ಸಿಂಧುಗೆ ವಿಶ್ ಮಾಡಿದ ಕಾಂಗ್ರೆಸ್- ತರಾಟೆಗೆ ತೆಗೆದುಕೊಂಡ ನೆಟ್ಟಿಗರು

Public TV
2 Min Read
sindhu

ಬೆಂಗಳೂರು: ಈ ಬಾರಿ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ್ಕೆ ಮುತ್ತಿಟ್ಟ ಪಿ.ವಿ ಸಿಂಧು ಅವರಿಗೆ ದೇಶಾದ್ಯಂತ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ. ಕಾಂಗ್ರೆಸ್ ಕೂಡ ಸಿಂಧು ಅವರಿಗೆ ವಿಶ್ ಮಾಡಿದ್ದು, ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ.

ಹೌದು. ವಿಶ್ ಮಾಡುವ ಭರದಲ್ಲಿ ಕಾಂಗ್ರೆಸ್ ಎಡವಟ್ಟು ಮಾಡಿಕೊಂಡಿದೆ. ಚಿನ್ನದ ಪದಕ ಗೆದ್ದ ಭಾರತದ ಮೊದಲ ಆಟಗಾರ್ತಿ ಪಿ.ವಿ ಸಿಂಧು ಅವರಿಗೆ ಶುಭಾಶಯಗಳು. ಈ ಮೂಲಕ ನೀವು ನಿಮ್ಮ ರಾಷ್ಟ್ರಕ್ಕೆ ಹೆಮ್ಮೆ ತಂದಿದ್ದೀರಿ ಎಂದು ಟ್ವೀಟ್ ಮಾಡಿಕೊಂಡಿದೆ.

ಕಾಂಗ್ರೆಸ್ ಟ್ವೀಟ್ ಮಾಡುತ್ತಿದ್ದಂತೆಯೇ ನೆಟ್ಟಿಗರು ತರಾಟೆಗೆ ತೆಗೆದುಕೊಂಡಿದ್ದಾರೆ. `ನಿಮ್ಮ ರಾಷ್ಟ್ರ’ ಈ ರೀತಿ ಹೇಳಲು ನಿಮಗೆ ನಾಚಿಕೆಯಾಗಬೇಕು ಎಂದು ಹೇಳಿದರೆ, ಮತ್ತೊಬ್ಬರು ಈಗಲೇ ಆ ಪದವನ್ನು ಡಿಲೀಟ್ ಮಾಡಿ ಎಂದು ಕಿಡಿಕಾರಿದ್ದಾರೆ.

ಮತ್ತೆ ಕೆಲವರು `ನಿಮ್ಮ ರಾಷ್ಟ್ರ’ ನಾ.. ನಂಗ್ಯಾಕೋ ಕಾಂಗ್ರೆಸ್ ಮುಖ್ಯ ಕಚೇರಿ ಪಾಕಿಸ್ತಾನಕ್ಕೆ ಶಿಫ್ಟ್ ಆದಂತೆ ಕಾಣುತ್ತಿದೆ. ಪಾಕಿಸ್ತಾನದ ವಶದಲ್ಲಿರುವ ಪಕ್ಷಗಳು ಮಾತ್ರ ಈರೀತಿಯ ಹೇಳಿಕೆಗಳನ್ನು ನೀಡಬಹುದು. ಅದ್ಭುತ, ನಿಮಗೆ ನಾಚಿಕೆಯಾಗಬೇಕು. ನಿಮ್ಮ ಇಂತಹ ಕೆಲಸದಿಂದಾಗಿಯೇ ಇಂದು ಇಡೀ ರಾಷ್ಟ್ರ ನಿಮ್ಮನ್ನು ದ್ವೇಷಿಸುವಂತಾಗಿದೆ ಎಂದು ಗರಂ ಆಗಿದ್ದಾರೆ. ಒಟ್ಟಿನಲ್ಲಿ ಕಾಂಗ್ರೆಸ್ ಮಾಡಿರುವ ಟ್ವೀಟ್ ಇದೀಗ ಸಾಕಷ್ಟು ಚರ್ಚೆಗೆ ಗ್ರಾಸವಾಗುವಂತೆ ಮಾಡಿದೆ. ಈವರೆಗೆ ಸುಮಾರು ಸಾವಿರಕ್ಕೂ ಹೆಚ್ಚು ರೀಟ್ವೀಟ್ ಗಳು ಬಂದಿವೆ.

24 ವರ್ಷದ ಹೈದರಾಬಾದ್‍ನ ಆಟಗಾರ್ತಿ ಪಿ.ವಿ.ಸಿಂಧು ಅವರು ಈ ಹಿಂದೆ ಎರಡು ಬಾರಿ ಫೈನಲ್ ಪ್ರವೇಶ ಮಾಡಿದ್ದರು. ಆದರೆ ಪ್ರಶಸ್ತಿಯಿಂದ ವಂಚಿತರಾಗಿದ್ದ ಅವರು ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟಿದ್ದರು. ಆದರೆ ಈ ಬಾರಿಯ ಫೈನಲ್ ಪ್ರವೇಶದಲ್ಲಿ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‍  ಶಿಪ್ ಪ್ರಶಸ್ತಿ ಗೆದ್ದಿದ್ದಾರೆ.

ಸಿಂಧು ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‍ಶಿಪ್‍ನಲ್ಲಿ ಶನಿವಾರ ನಡೆದ ಸೆಮಿಫೈನಲ್ ಕದನದಲ್ಲಿ ಚೀನಾದ ಚೆನ್ ಯು ಫೀ ವಿರುದ್ಧ ಕೇವಲ 40 ನಿಮಿಷಗಳಲ್ಲಿ 21-7, 21-14 ಅಂತರದ ಸುಲಭ ಗೆಲುವು ಸಾಧಿಸಿ ಪ್ರಶಸ್ತಿ ಸುತ್ತನ್ನು ಪ್ರವೇಶಿಸಿದ್ದರು.

ಭಾರತದ ದಂತಕತೆ ಪ್ರಕಾಶ್ ಪಡುಕೋಣೆ ಅವರು 1983ರ ವಿಶ್ವ ಚಾಂಪಿಯನ್‍ಶಿಪ್‍ನಲ್ಲಿ ಕಂಚಿನ ಪದಕ ಗೆದ್ದಿದ್ದರು. ಈ ಪ್ರಶಸ್ತಿ ಗೆದ್ದ ಭಾರತದ ಮೊದಲ ಆಟಗಾರ ಎನಿಸಿದ್ದರು. ಇದಾದ 26 ವರ್ಷಗಳ ನಂತರ ಭಾರತಕ್ಕೆ ಪ್ರಶಸ್ತಿ ಒಲಿದಿದೆ.

Share This Article
Leave a Comment

Leave a Reply

Your email address will not be published. Required fields are marked *