– ಅಲ್ಲಾ ಹೆಸರಿನಲ್ಲಿ ಬಲ್ಕಿಸ್ ಬಾನು ಪ್ರಮಾಣ ವಚನ ಸ್ವೀಕಾರ
– ಸಿ.ಟಿ ರವಿಗೆ ಕಿವಿ ಹಿಂಡಿ, ಬೆನ್ನು ತಟ್ಟಿದ ಸಿದ್ದರಾಮಯ್ಯ
ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನೂತನವಾಗಿ ಆಯ್ಕೆಯಾದ 17 ಮಂದಿ ವಿಧಾನ ಪರಿಷತ್ ಸದಸ್ಯರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ನೂತನ ಶಾಸಕರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಶಿಕ್ಷಕ ಮತ್ತು ಪದವೀಧರ ಕ್ಷೇತ್ರದಿಂದ ಆಯ್ಕೆಯಾದ 17 ಜನ ಪರಿಷತ್ ಸದಸ್ಯರು ಪ್ರಮಾಣ ವಚನ ಸ್ವೀಕರಿಸಿದರು. ಇದನ್ನೂ ಓದಿ: Parliament Session: ಸಂಸದರಾಗಿ ಮೋದಿ, ಹಂಗಾಮಿ ಸ್ಪೀಕರ್ ಆಗಿ ಭರ್ತೃಹರಿ ಮಹತಾಬ್ ಪ್ರಮಾಣ ವಚನ ಸ್ವೀಕಾರ
ವೇದಿಕೆ ಕಾರ್ಯಕ್ರಮಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಅವರು, ನೂತನ ಪರಿಷತ್ ಸದಸ್ಯರನ್ನ ಮಾತನಾಡಿಸಿ ಕುಶಲೋಪರಿ ವಿಚಾರಿಸಿದರು. ನಂತರ ನಡೆದ ಕಾರ್ಯಕ್ರಮದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು ಸಚಿವ ಹೆಚ್.ಕೆ ಪಾಟೀಲ್ ವೇದಿಕೆಯಲ್ಲಿದ್ದರು. ಇದನ್ನೂ ಓದಿ: ಸ್ಫೋಟಕ ಟ್ವಿಸ್ಟ್ – ಸೂರಜ್ ರೇವಣ್ಣ ಪರ ದೂರು ನೀಡಿದ್ದ ದೂರುದಾರನೇ ನಾಪತ್ತೆ!
ಅಲ್ಲಾ ಹೆಸರಿನಲ್ಲಿ ಬಲ್ಕಿಸ್ ಬಾನು ಪ್ರಮಾಣ ವಚನ ಸ್ವೀಕಾರ:
ನೂತನ ಪರಿಷತ್ ಸದಸ್ಯರಾದ ಬೋಸರಾಜು, ಗೋವಿಂದರಾಜ್ (ಕಾಂಗ್ರೆಸ್), ಐವಾನ್ ಡಿಸೋಜ (ಕಾಂಗ್ರೆಸ್), ಜವರಾಯಿಗೌಡ (ಜೆಡಿಎಸ್), ಎಂ.ಜಿ. ಮೂಳೆ (ಬಿಜೆಪಿ), ಯತೀಂದ್ರ ಸಿದ್ದರಾಮಯ್ಯ (ಕಾಂಗ್ರೆಸ್), ಸಿ.ಟಿ ರವಿ (ಬಿಜೆಪಿ), ರವಿಕುಮಾರ್ (ಬಿಜೆಪಿ), ವಸಂತ್ ಕುಮಾರ್ (ಕಾಂಗ್ರೆಸ್), ಡಾ.ಚಂದ್ರಶೇಖರ ಪಾಟೀಲ್ (ಕಾಂಗ್ರೆಸ್ ಪದವೀಧರ ಕ್ಷೇತ್ರ) ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಇನ್ನೂ ಜಯದೇವ್ ಗುತ್ತೇದಾರ್ (ಕಾಂಗ್ರೆಸ್) ಬುದ್ದ, ಬಸವ, ಅಂಬೇಡ್ಕರ್ ಹೆಸರಿನಲ್ಲಿ ಪ್ರಮಾಣ ಸ್ವೀಕರಿಸಿದರೆ, ಬಲ್ಕಿಸ್ ಬಾನು (ಕಾಂಗ್ರೆಸ್) ಅಲ್ಲಾ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಸಿಎಂ ಕಾಲಿಗೆ ಬಿದ್ದ ಸಿ.ಟಿ ರವಿ:
ಇನ್ನೂ ಸಮಾರಂಭದಲ್ಲಿ, ಪರಿಷತ್ ನೂತನ ಸದಸ್ಯನಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿ.ಟಿ ರವಿ ಬಳಿಕ ಸಿಎಂ ಕಾಲಿಗೆ ನಮಸ್ಕರಿಸಿದರು. ಇದೇ ವೇಳೆ ನಗುಮೊಗದಿಂದಲೇ ಸಿ.ಟಿ ರವಿ ಬೆನ್ನು ತಟ್ಟಿ, ಕಿವಿ ಹಿಂಡಿ ಬೀಳ್ಕೊಟ್ಟರು. ಸಿ.ಟಿ ರವಿ ಪ್ರತಿಜ್ಞಾವಿಧಿ ಸ್ವೀಕಾರದ ವೇಳೆ ಅಭಿಮಾನಿಗಳು ಶಿಳ್ಳೆ ಚಪ್ಪಾಳೆ ಮಳೆಗರೆದರು. `ಜೈ ಶ್ರೀರಾಮ್’ ಘೋಷಣೆ ಕೂಗಿದರು. ಇದನ್ನೂ ಓದಿ: ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣ ಕೇಸ್ – ಪ್ರತ್ಯೇಕ ತನಿಖೆ ಆರಂಭಿಸಿದ ED