Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಮಾನ ನಿಲ್ದಾಣದಲ್ಲಿ ಹೊಸ ಪಾರ್ಕಿಂಗ್ ನಿಯಮದಿಂದ ಟ್ಯಾಕ್ಸಿ ಚಾಲಕರಿಗೆ ಸಮಸ್ಯೆ; ಯಥಾಸ್ಥಿತಿ ಕಾಯ್ದುಕೊಳ್ಳಲು ಸಂಸದ ಸುಧಾಕರ್‌ ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿಮಾನ ನಿಲ್ದಾಣದಲ್ಲಿ ಹೊಸ ಪಾರ್ಕಿಂಗ್ ನಿಯಮದಿಂದ ಟ್ಯಾಕ್ಸಿ ಚಾಲಕರಿಗೆ ಸಮಸ್ಯೆ; ಯಥಾಸ್ಥಿತಿ ಕಾಯ್ದುಕೊಳ್ಳಲು ಸಂಸದ ಸುಧಾಕರ್‌ ಸೂಚನೆ

Bengaluru City

ವಿಮಾನ ನಿಲ್ದಾಣದಲ್ಲಿ ಹೊಸ ಪಾರ್ಕಿಂಗ್ ನಿಯಮದಿಂದ ಟ್ಯಾಕ್ಸಿ ಚಾಲಕರಿಗೆ ಸಮಸ್ಯೆ; ಯಥಾಸ್ಥಿತಿ ಕಾಯ್ದುಕೊಳ್ಳಲು ಸಂಸದ ಸುಧಾಕರ್‌ ಸೂಚನೆ

Public TV
Last updated: January 6, 2026 5:33 pm
Public TV
Share
3 Min Read
SUDHAKAR 1
SHARE

– ಖಾಸಗಿ ಟ್ಯಾಕ್ಸಿಗಳ ನಿಲುಗಡೆಗೆ ಅವಕಾಶ ಕಲ್ಪಿಸಲು ಸೂಚಿಸಿದ ಸಂಸದ
– ಖಾಸಗಿ ಚಾಲಕರಿಗೆ ಭರವಸೆ ಮೂಡಿಸಿದ ಸಂಧಾನ ಸಭೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Bengaluru Airport) ಖಾಸಗಿ ಟ್ಯಾಕ್ಸಿ ಚಾಲಕರಿಗೆ ಮೊದಲಿನಂತೆಯೇ ಪಾರ್ಕಿಂಗ್‌ಗೆ ಅವಕಾಶ ಕಲ್ಪಿಸಬೇಕು. ಅದಕ್ಕೆ ಪೂರಕವಾಗಿ ನಿಯಮ ರೂಪಿಸಬೇಕೆಂದು ಸಂಸದ ಡಾ. ಕೆ.ಸುಧಾಕರ್‌ (Dr K.Sudhakar) ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಮೂಲಕ ಟ್ಯಾಕ್ಸಿ ಚಾಲಕರು ಹಾಗೂ ಪ್ರಾಧಿಕಾರದ ನಡುವಿನ ಸಂಧಾನ ಸಭೆ ಸಮಸ್ಯೆ ಬಗೆಹರಿಸುವ ನಿಟ್ಟಿನಲ್ಲಿ ಭರವಸೆ ಮೂಡಿಸಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಖಾಸಗಿ ಟ್ಯಾಕ್ಸಿ ಚಾಲಕರಿಗೆ ಸುಮಾರು 500 ಮೀಟರ್‌ ದೂರದಲ್ಲಿ ನಿಲುಗಡೆ ಕಲ್ಪಿಸಲಾಗಿದೆ. ವಿಮಾನದಿಂದ ಇಳಿದು ಬಂದ ಪ್ರಯಾಣಿಕರು ನಡೆದುಕೊಂಡು ಹೋಗಿ ಟ್ಯಾಕ್ಸಿ ಸೇವೆ ಪಡೆಯಲು ಸಾಧ್ಯವಾಗುತ್ತಿಲ್ಲ. ಪ್ರಾಧಿಕಾರದ ಈ ಹೊಸ ಪಾರ್ಕಿಂಗ್‌ ನಿಯಮದ ವಿರುದ್ಧ ಟ್ಯಾಕ್ಸಿ ಚಾಲಕರು ಪ್ರತಿಭಟನೆ ನಡೆಸಿದ್ದರು. ಟ್ಯಾಕ್ಸಿ ಚಾಲಕರ ಸಂಘದ ಮನವಿಯ ಮೇರೆಗೆ ಮಂಗಳವಾರ ಸಂಸದ ಡಾ.ಕೆ.ಸುಧಾಕರ್‌ ಅವರು ಚಾಲಕರು ಹಾಗೂ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ಮುಳುಗಿದರೆ ಕಾಂಗ್ರೆಸ್, ಅಹಿಂದ ವರ್ಗ ಮುಳುಗುತ್ತೆ: ಹೆಚ್.ಸಿ.ಮಹದೇವಪ್ಪ

ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು ಹಾಗೂ ಸುತ್ತಮುತ್ತಲಿನ ಊರುಗಳ 18 ರಿಂದ 20 ಸಾವಿರ ಯುವಕರು ಟ್ಯಾಕ್ಸಿ ಚಲಾಯಿಸುತ್ತಿದ್ದು, ಇವರನ್ನೇ ನಂಬಿಕೊಂಡು ಸುಮಾರು 1 ಲಕ್ಷ ಕುಟುಂಬ ಸದಸ್ಯರು ಇದ್ದಾರೆ. ಖಾಸಗಿ ಟ್ಯಾಕ್ಸಿ ಮಾಲೀಕರು ಮತ್ತು ಚಾಲಕರು 15-20 ವರ್ಷಗಳಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರಯಾಣಿಕರಿಗೆ ಸೇವೆ ನೀಡುತ್ತಿದ್ದಾರೆ. ಇವರಲ್ಲಿ ಅನೇಕರು ಪ್ರಯಾಣಿಕರ ಜೊತೆ ನೇರ ಸಂಪರ್ಕ ಹೊಂದಿದ್ದು, ಅನೇಕ ವರ್ಷಗಳ ಪರಿಚಯದ ಮೂಲಕ ಸೇವೆ ನೀಡುತ್ತಿದ್ದಾರೆ. ಆದರೆ, ಕಳೆದ ಡಿಸೆಂಬರ್‌ 8 ರಿಂದ 500 ಮೀಟರ್‌ ದೂರದಲ್ಲಿ ಚಾಲಕರಿಗೆ ನಿಲುಗಡೆಗೆ ಸ್ಥಳ ನಿಗದಿ ಮಾಡಲಾಗಿದೆ. ಇದರಿಂದ ಸಮಸ್ಯೆ ಹೆಚ್ಚಿದೆ. ಈ ಹಿಂದೆ ನೀಡಿದ್ದ ಸ್ಥಳವನ್ನೇ ಈ ಚಾಲಕರಿಗೆ ನೀಡಬೇಕು. ಖಾಸಗಿ ಕಂಪನಿಗಳು 1,200-1,500 ರೂ. ದರ ನಿಗದಿ ಮಾಡಿದರೆ, ಈ ಚಾಲಕರು ಇನ್ನೂ ಕಡಿಮೆ ದರಕ್ಕೆ ಸೇವೆ ನೀಡುತ್ತಾರೆ. ಆದ್ದರಿಂದ ಇಲ್ಲಿ ಎಲ್ಲರಿಗೂ ಅವಕಾಶ ನೀಡಬೇಕಿದೆ. ನಿಲ್ದಾಣದ ಪಾರ್ಕಿಂಗ್‌ ಸ್ಥಳದಲ್ಲಿ ದಟ್ಟಣೆ ಹೆಚ್ಚುತ್ತಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ ಕನಿಷ್ಠ ಪ್ರಮಾಣದಲ್ಲಿ ಬಳಕೆದಾರರ ಶುಲ್ಕ ಪಡೆದು ಸ್ಥಳ ಬಳಸಿಕೊಳ್ಳಲು ಅವಕಾಶ ಮಾಡಿಕೊಡಬೇಕಿದೆ. ಅಗ್ರಿಗೇಟರ್‌ಗಳು ಎಲ್ಲ ಕಡೆ ಇದ್ದು, ಯಾರ ಸೇವೆ ಬೇಕೆಂದು ಗ್ರಾಹಕರು ತೀರ್ಮಾನ ಮಾಡುತ್ತಾರೆ ಎಂದು ಸಂಸದ ಡಾ.ಕೆ.ಸುಧಾಕರ್‌ ಅಧಿಕಾರಿಗಳಿಗೆ ಹೇಳಿದರು.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಧಾನ ಸಭೆಯಲ್ಲಿ ಖಾಸಗಿ ಟ್ಯಾಕ್ಸಿ ಚಾಲಕರ ಸಮಸ್ಯೆ ಬಗ್ಗೆ ಮನವರಿಕೆ ಮಾಡಿಕೊಡಲಾಗಿದ್ದು, ಒಂದು ವಾರದಲ್ಲಿ ಎಲ್ಲವೂ ಸುಖಾಂತ್ಯವಾಗಲಿದೆ. ಖಾಸಗಿ ಟ್ಯಾಕ್ಸಿ ಚಾಲಕರಲ್ಲಿ ಎಲ್ಲರೂ ಕನ್ನಡಿಗರು ಹಾಗೂ ಸ್ಥಳೀಯ ನಿವಾಸಿಗಳು ಆಗಿದ್ದಾರೆ. ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಚಾಲಕರೇ ಇಲ್ಲಿದ್ದಾರೆ. ಇವರಲ್ಲಿ ಬಹಳಷ್ಟು ಜನರು ವಿಮಾನ ನಿಲ್ದಾಣಕ್ಕಾಗಿ ಜಮೀನು ನೀಡಿದ್ದಾರೆ. ಆದ್ದರಿಂದ ಪ್ರಾಧಿಕಾರವು ಚಾಲಕರ ಜೊತೆ ಸಮನ್ವಯದಿಂದ ವರ್ತಿಸಬೇಕು. ಚಾಲಕರಿಗೆ ತೊಂದರೆಯಾಗದಂತೆ ಮೂರು ನಾಲ್ಕು ದಿನಗಳಲ್ಲಿ ಒಂದು ಪರಿಹಾರ ಕಂಡುಕೊಳ್ಳಬೇಕಿದೆ. ರಾಜ್ಯದ ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಕೂಡ ಸಭೆ ಮಾಡಲಿದ್ದಾರೆ. ನಾನು ಸಹ ಅವರೊಂದಿಗೆ ಖುದ್ದಾಗಿ ಮಾತನಾಡುತ್ತೇನೆ. ಅಗತ್ಯವಿದ್ದರೆ ನಾಗರಿಕ ವಿಮಾನಯಾನ ಸಚಿವರಾದ ಕೆ.ರಾಮಮೋಹನ್ ನಾಯ್ಡು ಅವರಿಗೆ ಮಾಹಿತಿ ನೀಡಿ ಈ ಬಗ್ಗೆ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು. ಇದನ್ನೂ ಓದಿ: ನಾಳೆ ಸಿಎಂ ಸಿದ್ದರಾಮಯ್ಯ ಹಾವೇರಿ ಜಿಲ್ಲಾ ಪ್ರವಾಸ

ಹೋಲಿಕೆ ಸರಿಯಲ್ಲ
ಸುದೀರ್ಘ ಅವಧಿಯಿಂದ ಮುಖ್ಯಮಂತ್ರಿಯಾಗಿ ಅಧಿಕಾರದಲ್ಲಿರುವ ಸಿದ್ದರಾಮಯ್ಯನವರಿಗೆ ನಾನು ಅಭಿನಂದನೆ ತಿಳಿಸುತ್ತೇನೆ. ಆದರೆ ದೇವರಾಜ ಅರಸು ಅವರಿಗೆ ಹೋಲಿಕೆ ಮಾಡಿಕೊಳ್ಳುವುದು ಸರಿಯಲ್ಲ. 2013 ರಲ್ಲಿ ಸಿಎಂ ಸಿದ್ದರಾಮಯ್ಯನವರು ಉತ್ತಮ ಆಡಳಿತ ನೀಡಿದ್ದರು. ಆದರೆ, 2023 ರಿಂದ ನೀಡುತ್ತಿರುವ ಆಡಳಿತ ಜನರಿಗೆ ಸಾಕಾಗಿದೆ. ಸಿದ್ದರಾಮಯ್ಯನವರಿಗೆ ಇನ್ನೂ ಸಿಎಂ ಆಗಿರಬೇಕೆಂಬ ಬಯಕೆ ಇದೆ. ಆದರೆ ಈ ಸರ್ಕಾರ ಹೋಗಲಿ ಎಂದೇ ಜನರು ಬಯಸುತ್ತಿದ್ದಾರೆ. ದೇವರಾಜು ಅರಸು ತಂದ ಸುಧಾರಣೆಗಳನ್ನು ಬೇರೆ ಯಾರೂ ತಂದಿಲ್ಲ. ಅವರು ಬಡವರಿಗೆ ಭೂಮಿ ನೀಡಿದ್ದರು. ಅವರು ನಿಜವಾದ ಬದ್ಧತೆ ಇದ್ದ ಹಿಂದುಳಿದ ವರ್ಗದ ನಾಯಕ. ಅವರ ದಾರಿಯಲ್ಲಿ ಸಿದ್ದರಾಮಯ್ಯನವರು ನಡೆದಿದ್ದರೆ ಚೆನ್ನಾಗಿರುತ್ತಿತ್ತು. ದೇವರಾಜು ಅರಸು ಅವರು ಜನರ ಬದುಕಿಗೆ ಊಟ ನೀಡಿದ್ದರು. ಒಂದು ಹಬ್ಬಕ್ಕೆ ನೀಡುವ ಊಟಕ್ಕೂ ಜೀವನಕ್ಕೆ ನೀಡುವ ಊಟಕ್ಕೂ ವ್ಯತ್ಯಾಸವಿದೆ ಎಂದರು.

TAGGED:bengaluru airportdr. k sudhakarTaxi driversಟ್ಯಾಕ್ಸಿ ಡ್ರೈವರ್ಡಾ. ಕೆ.ಸುಧಾಕರ್‌ಬೆಂಗಳೂರು ಏರ್‌ಪೋರ್ಟ್‌
Share This Article
Facebook Whatsapp Whatsapp Telegram

Cinema news

Mobile video recording
ಬೆಂಗಳೂರು | ನಟಿಯ ಖಾಸಗಿ ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್‌ – ಸ್ನೇಹಿತೆಗೆ ಕಳಿಸಿ ಹಣಕ್ಕೆ ಡಿಮ್ಯಾಂಡ್‌
Cinema Crime Karnataka Latest Sandalwood Top Stories
JC Movie Surya Prakyath
ಫ್ಯಾನ್ಸ್ ಮಧ್ಯೆ ಲಾಂಗ್ ಹಿಡಿದು ಪೋಸ್ – ಜೆಸಿ ಸಿನಿಮಾ ನಟನ ವಿರುದ್ಧ ಸುಮೋಟೊ ಕೇಸ್ ದಾಖಲು
Bengaluru City Cinema Districts Karnataka Latest Sandalwood Top Stories
rohit shetty 1 e1573969461253
ರೋಹಿತ್ ಶೆಟ್ಟಿ ಮನೆ ಮೇಲೆ ಫೈರಿಂಗ್ – ಮತ್ತೆ ಆರು ಜನ ಅರೆಸ್ಟ್, ಈವರೆಗೂ ಒಟ್ಟು 11 ಮಂದಿ ಬಂಧನ
Cinema Crime Latest National Top Stories
yash mother pushpa compound demolition 1
ಯಶ್‌ ತಾಯಿ ಸೈಟ್‌ ವಿವಾದ – ಏಕಪಕ್ಷೀಯ ತೀರ್ಪಿಗೆ ಕೋರ್ಟ್ ತಾತ್ಕಾಲಿಕ ತಡೆ
Cinema Court Districts Hassan Karnataka Latest States Top Stories

You Might Also Like

priyank kharge mohan das pai
Bengaluru City

ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ: ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಮೋಹನ್ ದಾಸ್ ಪೈ ಟಾಂಗ್

Public TV
By Public TV
3 minutes ago
KN Rajanna
Bengaluru City

ಮಹಿಳಾ ಮೀಸಲಾತಿ ಬಂದ್ರೆ ಮಗಳನ್ನೇ ಚುನಾವಣೆಗೆ ನಿಲ್ಲಿಸ್ತೀನಿ: ಕೆ.ಎನ್‌ ರಾಜಣ್ಣ

Public TV
By Public TV
16 minutes ago
CRIME
Crime

ತೀರ್ಥಹಳ್ಳಿ | ಲವ್‌ ಪ್ರಪೋಸ್‌ ಒಪ್ಪದ ಯುವತಿಗೆ ಬಿಯರ್‌ ಬಾಟಲಿಯಲ್ಲಿ ಇರಿದ ಪಾಗಲ್‌ ಪ್ರೇಮಿ!

Public TV
By Public TV
28 minutes ago
araga jnanendra
Latest

ಬಜೆಟ್ ಸಮಯದಲ್ಲಿ ಕಾಂಗ್ರೆಸ್ ಬಣ ಬಡಿದಾಟ ಜಾಸ್ತಿ ಆಗಲಿದೆ – ಆರಗ ಜ್ಞಾನೇಂದ್ರ

Public TV
By Public TV
41 minutes ago
Doddaballapura Police
Chikkaballapur

ಪ್ರತಿಷ್ಟಿತ ವಿವಿ ವಿದ್ಯಾರ್ಥಿನಿ ಹಾಸ್ಟೆಲ್‌ನ 14ನೇ ಮಹಡಿಯಿಂದ ಬಿದ್ದು ಸಾವು!

Public TV
By Public TV
55 minutes ago
indore murder
Crime

ಗರ್ಲ್‌ಫ್ರೆಂಡ್‌ ಕೊಂದು ಆತ್ಮದ ವಶೀಕರಣಕ್ಕೆ ಯತ್ನ – ಮಧ್ಯಪ್ರದೇಶದಲ್ಲೊಂದು ವಿಚಿತ್ರ ಘಟನೆ

Public TV
By Public TV
59 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?