ವಾಷಿಂಗ್ಟನ್: ವಿಶ್ವದ ಪ್ರಮುಖ ಒಟಿಟಿ ಸ್ಟ್ರೀಮಿಂಗ್ ಕಂಪನಿ ನೆಟ್‌ಫ್ಲಿಕ್ಸ್ ದಶಕದಲ್ಲೇ ಮೊದಲ ಬಾರಿಗೆ ಭಾರೀ ಸಂಖ್ಯೆಯಲ್ಲಿ ತನ್ನ ಚಂದಾದಾರರನ್ನು ಕಳೆದುಕೊಂಡಿದೆ.
ರಷ್ಯಾ-ಉಕ್ರೇನ್ ಯುದ್ಧದ ಹಿನ್ನೆಲೆಯಲ್ಲಿ ನೆಟ್‌ಫ್ಲಿಕ್ಸ್ ರಷ್ಯಾದಲ್ಲಿ ತನ್ನ ಸೇವೆಯನ್ನು ಸ್ಥಗಿತಗೊಳಿಸಿತ್ತು. ಈ ಕಾರಣದಿಂದಾಗಿ ನೆಟ್‌ಫ್ಲಿಕ್ಸ್ ಬರೋಬ್ಬರಿ 2 ಲಕ್ಷ ಚಂದಾದಾರರನ್ನು ಕಳೆದುಕೊಂಡಿದೆ. ಈ ವರ್ಷದ ಮೊದಲ ತ್ರೈಮಾಸಿಕ ವರದಿಯಲ್ಲಿ ನೆಟ್‌ಫ್ಲಿಕ್ಸ್ 22.06 ಕೋಟಿ ಚಂದಾದಾರರನ್ನು ಹೊಂದಿರುವುದಾಗಿ ತಿಳಿಸಿದೆ. ಇದು ಕಳೆದ ವರ್ಷದ ವರದಿಗಿಂತಲೂ ಕಡಿಮೆಯಾಗಿದೆ. ಇದನ್ನೂ ಓದಿ: ಶ್ರೀಲಂಕಾದಲ್ಲಿ ಒಂದೇ ದಿನ ಪೆಟ್ರೋಲ್ ಬೆಲೆ 84 ರೂ. ಏರಿಕೆ – ಪ್ರತಿಭಟನಾಕಾರರ ಮೇಲೆ ಫೈರಿಂಗ್
Advertisement
Advertisement
ನೆಟ್‌ಫ್ಲಿಕ್ಸ್‌ನ ಕಳೆದ ವರ್ಷದ ನಿವ್ವಳ ಆದಾಯ 1.7 ಶತಕೋಟಿ ಡಾಲರ್(12.98 ಸಾವಿರ ಕೋಟಿ ರೂ.) ಇತ್ತು. ಈ ವರ್ಷ 1.6 ಶತಕೋಟಿ ಡಾಲರ್(12.22 ಸಾವಿರ ಕೋಟಿ ರೂ.)ಗೆ ಇಳಿಕೆಯಾಗಿದೆ ಎಂದು ಸಿಲಿಕಾನ್ ವ್ಯಾಲಿ ಟೆಕ್ ಸಂಸ್ಥೆ ವರದಿ ಮಾಡಿದೆ. ಈ ಅಂಕಿ ಅಂಶ ಬಿಡುಗಡೆಯ ಬಳಿಕ ನೆಟ್‌ಫ್ಲಿಕ್ಸ್ ಷೇರು ಸುಮಾರು ಶೇ.25 ರಷ್ಟು ಕುಸಿದಿದೆ. ಇದನ್ನೂ ಓದಿ: ಚೀನಾ ಮೀರಿಸಿದ ಭಾರತ – ವಿಶ್ವದಲ್ಲೇ ಅತೀ ವೇಗದ ಅಭಿವೃದ್ಧಿ
Advertisement
ನಾವು ಬಯಸಿದಷ್ಟು ವೇಗವಾಗಿ ನಮ್ಮ ಆದಾಯ ಹೆಚ್ಚುತ್ತಿಲ್ಲ. 2020ರಲ್ಲಿ ಕೋವಿಡ್ ಕಾರಣದಿಂದ ನಮ್ಮ ಕಂಪನಿಯ ಆದಾಯ ಗಣನೀಯವಾಗಿ ಏರಿಕೆ ಕಂಡಿತ್ತು. 2021ರಲ್ಲಿ ಕೋವಿಡ್ ಇಳಿಕೆಯಿಂದಾಗಿ ನಿಧಾನಗತಿಯಲ್ಲಿ ಆದಾಯವೂ ಇಳಿಯತೊಡಗಿತು ಎಂದು ನೆಟ್‌ಫ್ಲಿಕ್ಸ್ ಇತ್ತೀಚೆಗೆ ತಿಳಿಸಿದೆ.