ಬೆಂಗಳೂರು: ಇನ್ನು ಮುಂದೆ ಮಕ್ಕಳನ್ನು 1ನೇ ತರಗತಿಗೆ ಸೇರಿಸಲು ಅವರಿಗೆ 6 ವರ್ಷ ತುಂಬಲೇಬೇಕು ಎಂದು ರಾಜ್ಯ ಸರ್ಕಾರ ಹೊಸ ಹಾಗೂ ಮಹತ್ವದ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರ ನೂತನ ವಯೋಮಿತಿ ನಿಗದಿಪಡಿಸಿ, 1ನೇ ತರಗತಿಗೆ ಸೇರುವ ಮಕ್ಕಳಿಗೆ ಜೂನ್ 1ನೇ ತಾರೀಖಿಗೆ ಕಡ್ಡಾಯವಾಗಿ 6 ವರ್ಷ ತುಂಬಬೇಕು ಎಂದು ಸರ್ಕಾರ ತಿಳಿಸಿದೆ. ಇದನ್ನೂ ಓದಿ: ರಾಜ್ಯದಲ್ಲಿಂದು 1,425 ಮಂದಿಗೆ ಕೊರೊನಾ ಸೋಂಕು – ಓರ್ವ ಸಾವು
Advertisement
Advertisement
ಈ ಹಿಂದೆ ಮಕ್ಕಳನ್ನು 1ನೇ ತರಗತಿಗೆ ಸೇರಿಸಲು 5 ವರ್ಷ, 5 ತಿಂಗಳು ಹಾಗೂ 5 ವರ್ಷ 10 ತಿಂಗಳು ಆಗಿರಬೇಕು ಎಂಬ ನಿಯಮವಿತ್ತು. ಇದೀಗ ಆರ್‌ಟಿಇ ಶಿಕ್ಷಣ ಕಾಯ್ದೆ, ಕಡ್ಡಾಯ ಶಿಕ್ಷಣ ನಿಯಮ 2012 ಅನ್ವಯ ಸರ್ಕಾರ ಹೊಸ ವಯೋಮಿತಿಯನ್ನು ನಿಗದಿ ಮಾಡಿದೆ. ಇದನ್ನೂ ಓದಿ: ಟ್ರಯಲ್ ಬ್ಲಾಸ್ಟ್ ನಡೆಸಲು ಮುಂದಾಗಿರುವ ಬೇಬಿಬೆಟ್ಟದ ಆ ಜಾಗ ಮೈಸೂರು ಅರಮನೆಗೆ ಸೇರಿದ್ದು: ಯದುವೀರ್