ಬೆಂಗಳೂರು: ನಮ್ಮ ಮೆಟ್ರೋದ (Namma Metro) ಸುರಂಗ ಮಾರ್ಗಗಳಲ್ಲಿ ನೆಟ್‌ವರ್ಕ್ ಸಮಸ್ಯೆ ಉಂಟಾಗುತ್ತಿರುವ ಹಿನ್ನೆಲೆ ವೈಫೈ ಅಳವಡಿಸಲು ಬಿಎಂಆರ್‌ಸಿಎಲ್ (BMRCL) ಮುಂದಾಗಿದೆ.
ಮೆಟ್ರೋ ಮಾರ್ಗಗಳಲ್ಲಿ ಉಂಟಾಗುವ ನೆಟ್‌ವರ್ಕ್ ಸಮಸ್ಯೆ ನಿವಾರಣೆಗೆ ಬಿಎಂಆರ್‌ಸಿಎಲ್, ಮೆಟ್ರೋ ನಿಲ್ದಾಣಗಳಲ್ಲಿ ಐಬಿಎಸ್, ಬಿಟಿಎಸ್ ಸೆಲ್ಯುಲಾರ್ ಟವರ್ ಮತ್ತು ಪೋಲ್‌ಗಳನ್ನು ಇಟ್ಟು ವೈಫೈ ಮೂಲಕ ಗ್ರಾಹಕರಿಗೆ 4G, 5G ಸೇವೆ ಒದಗಿಸಲು ಮುಂದಾಗಿದೆ.ಇದನ್ನೂ ಓದಿ: 40 ಲಕ್ಷ ರೂ. ವಹಿವಾಟು ನಡೆಸಿದ 6 ಸಾವಿರ ಮಂದಿಗೆ ನೋಟಿಸ್: ವಾಣಿಜ್ಯ ತೆರಿಗೆ ಇಲಾಖೆ
ನಮ್ಮ ಮೆಟ್ರೋ ಎರಡನೇ ಹಂತದ ಸುರಂಗ ಹಾಗೂ ಎತ್ತರಿಸಿದ ಮಾರ್ಗದಲ್ಲಿ ನಿರಂತರ ಮತ್ತು ಸುಗಮ ಮೊಬೈಲ್ ಸಂಪರ್ಕ ಒದಗಿಸಲು ಅಡ್ವಾನ್‌ಸ್ಡ್ ಕಮ್ಯೂನಿಕೇಶನ್ ಆ್ಯಂಡ್ ಎಲೆಕ್ಟ್ರಾನಿಕ್ಸ್ ಸಿಸ್ಟಮ್ಸ್ ಕಂಪನಿ ಸಂಸ್ಥೆಯೊಂದಿಗೆ ಬಾಡಿಗೆ ಒಪ್ಪಂದಕ್ಕೆ ಸಹಿ ಹಾಕಿದೆ. ಈ ಮೂಲಕ ಮೆಟ್ರೋ ಮಾರ್ಗದ ಅಲ್ಲಲ್ಲಿ ಪ್ರಯಾಣಿಕರಿಗೆ ಉಂಟಾಗುತ್ತಿರುವ ನೆಟ್‌ವರ್ಕ್ ಸಮಸ್ಯೆ ತಪ್ಪಲಿದೆ. ವಿಶೇಷವಾಗಿ ಭೂಗತ ಮಾರ್ಗವಿರುವ ಡೈರಿ ವೃತ್ತದಿಂದ ನಾಗವಾರದವರೆಗೆ 12 ನಿಲ್ದಾಣಗಳ ನಡುವೆ ಸಂಚರಿಸುವ ಪ್ರಯಾಣಿಕರಿಗೆ ಅನುಕೂಲ ಆಗಲಿದೆ.
ನಮ್ಮ ಮೆಟ್ರೋ ಎರಡನೇ ಹಂತದ ಮಾರ್ಗಗಳಲ್ಲಿ ನಿರಂತರ ಮತ್ತು ಸುಗಮ ಮೊಬೈಲ್ ಸಂಪರ್ಕವನ್ನು ಒದಗಿಸುವ ಸಲುವಾಗಿ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ, (ಬಿಎಂಆರ್‌ಸಿಎಲ್) ಎಡ್ಯಾನ್ಸ್ ಕಮ್ಯೂನಿಕೇಶನ್ ಅಂಡ್ ಎಲೆಕ್ಟ್ರಾನಿಕ್ಸ್ ಸಿಸ್ಟಮ್ಸ್ ಕಂಪನಿ (ACES India Pvt. Ltd) ಸಂಸ್ಥೆಯೊಂದಿಗೆ ಬಾಡಿಗೆ ಒಪ್ಪಂದಕ್ಕೆ ಸಹಿ ಹಾಕಿದೆ. pic.twitter.com/6EWkITwKSK
— ನಮ್ಮ ಮೆಟ್ರೋ (@OfficialBMRCL) July 16, 2025
ಪ್ರಯಾಣ ದರದ ಹೊರತಾಗಿ ನಿಗಮಕ್ಕೆ ಆದಾಯ (ವೈ-ಫೈಗೆ ವಿಧಿಸುವ ಶುಲ್ಕದ ರೂಪದಲ್ಲಿ) ಕೂಡ ಬರಲಿದೆ. ಇದು 13 ವರ್ಷಗಳ ಪರವಾನಗಿ ಅವಧಿಯ ಒಪ್ಪಂದವಾಗಿದೆ. ಈ ವೇಳೆ ಬಿಎಂಆರ್‌ಸಿಎಲ್ ಕಾರ್ಯನಿರ್ವಾಹಕ ನಿರ್ದೇಶಕ (ಸಿಸ್ಟಮ್ಸ್) ಎ.ಎಸ್. ಶಂಕರ್ ಎಸಿಇಎಸ್‌ಇ ಇಂಡಿಯಾ ವ್ಯವಸ್ಥಾಪಕ ನಿರ್ದೇಶಕ ಮೊಹಮ್ಮದ್ ಎನ್. ಮಝರ್ ಸಹಿಹಾಕಿದರು. ಬಿಎಂಆರ್‌ಸಿಎಲ್ ನಿರ್ದೇಶಕ ಸುಮಿತ್ ಭಟ್ನಾಗರ್ ಹಾಗೂ ಎಸಿಇಎಸ್ ಸಿಇಒ ಡಾ.ಅಕ್ರಮ್ ಅಬುರಾಸ್ ಹಾಗೂ ಅಧಿಕಾರಿಗಳು ಇದ್ದರು.ಇದನ್ನೂ ಓದಿ: ಭಾರೀ ಮಳೆಗೆ ಭೂಕುಸಿತ, ಓರ್ವ ಮಹಿಳೆ ಸಾವು – ಅಮರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ