ಕಠ್ಮಂಡು: ನೇಪಾಳದಲ್ಲಿ (Nepal) ಹಿಂಸಾತ್ಮಕ ಪ್ರತಿಭಟನೆಯು ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ತಾತ್ಕಾಲಿಕವಾಗಿ ಮುಚ್ಚಲಾಗಿದ್ದ ಕಠ್ಮಂಡುವಿನ (Kathmandu) ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು (Tribhuvan International Airport) ಬುಧವಾರ ಮತ್ತೆ ತೆರಯಲಾಗಿದೆ.
ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಭದ್ರತಾ ಸಮಿತಿ ಸಭೆಯ ನಿರ್ಧಾರಕ್ಕೆ ಅನುಗುಣವಾಗಿ ಪ್ರತಿಕೂಲ ಪರಿಸ್ಥಿತಿಗಳಿಂದಾಗಿ ಸ್ಥಗಿತಗೊಳಿಸಲಾದ ವಿಮಾನಯಾನ ಸೇವೆಗಳನ್ನು ಈಗ ತೆರೆಯಲಾಗಿದೆ. ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರು ವಿಮಾನದ ಮಾಹಿತಿಗಾಗಿ ತಮ್ಮ ವಿಮಾನಯಾನ ಕಂಪನಿಗಳನ್ನು ಸಂಪರ್ಕಿಸಿ. ಅಲ್ಲದೇ ಅಧಿಕೃತ ವಿಮಾನಯಾನದ ಟಿಕೆಟ್‌ಗಳು ಮತ್ತು ಅಗತ್ಯ ದಾಖಲೆಗಳನ್ನು ತರುವಂತೆ ವಿನಂತಿಸಲಾಗಿದೆ ಎಂದು ನೇಪಾಳದ ನಾಗರಿಕ ವಿಮಾನಯಾನ ಪ್ರಾಧಿಕಾರ ತಿಳಿಸಿದೆ. ಇದನ್ನೂ ಓದಿ: ನೇಪಾಳದ 18 ಜಿಲ್ಲೆಗಳ ಜೈಲಿನಿಂದ 6 ಸಾವಿರಕ್ಕೂ ಹೆಚ್ಚು ಕೈದಿಗಳು ಪರಾರಿ
ಹಿಂಸಾತ್ಮಕ ಪ್ರತಿಭಟನೆಗೆ ತ್ರಿಭುವನ್ ಏರ್‌ಪೋರ್ಟ್ ಅನ್ನು ಬಂದ್ ಮಾಡಿದ್ದರಿಂದ ದೆಹಲಿಯಿಂದ ತೆರಳಬೇಕಿದ್ದ ಏರ್ ಇಂಡಿಯಾ, ಇಂಡಿಗೋ ಹಾಗೂ ನೇಪಾಳ ಏರ್‌ಲೈನ್ಸ್ ವಿಮಾನಗಳ ಹಾರಾಟವನ್ನು ರದ್ದುಗೊಳಿಸಲಾಗಿತ್ತು. ಇದನ್ನೂ ಓದಿ: Nepal | 120 ವರ್ಷಗಳಷ್ಟು ಹಳೆಯದಾದ, ಏಷ್ಯಾದ ಅತಿದೊಡ್ಡ ಅರಮನೆ ʻಸಿಂಹ ದರ್ಬಾರ್ʼ ಧಗಧಗ
ನೇಪಾಳದಲ್ಲಿ ಸೋಶಿಯಲ್ ಮೀಡಿಯಾಗಳನ್ನು ನಿಷೇಧಿಸಿದ್ದರಿಂದ ಅಲ್ಲಿನ ಜನರು ಬೀದಿಗಿಳಿದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಈ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿ 19ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದರು. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ನೇಪಾಳ ಸೇನೆಯು ತ್ರಿಭುವನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ವಶಕ್ಕೆ ಪಡೆದಿತ್ತು.
ಪ್ರತಿಭಟನಾಕಾರರು ರೊಚ್ಚಿಗೆದ್ದು ರಾಜಕೀಯ ನಾಯಕರ ಮನೆಗಳನ್ನು ಸುಟ್ಟುಹಾಕಿದ ಬೆನ್ನಲ್ಲೇ ಸೇನೆಯು ಸರ್ಕಾರದ ಸಚಿವಾಲಯ ಕಟ್ಟಡ `ಸಿಂಹ ದರ್ಬಾರ್’ (Singha Durbar) ಅನ್ನು ತನ್ನ ನಿಯಂತ್ರಣಕ್ಕೆ ಪಡೆದಿತ್ತು. ಸೇನೆಯು ಮಧ್ಯೆ ಪ್ರವೇಶಿಸಿದ ಬೆನ್ನಲ್ಲೇ ಇದೀಗ ನೇಪಾಳ ಸಹಜ ಸ್ಥಿತಿಗೆ ಮರಳಿದೆ.