ಸಂಸತ್‌ ಚಳಿಗಾಲದ ಅಧಿವೇಶನ – ಸುಗಮ ಕಲಾಪಕ್ಕೆ ವಿಪಕ್ಷಗಳಿಗೆ ಮೋದಿ ಮನವಿ

Public TV
3 Min Read
Narendra Modi 3

– ಜನರಿಂದ ತಿರಸ್ಕರಿಲ್ಪಟ್ಟವರಿಂದ ಹಿಡಿತ ಸಾಧಿಸಲು ನಿರಂತರ ಪ್ರಯತ್ನ ಎಂದ ಪ್ರಧಾನಿ

ನವದೆಹಲಿ: ಜನರಿಂದ ಪದೇ ಪದೇ ತಿರಸ್ಕರಿಸಲ್ಪಟ್ಟವರು ಸಂಸತ್ತು ಹಾಗೂ ಪ್ರಜಾಪ್ರಭುತ್ವವನ್ನು ಅಗೌರವಿಸುತ್ತಾರೆ ಎಂದು ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ (Narendra Modi) ಸುಗಮ ಕಲಾಪಕ್ಕೆ ವಿಪಕ್ಷಗಳಿಗೆ ಮನವಿ ಮಾಡಿದರು.

ಇಂದಿನಿಂದ (ನ.25) ಸಂಸತ್ತಿನ ಚಳಿಗಾಲದ ಅಧಿವೇಶನ (Parliament Winter Session) ಪ್ರಾರಂಭವಾಗುತ್ತಿದ್ದು, ಎನ್‌ಡಿಎ (NDA) ಮೈತ್ರಿಕೂಟ ಮತ್ತು ವಿಪಕ್ಷಗಳ ಇಂಡಿಯಾ (INDIA) ಮೈತ್ರಿಕೂಟ ನಡುವೆ ಭಾರೀ ವಾಕ್ಸಮರಕ್ಕೆ ವೇದಿಕೆಯಾಗುವ ಎಲ್ಲಾ ಸಾಧ್ಯತೆಗಳಿವೆ. ಅಧಿವೇಶನ ಆರಂಭಕ್ಕೂ ಮುನ್ನ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ ಆರೋಗ್ಯಕರ ಚರ್ಚೆಗಳಿಗೆ ಮನವಿ ಮಾಡಿದರು. ಇದನ್ನೂ ಓದಿ: ಲಿವ್‌-ಇನ್‌ ಗೆಳತಿಯನ್ನ ಸುಟ್ಟು ಕೊಂದು ಬೆಂಕಿ ಅವಘಡ ಅಂತ ನಾಟಕವಾಡಿದ್ದ ಉದ್ಯಮಿ ಅಂದರ್‌

New Parliament

ಕಾಂಗ್ರೆಸ್‌ ಜನರ ಸಮಸ್ಯೆಗಳ ಬಗ್ಗೆ ಮಾತನಾಡುವುದೇ ಕಡಿಮೆ. ಪದೇ ಪದೇ ಜನರಿಂದ ತಿರಸ್ಕಾರಗೊಂಡವರು ಗೂಂಡಾಗಿರಿ ಮೂಲಕ ಸಂಸತ್ತಿನ ಮೇಲೆ ಹಿಡಿತ ಸಾಧಿಸಲು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ. ಅಧಿವೇಶನದಲ್ಲಿ ಎಲ್ಲಾ ವಿಚಾರಗಳ ಕುರಿತು ಚರ್ಚೆಗೆ ಅವಕಾಶ ಮಾಡಿಕೊಡಲಾಗುತ್ತದೆ. ಜನರ ಸಮಸ್ಯೆಗಳ ಪ್ರಾಮಾಣಿಕ ಚರ್ಚೆ ನಡೆಸಬೇಕಿದೆ. ಹೀಗಾಗಿ, ಎಲ್ಲರೂ ಕಲಾಪದಲ್ಲಿ ಭಾಗಿಯಾಗಬೇಕು, ಸುಗಮ ಕಲಾಪಕ್ಕೆ ಅವಕಾಶ ಮಾಡಿಕೊಡಬೇಕೆಂದು ಹೇಳಿದರು. ಇದನ್ನೂ ಓದಿ: ಗಲ್ಫ್, ಸಿಂಗಾಪುರಕ್ಕೆ ಹೋಲಿಸಿದರೆ ಭಾರತದಲ್ಲಿ ಚಿನ್ನ ಅಗ್ಗವಾಗಿರಲು ಕಾರಣವೇನು?

2024 ವರ್ಷದ ಕೊನೆಯ ದಿನಗಳು ನಡೆಯುತ್ತಿದ್ದು, ದೇಶವು 2025ರ ನೂತನ ವರ್ಷಕ್ಕೆ ತಯಾರಿ ನಡೆಸುತ್ತಿದೆ. ಸಂಸತ್ತಿನ ಈ ಅಧಿವೇಶನವು ಹಲವಾರು ವಿಧಗಳಲ್ಲಿ ವಿಶೇಷವಾಗಿದೆ. ಅತ್ಯಂತ ಮುಖ್ಯ ವಿಷಯವೆಂದರೆ ಸಂವಿಧಾನದ 75ನೇ ವರ್ಷದ ಆರಂಭ. ನಾಳೆ, ಸಂವಿಧಾನ ದಿನ. ಎಲ್ಲರೂ ಸಂವಿಧಾನದ 75 ನೇ ವರ್ಷವನ್ನು ಆಚರಿಸುತ್ತಾರೆ. 75ನೇ ವರ್ಷದ ಸಂವಿಧಾನದ ದಿನದ ಸಂದರ್ಭದಲ್ಲಿ ಅಧಿವೇಶನ ನಡೆಯುತ್ತಿದ್ದು, ಈ ಅಧಿವೇಶನದ ಕಲಾಪ ಸುಗಮವಾಗಿ ಸಾಗಲು ವಿರೋಧ ಪಕ್ಷಗಳು ಅನುವು ಮಾಡಿಕೊಡಬೇಕೆಂದು ಮನವಿ ಮಾಡಿದರು.

narendra modi parliament

ಸಂಸತ್ತು ಮತ್ತು ನಮ್ಮ ಸಂಸದರು ನಮ್ಮ ಸಂವಿಧಾನದ ಪ್ರಮುಖ ಭಾಗಗಳು. ಸಂಸತ್ತಿನಲ್ಲಿ ಆರೋಗ್ಯಕರ ಚರ್ಚೆಗಳು ನಡೆಯಬೇಕು ಮತ್ತು ಹೆಚ್ಚು ಹೆಚ್ಚು ಜನರು ಚರ್ಚೆಗಳಲ್ಲಿ ಪಾಲ್ಗೊಳ್ಳಬೇಕು. ಸಂಸತ್ತಿನಲ್ಲಿ ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕು. ಆದ್ರೆ ಕೆಲವರು ತಮ್ಮ ರಾಜಕೀಯ ಲಾಭಕ್ಕಾಗಿ ಬೆರಳೆಣಿಕೆಯ ಜನರ ನಡುವೆ ಗೂಂಡಾಗಿರಿ ಸೃಷ್ಟಿಸುವ ಮೂಲಕ ಸಂಸತ್ತನ್ನು ನಿಯಂತ್ರಿಸಲು ನಿರಂತರವಾಗಿ ಪ್ರಯತ್ನಿಸುತ್ತಿದ್ದಾರೆ ಎಂದು ಕುಟುಕಿದರು. ಇದನ್ನೂ ಓದಿ: ಮಧ್ಯಪ್ರದೇಶ | ಗೆಳೆಯನಿಗೆ ಥಳಿಸಿ 15 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಟ್ರಕ್ ಚಾಲಕ

ಭಾರತದ ಮತದಾರರು ಪ್ರಜಾಪ್ರಭುತ್ವಕ್ಕೆ ಸಮರ್ಪಿತರಾಗಿದ್ದಾರೆ, ಸಂವಿಧಾನ ಹಾಗೂ ಸಂಸದೀಯ ಕಾರ್ಯ ವ್ಯವಸ್ಥೆಯಲ್ಲಿ ಅವರಿಗೆ ನಂಬಿಕೆ ಇದೆ. ಸಂಸತ್ತಿನಲ್ಲಿ ಕುಳಿತಿರುವ ನಾವೆಲ್ಲರೂ ಜನರ ಭಾವನೆಗಳಿಗೆ ಅನುಗುಣವಾಗಿ ಬದುಕಬೇಕು ಮತ್ತು ಇದು ಈ ಸಮಯದ ಅಗತ್ಯವೂ ಆಗಿದೆ. ಅದನ್ನು ಸರಿದೂಗಿಸಲು ಇರುವ ಏಕೈಕ ಮಾರ್ಗವೆಂದರೆ ನಾವು ಪ್ರತಿ ವಿಷಯದ ವಿವಿಧ ಅಂಶಗಳನ್ನು ಸದನದಲ್ಲಿ ಅತ್ಯಂತ ಆರೋಗ್ಯಕರ ರೀತಿಯಲ್ಲಿ ಎತ್ತಿ ತೋರಿಸುವುದು ಎಂದು ಸಲಹೆ ನೀಡಿದ್ದಾರೆ.

ಸಂಸತ್ತಿನ ಸಮಯದ ಪರಿಣಾಮಕಾರಿ ಬಳಕೆ ಅವರ ನಡವಳಿಕೆಯ ಮೇಲೆ ಅವಲಂಬಿತವಾಗಿದೆ. ಆದ್ದರಿಂದ ಚಳಿಗಾಲದ ಅಧಿವೇಶನವು ಫಲಪ್ರದವಾಗಲಿ ಮತ್ತು ಭಾರತದ ಜಾಗತಿಕ ಸ್ಥಾನಮಾನಕ್ಕೆ ಉತ್ತೇಜನ ನೀಡುವಂತಾಗಲಿ ಎಂದು ನುಡಿದರು. ಇದನ್ನೂ ಓದಿ: ಇಂದಿನಿಂದ ಸಂಸತ್‌ ಚಳಿಗಾಲದ ಅಧಿವೇಶನ – ಅದಾನಿ ಹಗರಣ, ವಕ್ಫ್, ಮಣಿಪುರ ಗದ್ದಲ ಅಸ್ತ್ರ ಪ್ರಯೋಗ

ಇಂದಿನಿಂದ (ನ.25) ಸಂಸತ್ತಿನ ಚಳಿಗಾಲದ ಅಧಿವೇಶನ ಪ್ರಾರಂಭವಾಗಲಿದೆ. ನ.25ರ ಸೋಮವಾರದಂದು ಸಂಸತ್ತಿನ ಚಳಿಗಾಲ ಅಧಿವೇಶನಕ್ಕೆ ಚಾಲನೆ ಸಿಗಲಿದ್ದು, ಡಿ.20ರ ವರೆಗೆ ಕಲಾಪ ನಡೆಯಲಿದೆ. ಅಧಿವೇಶನದಲ್ಲಿ ಒಟ್ಟು 16 ಮಸೂದೆ ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ ನಡೆಸಿದೆ. ಇವುಗಳ ಪೈಕಿ ವಕ್ಫ್ (Waqf) ತಿದ್ದುಪಡಿ ಮಸೂದೆ ಮಂಡಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

Share This Article