ಕಠ್ಮಂಡು: ನೇಪಾಳದಲ್ಲಿ(Nepal) ಯುವ ಜನತೆಯ ಪ್ರತಿಭಟನೆ (Protest) ತೀವ್ರಗೊಂಡಿದ್ದು ಪ್ರಧಾನಿ ನಿವಾಸಕ್ಕೆ ಬೆಂಕಿ ಇಟ್ಟಿದ್ದಾರೆ.
ನೇಪಾಳದಲ್ಲಿ ಸಾಮಾಜಿಕ ಜಾಲತಾಣ ನಿಷೇಧ ವಾಪಸ್ ಪಡೆದರೂ ಹೋರಾಟಗಾರರು ಪ್ರಧಾನಿ ಕೆ.ಪಿ. ಶರ್ಮಾ ಓಲಿ (KP Sharma Oli) ರಾಜೀನಾಮೆಗೆ ಬಿಗಿಪಟ್ಟು ಹಿಡಿದಿದ್ದಾರೆ. ಬಿಗಿಪಟ್ಟು ಹಿಡಿದ ಬೆನ್ನಲ್ಲೇ ಕೆ.ಪಿ. ಶರ್ಮಾ ಓಲಿ ಪ್ರಧಾನಿ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಪ್ರತಿಭಟನೆಯ ಬೆನ್ನಲ್ಲೇ ನೇಪಾಳದಲ್ಲಿ ಸಾಮಾಜಿಕ ಜಾಲತಾಣ ನಿಷೇಧ ವಾಪಸ್
#WATCH | Nepal | Protesters vandalise the Parliament gate as protests turn violent in Kathmandu.
People staged a massive demonstration against the ban on social media platforms.#Nepal #NepalProtests pic.twitter.com/MItP8SQPUa
— TIMES NOW (@TimesNow) September 8, 2025
ಇಂದು ಸಂಸತ್ ಭವನದ ಆವರಣಕ್ಕೆ ನುಗ್ಗಿದ ಪ್ರತಿಭಟನಾಕಾರರು ಸಂಸತ್ ಭವನದ ಗೋಡೆ ಉರುಳಿಸಿ ಆಕ್ರೋಶ ಹೊರಹಾಕಿದ್ದಾರೆ. ಉದ್ರಿಕ್ತರನ್ನು ಚದುರಿಸಲು ಸೇನಾ ಪಡೆ ಈಗ ಕಾರ್ಯಾಚರಣೆಗ ಇಳಿದಿದೆ.
ನೇಪಾಳದ ಎಲ್ಲಾ ವಿಮಾನ ನಿಲ್ದಾಣಗಳು ಬಂದ್ ಆಗಿವೆ. ದೇಶಿಯ ವಿಮಾನಗಳ ಹಾರಾಟ ಸಂಪೂರ್ಣ ಸ್ಥಗಿತವಾಗಿದೆ.