ನವದೆಹಲಿ: ರಾಷ್ಟ್ರಗೀತೆ ಜನಗಣಮನಕ್ಕೆ ಅಡ್ಡಿಪಡಿಸಿದರೆ ಶಿಕ್ಷೆ ವಿಧಿಸುವಂತೆಯೇ, ಇನ್ನು ಮುಂದೆ ವಂದೇ ಮಾತರಂ (Vande Mataram) ಗೀತೆಗೆ ಅಡ್ಡಿಪಡಿಸುವವರಿಗೆ ಮೂರು ವರ್ಷಗಳವರೆಗೆ ಜೈಲುಶಿಕ್ಷೆ ವಿಧಿಸಲಾಗುತ್ತದೆ.
ಈ ಬಗ್ಗೆ ಮಳೆಗಾಲದ ಸಂಸತ್ ಅಧಿವೇಶನದಲ್ಲಿ (Monsoon Parliament Session) ಕೇಂದ್ರ ಸರ್ಕಾರ ಮಂಡಿಸಲಿರುವ ವಿಧೇಯಕದಲ್ಲಿ ಪ್ರಸ್ತಾವನೆ ಇದೆ. ಗೃಹ ಸಚಿವ ಅಮಿತ್ ಶಾ ಅವರು ರಾಷ್ಟ್ರೀಯ ಗೌರವಕ್ಕೆ ಅವಮಾನ ತಡೆ ವಿಧೇಯಕ-2026 ಅನ್ನು ಪರಿಶೀಲನೆ ಮತ್ತು ಅಂಗೀಕಾರಕ್ಕಾಗಿ ರಾಜ್ಯಸಭೆ ಕಾರ್ಯಸೂಚಿಯಲ್ಲಿ ಪಟ್ಟಿ ಮಾಡಿದ್ದರು. ಇದೀಗ ವಿಧೇಯಕವನ್ನು ಸದನದಲ್ಲಿ ಮಂಡಿಸಲಿದ್ದಾರೆ. ಇದನ್ನೂ ಓದಿ: ಚಾಮುಂಡಿ ಬೆಟ್ಟಕ್ಕೆ ಬಸ್‌ನಲ್ಲೇ ಪ್ರಯಾಣಿಸಿದ ಸಚಿವ ಯತೀಂದ್ರ ಸಿದ್ದರಾಮಯ್ಯ
ಈ ವಿಧೇಯದ ಪ್ರಕಾರ, ಉದ್ದೇಶಪೂರ್ವಕವಾಗಿ ರಾಷ್ಟçಗೀತೆ, ವಂದೇಮಾತರAಗೆ ಅಡ್ಡಿಪಡಿಸಿದರೆ 3 ವರ್ಷಗಳವರೆಗೆ ಜೈಲುಶಿಕ್ಷೆ, ದಂಡ ವಿಧಿಸಬಹುದಾಗಿದೆ. ಸರ್ಕಾರ ಇತ್ತೀಚೆಗಷ್ಟೇ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಹಾಡುವುದನ್ನು ಕಡ್ಡಾಯಗೊಳಿಸಿದೆ. ಇದನ್ನೂ ಓದಿ: ದಿನಸಿ ತರಲು ತೆರಳಿದ್ದ ರಾಷ್ಟ್ರ ಮಟ್ಟದ ಯುವ ಶೂಟರ್ ದಮಯಂತಿ ಸೇನ್ ನಾಪತ್ತೆ
