ನವದೆಹಲಿ: ತಟಸ್ಥ ನಿಲುವಿನ ಬಿಜೆಪಿ ನಾಯಕರಿಗೆ ಯಡಿಯೂರಪ್ಪ ಕುಟುಂಬದ ಮೇಲೆ ಆಕ್ರೋಶ ಇದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ತಿಳಿಸಿದರು.
ಬಿಜೆಪಿ ಬಣ ಫೈಟ್ ನಡುವೆ ಯತ್ನಾಳ್ ನೇತೃತ್ವದ ಟೀಂ ದೆಹಲಿಯಲ್ಲಿ ಬೀಡುಬಿಟ್ಟಿದೆ. ನಿನ್ನೆ ರಾತ್ರಿ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರನ್ನು ಯತ್ನಾಳ್ ತಂಡ ಭೇಟಿಯಾಗಿದೆ. ಪಕ್ಷದ ಬೆಳವಣಿಗೆಗಳ ಬಗ್ಗೆ ನಾಯಕರು ಸಮಾಲೋಚನೆ ನಡೆಸಿದ್ದಾರೆ. ಇದನ್ನೂ ಓದಿ: ವಿಜಯೇಂದ್ರ ಕೆಳಗಿಳಿಸಲು ಆಗಲ್ಲ, ಒಂದು ಸಾರಿ ಅಧ್ಯಕ್ಷರಾದ್ರೆ ಎಲ್ರೂ ಒಪ್ಪಿಕೊಳ್ಳಲೇಬೇಕು: ಯತ್ನಾಳ್‌ಗೆ ಶ್ರೀರಾಮುಲು ಟಾಂಗ್
Advertisement
Advertisement
ಭೇಟಿಗೂ ಮುನ್ನ ಪ್ರತಿಕ್ರಿಯೆ ನೀಡಿದ ಯತ್ನಾಳ್, ಆರು ಪೇಜ್ ಉತ್ತರ ತಯಾರು ಮಾಡಿದ್ದೇನೆ. ಅದನ್ನು ನೀಡುತ್ತೇನೆ. ಜೊತೆಗೆ ವಿವರಣೆ ಕೊಡುತ್ತೇನೆ. ಪಕ್ಷದಲ್ಲಿ ತಟಸ್ಥ ನಿಲುವು ಹೊಂದಿರುವ ನಾಯಕರು ಇದ್ದಾರೆ. ಅವರಿಗೆ ಯಡಿಯೂರಪ್ಪ ಕುಟುಂಬದ ಮೇಲೆ ಆಕ್ರೋಶ ಇದೆ. ಅವರು ಬಹಿರಂಗವಾಗಿ ಮಾತನಾಡುತ್ತಿಲ್ಲ ಎಂದು ಹೇಳಿದರು.
Advertisement
ಭ್ರಷ್ಟಾಚಾರ ಕುಟುಂಬದ ಕಪಿಮುಷ್ಠಿಯಿಂದ ಹೊರ ಬರಬೇಕು ಎನ್ನುವ ಭಾವನೆ ಎಲ್ಲರಲ್ಲಿ ಇದೆ. ಯಾವ ಕಡೆಗೂ ವಾಲದ ರಾಷ್ಟ್ರೀಯ ನಾಯಕರನ್ನು ಕಳುಹಿಸಿ ಎಲ್ಲರ ಅಭಿಪ್ರಾಯ ಸಂಗ್ರಹ ಮಾಡಬೇಕು. ವಿಜಯೇಂದ್ರ ಅವರು ಟೀಂ ಮಾಡಿಕೊಂಡು ನಿಷ್ಠಾವಂತ ಕಾರ್ಯಕರ್ತರನ್ನು ಹೇಗೆ ತುಳಿಯುವ ಕೆಲಸ ಮಾಡಿದ್ದಾರೆ. ಹೊಂದಾಣಿಕೆ ರಾಜಕೀಯ, ಕುಟುಂಬ ರಾಜಕೀಯ, ಹಿಂದುತ್ವದಲ್ಲಿ ಹೇಗೆ ರಾಜೀ ಆಗಿದೆ ಇರಬೇಕು ಎಂಬ ಎಲ್ಲವನ್ನು ಪತ್ರದಲ್ಲಿ ಬರೆದಿದ್ದೇನೆ. ನಿಷ್ಠಾವಂತ ನಾಯಕರನ್ನು ಬೆಂಗಳೂರಿಗೆ ಕಳುಹಿಸಿದರೆ ಉಳಿದ ದಾಖಲೆ ಕೊಡುತ್ತೇನೆ ಎಂದು ಹೇಳುತ್ತೇನೆ ಎಂದರು. ಇದನ್ನೂ ಓದಿ: ಮುಡಾದಲ್ಲಿ 700 ಕೋಟಿ ಅವ್ಯವಹಾರ – ಬಡವರ ಸೈಟು ಶ್ರೀಮಂತರ ಪಾಲು: ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ವಾಗ್ದಾಳಿ
Advertisement
ನಿನ್ನೆ ನಡೆದ ಸಂಸದರ ಸಭೆಯಲ್ಲಿ ಯಾರೂ ನನ್ನ ವಿರುದ್ಧ ಮಾತನಾಡಿಲ್ಲ. ನನ್ನ ಉಚ್ಚಾಟನೆ ಮಾಡಿ ಎಂದು ಯಾರೂ ಹೇಳಿಲ್ಲ. ಎಲ್ಲರೂ ಪಕ್ಷದ ಪರವಾಗಿ ಮಾತನಾಡಿದ್ದಾರೆ. ನಾನು ಯಾರ ವಿರುದ್ಧವೂ ಮಾತನಾಡಿಲ್ಲ. ಕೇವಲ ಬಿಎಸ್‌ವೈ ಕುಟುಂಬದ ವಿರುದ್ಧ ಮಾತನಾಡಿದ್ದೇನೆ. ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಪರಿಸ್ಥಿತಿ ವಿವರಿಸಿದೆ ಎಂದು ತಿಳಿಸಿದರು.
ವಿಜಯೇಂದ್ರ ಅವರಿಂದ ವಕ್ಫ್ ಜನಾಂದೋಲನ ಕುರಿತು ಮಾತನಾಡಿ, ಪಾಪಾ ಅವರು ಹೋಗಿ ಜನರ ಕಷ್ಟ ನೋಡಲಿ. ರೈತರು, ಜನರ ಕಷ್ಟವನ್ನು ಅರಿಯುವ ಕೆಲಸ ಮಾಡಲಿ. ನಾವು ಈಗಾಗಲೇ ದಾಖಲೆ ನೀಡಿದ್ದೇವೆ. ನಾವು ಹೊಂದಾಣಿಕೆ ಮಾಡಿಕೊಳ್ಳದೆ ಕೆಲಸ ಮಾಡಿದ್ದೇವೆ. ಎಲ್ಲ ದಾಖಲೆಗಳನ್ನು ಸಂಗ್ರಹಿಸಿ ನೀಡಿದ್ದೇವೆ ಎಂದರು.