InternationalLatestMain Post

ನೇಪಾಳದಲ್ಲಿ ಮೊದಲ ಬಾರಿಗೆ ಓಮಿಕ್ರಾನ್ ಪ್ರಕರಣ ಪತ್ತೆ – ಇಬ್ಬರಿಗೆ ಸೋಂಕು

ಕಾಠ್ಮಂಡು: ನೇಪಾಳದ ಹಿಮಾಲಯ ರಾಷ್ಟ್ರದಲ್ಲಿ ಕೊರೊನಾ ವೈರಸ್ ಹೊಸ ರೂಪಾಂತರಿ ತಳಿ ಓಮಿಕ್ರಾನ್ ದೃಢಪಟ್ಟ ಮೊದಲ ಪ್ರಕರಣ ವರದಿಯಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ನವೆಂಬರ್ 19 ರಂದು ವಿಮಾನದಲ್ಲಿ ಬಂದ 66 ವರ್ಷದ ವಿದೇಶಿ ಪ್ರಜೆಯೊಬ್ಬರಿಗೆ ಓಮಿಕ್ರಾನ್ ದೃಢಪಟ್ಟಿದ್ದು, ಅವರೊಂದಿಗೆ ಸಂಪರ್ಕ ಹೊಂದಿದ್ದ 71 ವರ್ಷದ ಮತ್ತೊಬ್ಬ ವ್ಯಕ್ತಿಗೂ ಓಮಿಕ್ರಾನ್ ದೃಢಪಟ್ಟಿದೆ. ಇದೀಗ ಇಬ್ಬರು ಸೋಂಕಿತರನ್ನು ಕ್ವಾರಂಟೈನ್‍ಗೊಳಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಇದನ್ನೂ ಓದಿ: ಅಮೇರಿಕಾದಲ್ಲಿ ಓಮಿಕ್ರಾನ್ ಮೊದಲ ಪ್ರಕರಣ ಪತ್ತೆ – ದಕ್ಷಿಣ ಆಫಿಕ್ರಾದಿಂದ ಬಂದ ವ್ಯಕ್ತಿಗೆ ಸೋಂಕು

ಸೋಂಕಿತರಿಬ್ಬರೊಂದಿಗೂ ಸಂಪರ್ಕ ಹೊಂದಿದ್ದ ಇತರ 66 ಮಂದಿಗೂ ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವರಿಗೆಲ್ಲಾ ನೆಗೆಟಿವ್ ವರದಿ ಬಂದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೇ ಸೋಂಕಿತರಿಬ್ಬರು ಸಹ  ಆರ್‌ಟಿಪಿಸಿಆರ್‌ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಹೊಂದಿದ್ದರು ಮತ್ತು ಇಬ್ಬರು ಸಂಪೂರ್ಣ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ ಎನ್ನಲಾಗುತ್ತಿದೆ.

ಸದ್ಯ ಈ ಕುರಿತಂತೆ ಸರ್ಕಾರಿ ಪ್ರಯೋಗಾಲಯವು ಓಮಿಕ್ರಾನ್ ರೂಪಾಂತರಿ ತಳಿ ಧೃಡಪಟ್ಟಿರುವ ಬಗ್ಗೆ ಮಾಹಿತಿ ನೀಡಿದ್ದು, ಬೇರೆ ಯಾವುದೇ ರೀತಿಯ ವಿವರಗಳನ್ನು ನೀಡಿಲ್ಲ. ಇದನ್ನೂ ಓದಿ: ಸೌದಿ ಅರೇಬಿಯಾದಲ್ಲಿ ಓಮಿಕ್ರಾನ್‌ ಮೊದಲ ಪ್ರಕರಣ ಪತ್ತೆ- ಉತ್ತರ ಆಫ್ರಿಕಾದಿಂದ ಬಂದ ವ್ಯಕ್ತಿಯಲ್ಲಿ ಸೋಂಕು!

ಕಳೆದ ವರ್ಷ ಕೊರೊನಾ ಸಾಂಕ್ರಾಮಿಕ ರೋಗದ ಆರಂಭದಿಂದಲು ನೇಪಾಳದಲ್ಲಿ 918,084 ಕೊರೊನಾವೈರಸ್ ಪ್ರಕರಣಗಳು ಮತ್ತು 11,541 ಸಾವುಗಳನ್ನು ವರದಿ ಮಾಡಿದೆ. ಕೇವಲ 28.6% ಮಂದಿ ಮಾತ್ರ ಕೋವಿಡ್-19 ವಿರುದ್ಧ ಸಂಪೂರ್ಣವಾಗಿ ಲಸಿಕೆ ಪಡೆದುಕೊಂಡಿದ್ದಾರೆ.

Leave a Reply

Your email address will not be published.

Back to top button