ್ಚಿಮ ನೇಪಾಳದ ಜಾಜರ್ ಕೋಟ್ ಮತ್ತು ರುಕುಮ್ ಜಿಲ್ಲೆಗಳಲ್ಲಿ ಸರಿಸುಮಾರು 128 ಜನರು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು 140ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
Advertisement
Deeply saddened by loss of lives and damage due to the earthquake in Nepal. India stands in solidarity with the people of Nepal and is ready to extend all possible assistance. Our thoughts are with the bereaved families and we wish the injured a quick recovery. @cmprachanda
— Narendra Modi (@narendramodi) November 4, 2023
Advertisement
ಸದ್ಯ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲು ನೇಪಾಳ ಸೇನೆ ಮತ್ತು ನೇಪಾಳ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಭರದಿಂದ ಸಾಗಿದೆ. ನೇಪಾಳ ಪ್ರಧಾನಿ ಪುಷ್ಪಕಮಲ್ ದಹಲ್ (Pushpa Kamal Dahal) ಇಂದು ಬೆಳಗ್ಗೆ ವೈದ್ಯಕೀಯ ತಂಡದೊಂದಿಗೆ ಭೂಕಂಪದ ಘಟನೆಯ ಸ್ಥಳಕ್ಕೆ ತೆರಳಿದ್ದಾರೆ.
ಘಟನೆ ಸಂಬಂಧ ಭಾರತದ ಪ್ರಧಾನಿ ನರೇಂದ್ರ ಮೋದಿ ಕೂಡ ಎಕ್ಸ್ ನಲ್ಲಿ ಬರೆದುಕೊಂಡಿದ್ದು, ಸಂತಾಪ ಸೂಚಿಸಿದ್ದಾರೆ. ಭಾರತವು ನೇಪಾಳದ ಜನರೊಂದಿಗೆ ಒಗ್ಗಟ್ಟಿನಿಂದ ನಿಂತಿದೆ. ಹಾಗೆಯೇ ಸಾಧ್ಯವಿರುವ ಎಲ್ಲ ನೆರವನ್ನು ನೀಡಲು ಸಿದ್ಧವಾಗಿದೆ. ಮೃತರ ಕುಟುಂಬಸ್ಥರ ದುಃಖದಲ್ಲಿ ನಾವು ಪಾಲುದಾರರಾಗಿದ್ದೇವೆ. ಘಟನೆಯಲ್ಲಿ ಗಾಯಗೊಂಡವರು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಬಯಸುವುದಾಗಿ ತಿಳಿಸಿದ್ದಾರೆ.
Web Stories