ಶಾರುಖ್ ಖಾನ್ ನಟನೆಯ ಪಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ನಾಯಕಿಯಾಗಿ ನಟಿಸಿದ್ದಾರೆ. ಆ ಸಿನಿಮಾದ ಹಾಡೊಂದು ನಿನ್ನೆ ಬಿಡುಗಡೆ ಆಗಿದ್ದು, ಅಗತ್ಯಕ್ಕಿಂತ ಹೆಚ್ಚೇ ಅವರು ಬಿಚ್ಚಮ್ಮನಾಗಿ ಕಾಣಿಸಿಕೊಂಡಿದ್ದಾರೆ. ಹಾಡಿನಲ್ಲಿ ಹಾಕಿರುವ ಕಾಸ್ಟ್ಯೂಮ್ ಬಗ್ಗೆ ನೆಟ್ಟಿಗರು ಸಖತ್ತಾಗಿಯೇ ಕಾಲೆಳೆದಿದ್ದಾರೆ. ಮದುವೆ ನಂತರವೂ ಇದೆಲ್ಲ ಬೇಕಿತ್ತಾ ಎಂದು ಪ್ರಶ್ನೆ ಮಾಡಿದ್ದಾರೆ. ಹಾಡಿಗೂ ಕಾಸ್ಟ್ಯೂಮ್ ಗೂ ಸಂಬಂಧ ಏನಿದೆ ಎಂದು ಹಲವರು ಪ್ರಶ್ನಿಸಿದ್ದಾರೆ. ಆದರೂ, ಹಾಡು ಮಾತ್ರ ದಾಖಲೆ ರೀತಿಯಲ್ಲಿ ವೀಕ್ಷಕರನ್ನು ತಲುಪಿದೆ.
ಈಗಾಗಲೇ ಸಿನಿಮಾದ ಫಸ್ಟ್ ಲುಕ್ ಮೂಲಕ ಸಾಕಷ್ಟು ಭರವಸೆ ಮೂಡಿಸಿರುವ ಈ ಸಿನಿಮಾ, ಮೊದಲ ಹಾಡಿನ ಮೂಲಕ ಪ್ರಚಾರ ಆರಂಭಿಸಲಿದೆ. ದೀಪಿಕಾ ಪಡುಕೋಣೆ ಮತ್ತು ಶಾರುಖ್ ಖಾನ್ ಕಾಂಬಿಷೇನ್ ನ ಸಿನಿಮಾ ಇದಾಗಿದ್ದು, ಶುರುವಿನಿಂದ ಈವರೆಗೂ ಕುತೂಹಲವನ್ನು ಕಾಪಾಡಿಕೊಂಡೇ ಬರುತ್ತಿದೆ. ಇದನ್ನೂ ಓದಿ: `ಕಾಂತಾರ’ ನೋಡಿ ತುಂಬಾ ಕಲಿತೆ: ರಿಷಬ್ ಚಿತ್ರಕ್ಕೆ ಹೃತಿಕ್ ರೋಷನ್ ಮೆಚ್ಚುಗೆ
ನಿನ್ನೆ ಹಾಡು ರಿಲೀಸ್ ಆಗುತ್ತಿರುವ ವಿಷಯವನ್ನು ಸ್ವತಃ ಶಾರುಖ್ ಖಾನ್ ಅವರೇ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದರು. ಈ ಹಾಡನ್ನು ನೋಡಲು ತಾವೂ ಕೂಡ ಕಾತರದಿಂದ ಕಾಯುತ್ತಿರುವುದಾಗಿಯೂ ಅವರು ಹೇಳಿಕೊಂಡಿದ್ದರು. ಅಲ್ಲದೇ ಅಭಿಮಾನಿಗಳು ಕೂಡ ಅಷ್ಟೇ ಕುತೂಹಲದಿಂದಲೇ ಹಾಡಿಗಾಗಿ ಕಾದಿದ್ದರು. ಬಿಡುಗಡೆಯಾದ ಹಾಡಿಗೆ ಅಭಿಮಾನಿಗಳು ಕೂಡ ಜೈಕಾರ ಹಾಕಿದ್ದಾರೆ.
ಇದು ಶಾರುಖ್ ಖಾನ್ ವೃತ್ತಿ ಜೀವನದ ಮಹತ್ವದ ಸಿನಿಮಾ ಎನ್ನಲಾಗುತ್ತಿದ್ದು, ಸತತ ಸೋಲಿನ ಬಳಿಕೆ ಬಾಲಿವುಡ್ ಗೆ ಈ ಸಿನಿಮಾ ಶಕ್ತಿ ತುಂಬಲಿದೆ ಎಂದು ಹೇಳಲಾಗುತ್ತಿದೆ. ದೀಪಿಕಾ ಪಡುಕೋಣೆ ಮತ್ತು ಶಾರುಖ್ ಕಾಂಬಿನೇಷನ್ ಇರುವುದರಿಂದ ಬಾಕ್ಸ್ ಆಫೀಸಿನಲ್ಲೂ ಈ ಸಿನಿಮಾ ಹಿಟ್ ಆಗಲಿದೆ ಎನ್ನುವುದು ಸಿನಿ ಪಂಡಿತರ ಲೆಕ್ಕಾಚಾರ. ಇಂದು ಬಿಡುಗಡೆ ಆಗಿರುವ ಹಾಡು ಅಂಥದ್ದೊಂದು ಭರವಸೆಯನ್ನೂ ಮೂಡಿಸಿದೆ.