ಬೆಂಗಳೂರು: ನೆರೆಯಿಂದ ಅಂಕಪಟ್ಟಿ ಕಳೆದುಕೊಂಡಿರುವ ವಿದ್ಯಾರ್ಥಿಗಳ ನೆರವಿಗೆ ಪಿಯುಸಿ ಬೋರ್ಡ್ ಧಾವಿಸಿದೆ.
ಅಂಕಪಟ್ಟಿ ಕಳೆದುಕೊಂಡ ವಿದ್ಯಾರ್ಥಿಗಳಿಗೆ ಹೊಸದಾಗಿ ಅಂಕಪಟ್ಟಿ ನೀಡಲು ಪಿಯುಸಿ ಬೋರ್ಡ್ ನಿರ್ಧಾರ ಮಾಡಿದೆ. ಈ ಸಂಬಂಧ ಆದೇಶ ಹೊರಡಿಸಿರುವ ಪಿಯುಸಿ ಬೋರ್ಡ್, ಅಂಕಪಟ್ಟಿ ಕಳೆದುಕೊಂಡಿರುವ ವಿದ್ಯಾರ್ಥಿಗಳು ಆಯಾ ಜಿಲ್ಲಾ ಉಪ ನಿರ್ದೇಶಕರ ಕಚೇರಿಗೆ ಹೋಗಿ ಹೊಸ ಅಂಕಪಟ್ಟಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ನಂತರ ಹೊಸ ಅಂಕಪಟ್ಟಿ ನೀಡಲಾಗುತ್ತೆ ಎಂದು ಬೋರ್ಡ್ ತಿಳಿಸಿದೆ.
Advertisement
Advertisement
Advertisement
ನೆರೆ ಜಿಲ್ಲೆಗಳಲ್ಲಿ ಪ್ರಥಮ ಪಿಯುಸಿಗೆ ದಾಖಲಾತಿಯಾಗುವ ದಿನಾಂಕವನ್ನು ಆಗಸ್ಟ್ 23ವರೆಗೂ ದಿನಾಂಕ ವಿಸ್ತರಣೆ ಮಾಡಿದೆ. ಇದರ ಜೊತೆಗೆ ನೆರೆ ಜಿಲ್ಲೆಗಳ ಶೈಕ್ಷಣಿಕ-ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಪಿಯುಸಿ ಬೋರ್ಡ್ ಸಮಿತಿಗಳ ನೇಮಕ ಮಾಡಿದೆ.
Advertisement
ಜಿಲ್ಲೆಯ ಉಪ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಸಮತಿ ರಚನೆ ಆಗಿದ್ದು, ಸರ್ಕಾರಿ ಹಾಗೂ ಖಾಸಗಿ ಕಾಲೇಜುಗಳ 5 ಜನ ಪ್ರಾಂಶುಪಾಲರು ಸಮಿತಿಯ ಸದಸ್ಯರಾಗಲಿದ್ದಾರೆ. ಈ ಸಮಿತಿ ನೆರೆ ಜಿಲ್ಲೆಗಳ ಶೈಕ್ಷಣಿಕ, ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಿದೆ ಅಂತ ಪಿಯುಸಿ ಬೋರ್ಡ್ ತಿಳಿಸಿದೆ.