ಬೆಂಗಳೂರು: ಭಾರತವನ್ನು ಬ್ರಿಟಿಷರ ಆಳ್ವಿಕೆಯಿಂದ ಮುಕ್ತಗೊಳಿಸಿ, ಭಾರತೀಯರೆಲ್ಲರೂ ಬ್ರಿಟಿಷರ ಗುಲಾಮಗಿರಿಯಿಂದ ಸ್ವತಂತ್ರರಾಗಬೇಕೆನ್ನುವುದು ಎಂಬ ಹೆಗ್ಗುರಿಯಿಂದ ಹೋರಾಡಿದ ಸುಭಾಷ್ ಚಂದ್ರ ಬೋಸ್ರವರು (Subhash Chandra Bose) ದೇಶಕ್ಕಾಗಿ ತಮ್ಮ ಪ್ರಾಣವನ್ನೇ ತ್ಯಾಗ ಮಾಡಿದ ಅಪ್ರತಿಮ ದೇಶಭಕ್ತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮ ದಿನದ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಇದನ್ನೂ ಓದಿ: ಮಂಗಳೂರಿನ ಮಸಾಜ್ ಪಾರ್ಲರ್ ಮೇಲೆ ರಾಮ್ ಸೇನಾ ಕಾರ್ಯಕರ್ತರಿಂದ ದಾಳಿ – ವ್ಯಕ್ತಿಯ ಮೇಲೆ ಹಲ್ಲೆ
Advertisement
Advertisement
ಇಂದು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 128 ನೇ ಜನ್ಮ ದಿನ. ದೇಶದ ಬಗ್ಗೆ ಅಪಾರ ಗೌರವಾಭಿಮಾನ ಹೊಂದಿದ್ದ ಮಹಾನ್ ದೇಶಭಕ್ತ. ಈಗಿನ ಐಎಎಸ್ನಂತೆ ಬ್ರಿಟೀಷರ ಕಾಲದಲ್ಲಿದ್ದ ಐಸಿಎಸ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದರು. ಆದರೆ ತಮ್ಮ ಉಜ್ವಲ ಭವಿಷ್ಯವನ್ನು ತ್ಯಾಗ ಮಾಡಿ ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಬದುಕನ್ನು ಮೀಸಲಾಗಿಟ್ಟರು. ಎರಡು ಬಾರಿ ಕಾಂಗ್ರೆಸ್ನ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು. ಮಹಾತ್ಮಾ ಗಾಂಧಿಯವರು ಪ್ರತಿಪಾದಿಸುತ್ತಿದ್ದ ಸತ್ಯ ಹಾಗೂ ಅಹಿಂಸೆಯ ಮಾರ್ಗದಲ್ಲಿ ನಡೆದು ಭಾರತ ಸ್ವಾತಂತ್ರ್ಯ ಹೊಂದುವುದು ಕಷ್ಟಸಾಧ್ಯ ಎಂಬುದು ಸುಭಾಷರ ಅಭಿಪ್ರಾಯವಾಗಿತ್ತು. ಆದ್ದರಿಂದ ಶಸ್ತ್ರಾಸ್ತ್ರಗಳನ್ನು ಬಳಸಿಯೇ ಬ್ರಿಟಿಷರನ್ನು ಭಾರತದಿಂದ ಹೊರದೂಡುವ ಉದ್ದೇಶದಿಂದ ಐಎನ್ಎ (ಇಂಡಿಯನ್ ನ್ಯಾಷನಲ್ ಆರ್ಮಿ) ಸ್ಥಾಪಿಸಿದರು. ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದಂದು ಅವರ ಜೀವನ-ಸಾಧನೆಗಳನ್ನು ಸ್ಮರಿಸುವ ಜೊತೆಗೆ ಅವರ ಆದರ್ಶಗಳ ಹಾದಿಯಲ್ಲಿ ನಡೆಯುವ ಸಂಕಲ್ಪ ಮಾಡಬೇಕಿದೆ. ಈ ದೆಸೆಯಲ್ಲಿ ಸರ್ಕಾರ ಈ ಮಹಾನ್ ನಾಯಕನಿಗೆ ಗೌರವ ಸಲ್ಲಿಸಿದೆ ಎಂದರು. ಇದನ್ನೂ ಓದಿ: ಕುರಿ ವ್ಯಾಪಾರಿಗಳಿಂದ 4 ಲಕ್ಷ ಕಿತ್ತು ಪರಾರಿ – 21 ಪ್ರಕರಣದಲ್ಲಿದ್ದ 3 ಆರೋಪಿಗಳು ಅರೆಸ್ಟ್
Advertisement
Advertisement
ದಾವೋಸ್ ಶೃಂಗಸಭೆಯಲ್ಲಿ ಭಾಗವಹಿಸುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಈ ಸಾಲಿನ ಆಯವ್ಯಯದ ಸಿದ್ಧತೆಯಲ್ಲಿ ತೊಡಗಿಕೊಳ್ಳ ಬೇಕಾಗಿರುವುದರಿಂದ 2025ರ ದಾವೋಸ್ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಕ್ರಿಮಿನಲ್ ಬ್ಯಾಗ್ರೌಂಡ್ ಬಗ್ಗೆ ಸಾಚಾ ಅಂತಾರೆ, ಸಮಯ ಬಂದಾಗ ಜನರ ಮುಂದೆ ಬಿಚ್ಚಿಡ್ತೀನಿ: ರೆಡ್ಡಿಗೆ ರಾಮುಲು ವಾರ್ನಿಂಗ್