ಚಿಕ್ಕೋಡಿ: ಸ್ವಾತಂತ್ರ ಸೇನಾನಿ ಸುಭಾಷ್ ಚಂದ್ರ ಬೋಸ್ ಹುಟ್ಟು ಹಬ್ಬದ ನಿಮಿತ್ತ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬಳಿಗೆರೆ ಸರಕಾರಿ ಪ್ರೌಢ ಶಾಲೆಯಲ್ಲಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಸುಭಾಷ್ ಚಂದ್ರ ಬೋಸರು ಬ್ರಿಟಿಷರ್ ವಿರುದ್ಧ ಸ್ವಾತಂತ್ರಕ್ಕಾಗಿ ಹೋರಾಟದ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು. ಸುಭಾಷ್ ಚಂದ್ರ ಬೋಸ್ ಅವರ ಫೋಟೋ ಪೂಜಾ ಕಾರ್ಯಕ್ರಮ ನೆರವೇರಿಸಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಇದನ್ನೂ ಓದಿ: ನೇತಾಜಿ ಜನ್ಮ ದಿನವನ್ನು ರಾಷ್ಟ್ರೀಯ ರಜಾದಿನವಾಗಿ ಘೋಷಿಸಿ: ಮಮತಾ ಬ್ಯಾನರ್ಜಿ
ಈ ಸಂದರ್ಭದಲ್ಲಿ ಮಾತನಾಡಿದ ಶಾಲೆಯ ಶಿಕ್ಷಕ ಸಿ.ಎಸ್.ಬುರ್ಲಿ ಅವರು ದೇಶ ಕಂಡ ಅಪ್ರತಿಮ ಹೋರಾಟಗಾರರಲ್ಲಿ ಸುಭಾಷ್ ಚಂದ್ರ ಬೋಸ್ ಆಗಿದ್ದರು. ಅವರ 125 ನೇ ಜಯಂತಿ ಉತ್ಸವವನ್ನು ಆಚರಿಸುತ್ತಿರುವುದು ಹೆಮ್ಮೆ ಎನಿಸುತ್ತಿದ್ದು, ಅವರ ಹೋರಾಟವನ್ನು ಪ್ರತಿಯೊಬ್ಬರು ಸ್ಮರಿಸಬೇಕು ಎಂದರು. ಗ್ರಾಮಸ್ಥರಾದ ಹೈದರ್ ಬಾಲದಾರ್, ವಿಜಯಕುಮಾರ್ ಪವಾರ್,ಸಂಜು ಕಾಂಬಳೆ, ಕೃಷ್ಣ ದೊಡ್ಡಮನಿ, ಶಾಲೆ ವಿದ್ಯಾರ್ಥಿಗಳು ಮತ್ತಿತರು ಉಪಸ್ಥಿತರಿದ್ದರು. ಇದನ್ನೂ ಓದಿ: ಸುಭಾಷ್ ಚಂದ್ರ ಬೋಸ್ ದೇಶಕ್ಕೆ ನೀಡಿದ ಕೊಡುಗೆ ಅಪಾರ: ಪ್ರಧಾನಿ ಮೋದಿ